ಸಂವಿಧಾನ ಎಲ್ಲಾ ಕಾನೂನುಗಳ ತಾಯಿ: ನ್ಯಾ. ಎಸ್. ನಟರಾಜ್

ಸಂವಿಧಾನ ಜೀವನದ ಅಂಗವಾಗಿದ್ದು ನಮ್ಮೆಲ್ಲ ಕರ್ತವ್ಯ , ಕೆಲಸಗಳು ಸರಾಗವಾಗಿ ನಡೆಯಲು ಮೂಲಕ ಕಾರಣವೇ ನಮ್ಮ ಸಂವಿಧಾನ ಎಂದು ಎರಡನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ. ಎಸ್. ನಟರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು . ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ , ತಾಲೂಕು ಕಾನೂನು ಸೇವೆಗಳ ಸಮಿತಿ ವಿರಾಜಪೇಟೆ , ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಬುಧವಾರ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು […]
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಾರ್ಷಿಕ ಮಹಾಸಭೆ – ಕೊಡಗು ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಗಿ

ಮಡಿಕೇರಿ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ, ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಂಗಳವಾರ ಮಂಗಳೂರಿನಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್ ರೈ ಪುನರಾಯ್ಕೆಯಾದರು. ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಬಂಟರ ಸಂಘದ ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಬಿ.ಡಿ. ಜಗದೀಶ್ ರೈ ನೇತೃತ್ವದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಜಗದೀಶ್ ರೈ, ಜಾಗತಿಕ ಬಂಟರ ಒಕ್ಕೂಟದಲ್ಲಿ ಕೊಡಗು ಜಿಲ್ಲೆಗೂ ಸ್ಥಾನ ಸಿಕ್ಕಿದೆ. ಇದರಿದಾಗಿ ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಸಮುದಾಯ […]
ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ನವೆಂಬರ್, 26 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ವೇಗವಾಗಿ ಬಂದು ರಸ್ತೆ ಮಧ್ಯೆ ಎರಡು ಪಲ್ಟಿಯಾದ ಪಿಕಪ್..! Video ನೋಡಿ

ಸೋಮವಾರಪೇಟೆ : ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿಯ ನಗರೂರು ಬಳಿ ತಿರುವಿನಲ್ಲಿ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ಸಿಗದೆ ರಸ್ತೆಯಲ್ಲಿ ಪಲ್ಟಿಯಾಗಿದೆ. ಅದರ ಹಿಂಬದಿ ಇದ್ದವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಈ ಘಟನೆ ಇಂದು(ನ.25ರಂದು) ಮಧ್ಯಾಹ್ನ ಸಂಭವಿಸಿದ್ದು, ಆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಕಳುಹಿಸಿಕೊಟ್ಟವರು – ಅವಿಲಾಶ್ ಕಾಜೂರು.
ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಕಾವೇರಿ ಕಾಲೇಜಿಗೆ ಪ್ರಥಮ ಸ್ಥಾನ

ಸೋಮವಾರಪೇಟೆಯಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾಟದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜು ತಂಡವು ಮೊದಲ ಸ್ಥಾನ ಪಡೆದಿದೆ. ಶಹೀಮ್, ಆದರ್ಶ ಬಿದ್ದಪ್ಪ, ಬಸಿತ್, ಅಪ್ಸಲ್, ಮಿರನ್, ಹೃತಿಕ್, ಸಫ್ವಾನ್, ಮತ್ತು ರಿಜ್ವಾನ್ – ಈ ಯುವ ಆಟಗಾರರು ಉತ್ತಮ ಪ್ರದರ್ಶನ ನೀಡಿ ತಂಡಕ್ಕೆ ಪ್ರಥಮ ಬಹುಮಾನ ತಂದುಕೊಟ್ಟಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪ : PWD AEE ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ..!

ಮಡಿಕೇರಿ : ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಮಡಿಕೇರಿಯಲ್ಲೂ ಕೂಡಾ ಪಿಡಬ್ಲ್ಯೂಡಿ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ದಾಳಿಯಾಗಿದೆ. ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಗಿರೀಶ್ ಕಚೇರಿ, ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಡಿಕೇರಿಯಲ್ಲಿನ ಕಚೇರಿ, ಕುಶಾಲನಗರ, ಮೈಸೂರಿನ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆಂದು ಲೋಕಾಯುಕ್ತಕ್ಕೆ ದೂರು ಬಂದ ಹಿನ್ನೆಲೆಯಲ್ಲಿ DYSP ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿಯಾಗಿದೆ.
Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ನವೆಂಬರ್, 25 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 3ನೇ ತ್ರೈಮಾಸಿಕ ನಿರ್ವಾಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಕಣಗಾಲು, ದೊಡ್ಡಳ್ಳಿ, ಗೋಣಿಮರೂರು, ಬಾಣವಾರ, ಸಿದ್ದಲಿಂಗಪುರ, ಮಾಲಂಬಿ, ಹೊಸಗುತ್ತಿ, ಕೈಸರದಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ಹಾಗೆಯೇ 33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಎಫ್1 ಪಾರಾಣೆ […]
ಪೊನ್ನಂಪೇಟೆ : ಕೆರೆಗೆ ಹಾರಿ ಆತ್ಮಹ*ತ್ಯೆಗೆ ಶರಣಾದ ಮಹಿಳೆ..!

ಗೋಣಿಕೊಪ್ಪ : ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತೂಚಮಕೇರಿಯಲ್ಲಿ ನಡೆದಿದೆ. ಮೂಕಳಮಾಡ ಸುರೇಶ್ ಎಂಬವರ ಪತ್ನಿ ಸುಮಿತಾ(48) ಆತ್ಮಹ*ತ್ಯೆಗೆ ಶರಣಾದವರು. ಇಂದು(ಸೋಮವಾರ) ಬೆಳಗ್ಗೆ ಮನೆ ಬಳಿಯ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವು ದಿನಗಳಿಂದ ಸುಮಿತಾ ಅವರು ಮಾನಸಿಕವಾಗಿ ಬಹಳ ನೊಂದಿದ್ದರು ಎನ್ನಲಾಗಿದೆ. ಹೀಗಾಗಿ ಆತ್ಮಹ*ತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಶ್ರೀಮಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವ’ ಕಾರ್ಯಕ್ರಮ

ಮಡಿಕೇರಿ:- ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನರಿಗೆ ಭರವಸೆ ನೀಡಿದಂತೆ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಎಲ್ಲಾ ಜನರಿಗೆ ಒಂದಲ್ಲ ಒಂದು ಸೌಲಭ್ಯಗಳು ತಲುಪುವಂತೆ ಮಾಡುವಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ […]
Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಮಡಿಕೇರಿ: ನವೆಂಬರ್, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಫೀಡರ್‍ನಿಂದ ಹೊರಹೊಮ್ಮುವ ಶನಿವಾರಸಂತೆ ಟೌನ್ ಫೀಡರ್, ಶನಿವಾರಸಂತೆ ಪಟ್ಟಣ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.