ದಲಿತ ಸಂಘರ್ಷ ಸಮಿತಿಯ ಹಿರಿಯ ಹೋರಾಟಗಾರ ಹೆಚ್. ಕೆ. ಸಣ್ಣಯ್ಯ ನಿಧನ

ದಲಿತ ಸಂಘರ್ಷ ಸಮಿತಿಯ ವೀರಾಜಪೇಟೆ ತಾಲೂಕಿನಲ್ಲಿ ದಲಿತ ಸಂಘರ್ಷ ಸಮಿತಿಯನ್ನೂ ಹುಟ್ಟು ಹಾಕಿದ ಹಿರಿಯ ಹೋರಾಟಗಾರ ಹಾಗೂ ವಿರಾಜಪೇಟೆಯ ಅಂಬೇಡ್ಕರ್ ಭವನಕ್ಕೆ ಮುಖ್ಯ ಕಾರಣ ಕರ್ತರಾದ, ಹೆಚ್. ಕೆ. ಸಣ್ಣಯ್ಯ (H. K. Sannaiah) ನಿಧನರಾಗಿದ್ದಾರೆ. ಇವರ ಅಂತಿಮ ಸಂಸ್ಕಾರ ವು ನಾಳೆ ಅವರ ಸ್ವಗ್ರಾಮ ಆದ ಹಾಸನ ಜಿಲ್ಲೆಯ ಬೆಳವಾಡಿಯಲ್ಲಿ ನಡೆಯಲಿದ್ದು ಇಂದು ಬೆಂಗಳೂರಿನಿಂದ ಹೊರಟು ಅವರ ವೀರಾಜಪೇಟೆಯ ರಾಮನಗರದ ಸ್ವಂತ ಮನೆಗೆ ಬರಲಿದ್ದು ನಾಳೆ ಬೆಳಿಗ್ಗೆ ಹುಟ್ಟೂರಿಗೆ ಪ್ರಾರ್ಥಿರ್ವ ವನ್ನು ರವಾನಿಸಲಾಗುತ್ತದೆ, ನಾಳೆ ಅಂತ್ಯಕ್ರಿಯೆ […]
ಮಡಿಕೇರಿ ಭಾಗಮಂಡಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ, ತೀರ್ಥಕ್ಷೇತ್ರ ತಲಕಾವೇರಿ-ಭಾಗಮಂಡಲ (Bhagamandala) ಸಂಪರ್ಕಿಸುವ ಮಡಿಕೇರಿ (Madikeri) ಭಾಗಮಂಡಲ ಮುಖ್ಯರಸ್ತೆಯ ಅಪ್ಪಂಗಳ-ಬೆಟ್ಟಗೇರಿ ಭಾಗದಲ್ಲಿ ರಸ್ತೆ ಹದಗೆಟ್ಟಿರುವುದನ್ನು ಮನಗಂಡ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್ ಪೊನ್ನಣ್ಣ (A. S. Ponnanna) ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ತಂದು, ಸುಮಾರು ₹4 ಕೋಟಿ ವೆಚ್ಚದಲ್ಲಿ ಅಪ್ಪಂಗಳ ಜಂಕ್ಷನ್ ನಿಂದ ಬೆಟ್ಟಗೇರಿ ತನಕದ ರಸ್ತೆಯ ಪುನರ್ ನಿರ್ಮಾಣ ಕಾರ್ಯಕ್ಕೆ ಇಂದು ಭೂಮಿ ಪೂಜೆ ನೆರವೇರಿಸಿದರು. ದಿನವೊಂದಕ್ಕೆ ಸಾವಿರಾರು ಭಕ್ತಾದಿಗಳು ಹಾಗೂ […]
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್: ವಿಚಾರಣೆಗೆ ಹಾಜರಾದ ತೆನ್ನಿರ ಮೈನಾ

ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಕೊಡಗು ಮೂಲದ ಬಿಜೆಇಪ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ (Thennira Maheena) ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗಲು ಬೆಂಗಳೂರಿನ ಹೆಣ್ಣೂರು ಪೊಲೀಸರು ನೊಟೀಸ್ ನೀಡಿದ್ದರು. ಅದರಂತೆ ಠಾಣೆಯ ಇನ್ಸ್‌ಪೆಕ್ಟರ್ ಎದುರು ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿ ಕೊಡಗು ಮೂಲದ ವಿನಯ್ ಸೋಮಯ್ಯ ನವರು ಏಪ್ರಿಲ್ 4 ರಂದು ಮುಂಜಾನೆ ನಾಗವಾರದದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ […]
ಲೋಕ ಕಲ್ಯಾಣಕ್ಕಾಗಿ ಕೊಡಗಿನಲ್ಲಿ ಜಪಯಜ್ಞ – ಸಹಸ್ರ ಮೋದಕಗಳಿಂದ ಮಹಾಗಣಪತಿ ಹೋಮ

ಮಡಿಕೇರಿ : ಜೀವನದಿ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಸನ್ನಿಧಿಯಲ್ಲಿ ಮೇ೧೧ ರಿಂದ ಅತಿರುದ್ರ ಜಪಯಜ್ಞ ಆರಂಭಗೊಂಡಿದೆ. ಬೆಳಗ್ಗೆ ೬.೩೦ಕ್ಕೆ ಜಪಯಜ್ಞದೊಂದಿಗೆ ಧಾರ್ಮಿಕ ಕಾರ್ಯ ಆರಂಭವಾಗಿದ್ದು, ಬಳಿಕ ಸಹಸ್ರ ಮೋದಕಗಳಿಂದ ಶ್ರೀ ಮಹಾಗಣಪತಿ ಹೋಮ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ವೇ.ಬ್ರ. ಪ್ರಶಾಂತ್ ಆಚಾರ್ಯ ನೇತೃತ್ವದಲ್ಲಿ ಪೂಜಾ ಕಾರ್ಯ ನಡೆಯುತ್ತಿದೆ. ಮೇ ೧೧ರಿಂದ ೨೧ರವರೆಗೆ ನಡೆಯುವ ಜಪಯಜ್ಞಕ್ಕೆ ರಾಜ್ಯದೆಲ್ಲೆಡೆಯಿಂದ ೫೦ಕ್ಕೂ ಅಧಿಕ ಋತ್ವಿಜರು ಆಗಮಿಸಲಿದ್ದಾರೆ. ಅವಧೂತರಾದ ಶ್ರೀ ಶ್ರೀ ಶ್ರೀ ಕಾಂತಾನಂದ ಸರಸ್ವತಿ ಮಹಾರಾಜರು ಸಂಕಲ್ಪಿಸಿರುವ […]
ಕೊಡಗು ಜಿಲ್ಲಾ ವಿಶೇಷಚೇತನರ ಸಂಘದ ಮಹಾಸಭೆ ಮೇ ೧೪ಕ್ಕೆ

ಮಡಿಕೇರಿ : ಕೊಡಗು ಜಿಲ್ಲಾ ವಿಶೇಷಚೇತನರ ಸಂಘದ ವಾರ್ಷಿಕ ಮಹಾಸಭೆಯು ಮೇ ೧೪ ರಂದು ಮಡಿಕೇರಿಯಲ್ಲಿ(madikeri) ನಡೆಯಲಿದೆ. ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರಸಭಾ ಆವರಣದಲ್ಲಿರುವ ಸಂಘದ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸರ್ವ ಸದಸ್ಯರು ಸಭೆಗೆ ಹಾಜರಾಗುವಂತೆ ಸಂಘದ ಅಧ್ಯಕ್ಷ ಜೆ.ಎ.ಮಹೇಶ್ವರ್ ತಿಳಿಸಿದ್ದಾರೆ.
ಮುಂಗಾರಿಗೆ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮ ವಹಿಸಿ: ಜಿಲ್ಲಾಧಿಕಾರಿ

ಮುಂಗಾರು ಸಂಬಂಧ ನೋಡಲ್ ಅಧಿಕಾರಿಗಳು ಹಾಗೂ ಎಂಜಿನಿಯರ್‍ಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಆದ್ದರಿಂದ ವ್ಯಾಪಕ ಮಳೆಯಿಂದ ಸಂಭವಿಸಬಹುದಾದ ಅನಾಹುತವನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದರು. ಮುಂಗಾರು ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ, […]
ಅಮೃತ ಯುವ ಮೊಗೇರ ವತಿಯಿಂದ 3ನೇ ವರ್ಷದ ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ ಪಂದ್ಯ

ಅಮೃತ ಯುವ ಮೊಗೇರ ಸಿದ್ದಾಪುರ ಅಮ್ಮತಿ ಹೋಬಳಿ ಇವರ ವತಿಯಿಂದ ತೃತೀಯ ಬಾರಿಗೆ ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ (Mogera cricket) ಪಂದ್ಯವು ಮೇ 17 ಹಾಗೂ18 ರಂದು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆಯಲಿದೆ. ಮೊಗೇರ ಬಾಂಧವರಿಗೆ ಮಾತ್ರ ಅವಕಾಶ ಇದ್ದು ಒಟ್ಟು 40 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಪಂದ್ಯದ ಶುಲ್ಕ 3,000 ನಿಗದಿ ಪಡಿಸಲಾಗಿದ್ದು ಕ್ರೀಡಾ ಕೂಟದ ವಿನ್ನರ್ಸ್ ತಂಡಕ್ಕೆ 33,333 ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 22,222 ನಗದು […]
ನಾಳೆ ಕೊಡಗಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಕುಶಾಲನಗರ ಪುರಸಭೆ ವ್ಯಾಪ್ತಿಯ KSRTC ಬಸ್ ನಿಲ್ದಾಣದ ಮುಂಭಾಗದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್‍ನ್ನು (Indira Canteeen) ಮೇ, 10 ರಂದು ಬೆಳಗ್ಗೆ 11.30 ಗಂಟೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಅವರು ಸಾರ್ವಜನಿಕರ ಉಪಯೋಗಕ್ಕೆ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಮಸ್ತ ನಾಗರಿಕರು ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕುಶಾಲನಗರ ಪುರಸಭೆ ಅಧ್ಯಕ್ಷರು ಕೋರಿದ್ದಾರೆ.
ಕೆ.ಎಂ.ಎ. ವತಿಯಿಂದ ಕುಪ್ಪಂದಿರ ಕೆ.ಯೂಸುಫ್ ಹಾಜಿಗೆ ಬೀಳ್ಕೊಡುಗೆ

ಪ್ರಪಂಚದಾದ್ಯಂತದ ವೈವಿಧ್ಯಮಯ ಭಾಷೆಗಳ, ವಿವಿಧ ವರ್ಣಗಳ ಮತ್ತು ವಿವಿಧ ಆರ್ಥಿಕ ವರ್ಗಗಳ ಜನರು ಒಟ್ಟು ಸೇರುವ ಪವಿತ್ರ ಹಜ್ ಯಾತ್ರೆಯು ಯಾತ್ರಾರ್ಥಿಗಳಲ್ಲಿ ಏಕತೆ ಮತ್ತು ಸಮಾನತೆಯ ಭಾವನೆ ಮೂಡಿಸುತ್ತದೆ. ಒಂದೇ ಸಮಯದಲ್ಲಿ ಮತ್ತು ಒಂದೇ ಸ್ಥಳದಲ್ಲಿ ಒಬ್ಬನೇ ಸರ್ವಶಕ್ತನನ್ನು ಆರಾಧಿಸುವ ಈ ಹಜ್ಜ್ ನಿರ್ವಹಣೆ ವಿಶ್ವಾಸಿಗಳ ಜೀವನದ ಬಹುದೊಡ್ಡ ಆಧ್ಯಾತ್ಮಿಕ ಅನುಭವವಾಗಿದೆ. ಆಧ್ಯಾತ್ಮಿಕ ಉತ್ಕರ್ಷ, ಸಮಾನತೆ, ಸಹೋದರತೆಗಳನ್ನು ಬೆಳೆಸಿ ಮುಂದಿನ ಕೆಡುಕು ರಹಿತ ಬದುಕು ಮತ್ತು ಆತ್ಮ ಪರಿಶುದ್ಧತೆಯನ್ನು ಏಕೀಕರಿಸುವುದರಲ್ಲಿ ಹಜ್ಜ್ ಬಹು ದೊಡ್ಡ ಪಾತ್ರ ವಹಿಸುತ್ತದೆ […]
ಜಲಜೀವನ್ ಮಿಷನ್ ಯೋಜನೆ ಜೂನ್ ಅಂತ್ಯದೊಳಗೆ ಪ್ರಗತಿ ಸಾಧಿಸಿ: ಯದುವೀರ್

ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗೆ ಸಂಸದರಾದ ಯದುವೀರ್ (Yaduveer) ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಾಕೀತು ಮಾಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಇದರ ಗಂಭೀರತೆ ಅರ್ಥ ಮಾಡಿಕೊಂಡು ಬಾಕಿ ಇರುವ ಕಾಮಗಾರಿಯನ್ನು […]