Yes To Access ಆ್ಯಪ್‍ಗೆ ಜಿಲ್ಲಾಧಿಕಾರಿ ಚಾಲನೆ

District Collector

ಮಡಿಕೇರಿ:- ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಸುಗಮ್ಯ ಯಾತ್ರಾ ಕಾರ್ಯಕ್ರಮದಡಿ ಎಲ್ಲಾ ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು, ಉದ್ಯಾನವನಗಳು, ಗ್ರಂಥಾಲಯಗಳು, ಪ್ರವಾಸಿತಾಣಗಳಲ್ಲಿ ಅಡೆತಡೆ ರಹಿತ ವಾತಾವರಣ ಒಳಗೊಂಡಿರುವ ಮಾಹಿತಿಯನ್ನು ಕಲೆಹಾಕಿ ವಿಶೇಷ ಚೇತನ ಸ್ನೇಹಿ ವಾತಾವರಣ ಇರುವ ಬಗ್ಗೆ ಸೋಶಿಯಲ್ ಆಡಿಟ್ ಮಾಡಲು ಎಸ್ ಟು ಎಕ್ಸಸ್ (Yes To Access) ಎಂಬ ಮೊಬೈಲ್ ಆ್ಯಪ್‍ನ್ನು ಅಭಿವೃದ್ಧಿ ಪಡಿಸಿದ್ದು ಜಿಲ್ಲೆಯಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಕಟ್ಟಡಗಳ ಸೋಶಿಯಲ್ ಆಡಿಟ್ ಮಾಡುವ ಸಂಬಂಧ ಇಂದು […]

ಮುಂಗಾರು: ಮಡಿಕೇರಿ ನಗರದಲ್ಲಿ ಹೆಚ್ಚಿನ ಎಚ್ಚರ ವಹಿಸಲು ಡಾ.ಮಂತರ್ ಗೌಡ ಸೂಚನೆ

Dr. Mantar Gowda

ಮಡಿಕೇರಿ:- ಮುಂಗಾರು (Monsoon) ಸಂದರ್ಭ ಮಡಿಕೇರಿ (Madikeri) ನಗರದಲ್ಲಿ ಹೆಚ್ಚಿನ ಎಚ್ಚರ ವಹಿಸುವಂತೆ ಶಾಸಕರಾದ ಡಾ.ಮಂತರ್‍ಗೌಡ (Dr. Mantar Gowda) ಅವರು ಸಲಹೆ ಮಾಡಿದ್ದಾರೆ.ನಗರದ ನಗರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ನಗರದ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ವಹಿಸಬೇಕು. ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದರು. ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ರಾಜ ಕಾಲುವೆಯಲ್ಲಿ ಕಸ ಕಡ್ಡಿ ಸೇರದಂತೆ […]

ಮಡಿಕೇರಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ

Dr. Mantar Gowda

ಮಡಿಕೇರಿ:-ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ‘ಇಂದಿರಾ ಕ್ಯಾಂಟೀನ್’ನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ (Dr. Mantar Gowda) ಅವರು ಬುಧವಾರ ಉದ್ಘಾಟಿಸಿದರು. ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ಶಾಸಕರು ಸಲಹೆ ಮಾಡಿದರು. ಹಲವು ವರ್ಷಗಳಿಂದ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕಿತ್ತು. ಆದರೆ ಈಗ ಚಾಲನೆ ನೀಡಲಾಗಿದೆ ಎಂದರು. […]

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ

Field Marshal KM Cariappa College

ಮಡಿಕೇರಿ: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ (Field Marshal KM Cariappa College) ವಾರ್ಷಿಕೋತ್ಸವವು (Anniversary) ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಪ್ರೊ.ಸುರೇಶ ಉದ್ಘಾಟಿಸಿ, ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ಇತ್ತೀಚೆಗೆ ಉದ್ಯೋಗದಲ್ಲಿ ಹಿನ್ನಡೆ ಉಂಟಾಗುತ್ತಿದೆ. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜ್ಜಿರ ಬಿ.ಅಯ್ಯಪ್ಪ ಮಾತನಾಡಿ, ಇತ್ತೀಚಿನ […]

ರಾಜ್ಯದಿಂದ ಆಂಧ್ರಕ್ಕೆ ಆನೆಗಳ ಹಸ್ತಾಂತರ – 3695 ಆನೆ ಸಂಪತ್ತು ರಾಜ್ಯದಲ್ಲಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾನವ ಆನೆ(elephant) ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ನುಡಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ […]

ಕಾರ್ಯಕರ್ತರ ಕಡೆಗಣನೆ ಯುವ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಅನೂಪ್ ಕುಮಾರ್ ರಾಜೀನಾಮೆ

Anup Kumar

ಕೊಡಗು ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರನ್ನು ನಿರಂತರವಾಗಿ ಕಡೆಗಣಿಸುತ್ತಾ, ಪಕ್ಷದ ಯಾವುದೇ ಕಾರ್ಯಕ್ರಮಗಳನ್ನು ಯುವ ಕಾಂಗ್ರೆಸ್ ಮುಖಂಡರು ಮತ್ತು ಪದಾಧಿಕಾರಿಗಳಿಗೆ ತಿಳಿಸುತ್ತಿಲ್ಲ. ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಕೇವಲ ರಾಜಕೀಯವಾಗಿ ಮಾತ್ರ ಬಳಸುತ್ತಿದ್ದಾರೆ. ಕೊಡಗಿನಲ್ಲಿ ಕೆಲವೊಂದು ಹಿರಿಯ ಕಾಂಗ್ರೆಸ್ ಮುಖಂಡರು ಯುವ ಕಾಂಗ್ರೆಸ್ ಮುಖಂಡರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಅನೂಪ್ ಕುಮಾರ್ (Anup Kumar) […]

ಕೊಡಗಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

Wild Elephant

ದೇವರಪುರ ಸಮೀಪದ ದೇವರಕಾಡು ಪೈಸಾರಿ ನಿವಾಸಿ ಅಣ್ಣಯ್ಯ(45) ಎಂಬ ವ್ಯಕ್ತಿ ಸಾವು. ನಿರಂತರ ಕಾಡಾನೆಗಳ ಉಪಟಳದಿಂದ ನಲುಗುತ್ತಿರುವ ಗ್ರಾಮಸ್ಥರು. ಆನೆ ದಾಳಿ ಸಿಲುಕಿ ಸಾವನ್ನಪ್ಪಿದ ಪ್ರಕರಣದ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ (Wild Elephant) ದಾಳಿಯಿಂದ ನಿರಂತರವಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Power Cut: ಕೊಡಗಿನಲ್ಲಿ ನಾಳೆ ಎಲ್ಲೆಲ್ಲಿ ಕರೆಂಟ್ ಇರಲ್ಲ ನೋಡಿ

Power Cut

ಸೋಮವಾರಪೇಟೆ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾರ್ಗ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ, ಯಡೂರು, ತಲ್ತಾರೆಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರುಶೆಟ್ಟಳ್ಳಿ, ಕೂತಿ, ಹೊಸಬೀಡು, ಕಲ್ಕಂದೂರು, ಬಸವನಕಟ್ಟೆ, ನಗರಳ್ಳಿ, ಹೆಮನಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಕೊಡಗು ಎಸ್‌ಪಿ ಸೇರಿ ಮೂವರು ಪೊಲೀಸರಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’

DG-IGP Appreciation Medal

ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಕೊಡಗಿನ (Kodagu) ಪೊಲೀಸ್ ವರಿಷ್ಟಾದಿಕಾರಿ ಕೆ.ರಾಮರಾಜನ್, ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿ ಮುದ್ದು ಮಹದೇವ, ವಿಶೇಷ ಮಕ್ಕಳ ಘಟಕಲ್ಯಾಣಾಧಿಕಾರಿ ಮತ್ತು ಹೆಡ್ ಕಾನ್ಸಟೇಬಲ್, ಸುಮತಿ ಅವರು ಭಾಜನರಾಗಿದ್ದಾರೆ. ಅತ್ಯುತ್ತಮ ಕರ್ತವ್ಯ ನಿವ೯ಹಣೆಗಾಗಿ ರಾಜ್ಯ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳಿಂದ ನೀಡಲ್ಪಡುವ ಪ್ರಶಸ್ತಿ ಇದಾಗಿದೆ. ಈ ಪದಕವನ್ನು ಮೇ 21ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.  

ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ: ಅರಣ್ಯ ಹಕ್ಕು ಅರ್ಜಿಗೆ ಒಪ್ಪಿಗೆ

committee meeting

ಮಡಿಕೇರಿ:-ಅರಣ್ಯ ಹಕ್ಕು ಕಾಯ್ದೆಯಡಿ ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳ ಅರ್ಜಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಅನುಮೋದನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ (Meeting) ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳಿಗೆ ಅನುಮೋದನೆ ನೀಡಲಾಯಿತು. ಈ ಕುರಿತು ಮಾತನಾಡಿದ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು […]