ಕೊಡಗಿನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!

ಕೊಡಗು (Kodagu) ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಪ್ರಾರಂಭವಾದಾಗಿನಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂಧಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ, ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ […]
ಕೊಡಗಿನಲ್ಲಿ ಅನಧಿಕೃತವಾಗಿ ನೀರಿನಲ್ಲಿ ಇಳಿಯುವುದು, ಆಟ ಆಡುವುದು ನಿರ್ಬಂಧ

ಮಡಿಕೇರಿ:- ವಿಪತ್ತು ನಿರ್ವಹಣಾ ಕಾಯ್ದೆ, 2005 ಕಲಂ 34(ಸಿ)ರಲ್ಲಿ ಉಲ್ಲೇಖಿಸಿರುವಂತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 152 ಮತ್ತು 163 ರಲ್ಲಿ ದತ್ತವಾದ ಅಧಿಕಾರದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ಜಲಪಾತಗಳು, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಅಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ಅನಧಿಕೃತವಾಗಿ ನೀರಿನಲ್ಲಿ (water) ಇಳಿಯುವುದು, ಮುಳುಗು ಹೊಡೆಯುವುದು, ಸಾಹಸ ಚಟುವಟಿಕೆ ನಡೆಸುವುದು, ಈಜುವುದನ್ನು ಮುಂದಿನ ಆದೇಶದವರೆಗೆ […]
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಕೊಡಗು (Kodagu) ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 126.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 449.84 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 325.40 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 143.30 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 657.83 ಮಿ.ಮೀ, ಕಳೆದ ವರ್ಷ ಇದೇ […]
ಅಮ್ಮತ್ತಿ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾಗಿ ರೆ.ಫಾ.ಮದಲೈ ಮುತ್ತು ಅಧಿಕಾರ ಸ್ವೀಕಾರ

ವಿರಾಜಪೇಟೆ: ಸಮೀಪದ ಅಮ್ಮತ್ತಿಯ (Ammatthi) ಸಂತ ಅಂತೋಣಿ ದೇವಾಲಯದ ಪ್ರಧಾನ ಧರ್ಮಗುರುಗಳಾಗಿ ರೆ. ಫಾ. ಮದಲೈ ಮುತ್ತು ರವರು ರೆ. ಫಾ. ರೈಮಂಡ್ ರವರಿಂದ ಅಧಿಕಾರವನ್ನು ಸ್ವೀಕರಿಸಿದರು. ವಿರಾಜಪೇಟೆ ವಲಯದ ಶ್ರೇಷ್ಠ ಗುರುಗಳು ಹಾಗೂ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿನಿಕ್ ರವರು ಅಧಿಕಾರ ಸ್ವೀಕಾರದ ಧಾರ್ಮಿಕ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ರೆ. ಫಾ. ಮದಲೈ ಮುತ್ತು ರವರು ಕಳೆದ 22 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿಯೇ ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ […]
ಮಾವು ಮತ್ತು ಹಲಸು ಮೇಳಕ್ಕೆ ಜಿಲ್ಲಾಧಿಕಾರಿ ಚಾಲನೆ

ಮಡಿಕೇರಿ:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಹಾಪ್‍ಕಾಮ್ಸ್ ವತಿಯಿಂದ ಮೇ, 26 ರವರೆಗೆ ನಗರದ ಹಾಪ್ ಕಾಮ್ಸ್ ಆವರಣದಲ್ಲಿ ಮಾವು (Mango) ಮತ್ತು ಹಲಸು (jackfruit) ಮೇಳ ನಡೆಯಲಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆಯಾದ ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಸಂಸ್ಥೆ ವತಿಯಿಂದ ನಗರದ ಅಂಚೆ ಕಚೇರಿಯ ಎದುರು ಇರುವ ಹೈಟೆಕ್ ಮಾರಾಟ ಮಳಿಗೆಯ ಆವರಣದಲ್ಲಿ ಮೇ, 26 ರವರೆಗೆ ನಡೆಯುವ […]
Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಮಡಿಕೇರಿ:- ಸೋಮವಾರಪೇಟೆ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾರ್ಗ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಮಾರ್ಗದಲ್ಲಿ ಮೇ, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಯಡೂರು, ತಲ್ತಾರೆಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರುಶೆಟ್ಟಳ್ಳಿ, ಕೂತಿ, ಹೊಸಬೀಡು, ಕಲ್ಕಂದೂರು, ಬಸವನಕಟ್ಟೆ, ನಗರಳ್ಳಿ, ಹೆಮನಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ […]
ಕೇಂದ್ರ ಸಂಸದೀಯ ಸ್ಥಾಯಿ ಸಮಿತಿ ತಂಡ ಭೇಟಿ

ಮಡಿಕೇರಿ:- ಕೇಂದ್ರ ಸಂಸದೀಯ ಸ್ಥಾಯಿ ಸಮಿತಿ (Standing Committee) ತಂಡದ ಸದಸ್ಯರು ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಗುರುವಾರ ಭೇಟಿ ನೀಡಿ ವೀಕ್ಷಿಸಿದರು. ಜನರಲ್ ತಿಮ್ಮಯ್ಯ ಅವರ ಹುಟ್ಟು, ಬೆಳವಣಿಗೆ, ವಿದ್ಯಾಭ್ಯಾಸ, ಸೇನಾ ಕ್ಷೇತ್ರದಲ್ಲಿನ ಸಾಧನೆ, ಮತ್ತಿತರ ಬಗ್ಗೆ ಮಾಹಿತಿ ಪಡೆದರು. ತಂಡದಲ್ಲಿ ಲೋಕಸಭೆ ಮತ್ತು ರಾಜ್ಯ ಸಭೆ ಸದಸ್ಯರು ಇದ್ದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಗೌಡಂಡ ತಿಮ್ಮಯ್ಯ ಅವರು ಜನರಲ್ ತಿಮ್ಮಯ್ಯ ಅವರ ಜೀವನ ಚರಿತ್ರೆ ಕುರಿತು ಮಾಹಿತಿ ನೀಡಿದರು.
ಲೋಕಕಲ್ಯಾಣಕ್ಕಾಗಿ ಕಣಿವೆ ರಾಮನ ಸನ್ನಿಧಿಯಲ್ಲಿ ಕೋಟಿ ಜಪಯಜ್ಞ : ಶ್ರೀ ಶಾಂತಾನಂದ ಮಹಾರಾಜ್ ನೇತೃತ್ವ

ಮಡಿಕೇರಿ: ಕಣಿವೆಯ ಪುರಾಣ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ದೇವಾಲಯದ ಆವರಣದಲ್ಲಿ ಲೋಕ ಕಲ್ಯಾಣದ ಹಿತದೃಷ್ಟಿಯಿಂದ ಶ್ರೀ ಶ್ರೀಕಾಂತಾನಂದ ಸರಸ್ವತಿ ಮಹಾರಾಜ್ ನೇತೃತ್ವದಲ್ಲಿ ಕೋಟಿಗೂ ಅಧಿಕ ರುದ್ರ ಜಪ ಪಾರಾಯಣ ಮಂಗಳವಾರ ರಾತ್ರಿಯಿಂದ ಬುಧವಾರ ಮಧ್ಯಾಹ್ನದವರೆಗೂ ಜರುಗಿತು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಋತ್ವಿಕರು ನಿರಂತರವಾಗಿ ಜಪ ಪಾರಾಯಣ ಮಾಡುವ ಮೂಲಕ ಭಕ್ತಿ ಭಾವ ಮೆರೆದರು. ಇದರ ಅಂಗವಾಗಿ ದೇವಾಲಯದಲ್ಲಿ ಶ್ರೀ ರಾಮಲಿಂಗೇಶ್ವರ ದೇವರಿಗೆ ಬಗೆ ಬಗೆಯ ಪುಷ್ಪಗಳಿಂದ ವಿಶೇಷವಾದ ಅಲಂಕಾರ ಹಾಗೂ ಪೂಜೆ ದೇಗುಲದ ಪ್ರಧಾನ ಅರ್ಚಕ ರಾಘವೇಂದ್ರ […]
ಹೃದಯಘಾತದಿಂದ ಕುಶಾಲನಗರದ ಯುವ ಅರಣ್ಯ ಅಧಿಕಾರಿ ನಿಧನ

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ, ಹೃದಯ ಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಕಾಯಿಲೆ, ಸಾವುಗಳು ಹೆಚ್ಚಾಗಿವೆ. ಕೋವಿಡ್ ಬಳಿಕ ಈ ಬೆಳವಣಿಗೆ ಕಂಡುಬಂದಿದೆ. ಇದೀಗ ಕುಶಾಲನಗರ ಅರಣ್ಯ ವಲಯದ ಅಂದಗೋವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪವಲಯ ಅರಣ್ಯ ಅಧಿಕಾರಿ, ಟಿ. ಕೆ.ದಿನೇಶ್ (37) ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ.
ರಾಜ್ಯಮಟ್ಟದ ಮೊಗೇರ ಕ್ರಿಕೆಟ್ ಕಪ್: ಡೋಮಿನೇಟರ್ ಇಲೆವೆನ್ ಮಾರ್ಗೋಲ್ಲಿ ಚಾಂಪಿಯನ್

ಮಡಿಕೇರಿ- ಮಂಜಿನ ನಗರಿ ಮಡಿಕೇರಿಯಲ್ಲಿ ಅಮೃತ ಯುವ ಮೊಗೇರ ಅಮ್ಮತಿ ಹೋಬಳಿ ಸಿದ್ದಾಪುರ (ರಿ) ಇವರ ವತಿಯಿಂದ 3ನೇ ವರ್ಷದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯದಲ್ಲಿ ಡೋಮಿನೇಟರ್ ಇಲೆವೆನ್ ಮಾರ್ಗೋಳ್ಳಿ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದರೆ ಫ್ರೆಂಡ್ಸ್ ಇಲೆವೆನ್ ಉಡುಪಿ ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು, ನಗರದ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ ಪಂದ್ಯಾಟದಲ್ಲಿ (Mogera Cricket Cup) ಒಟ್ಟು 36 ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು. ಮೊದಲ ಸೆಮಿ ಫೈನಲ್ […]