ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಏಪ್ರಿಲ್, 25 ರಂದು (ನಾಳೆ) ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಾಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸೋಮವಾರಪೇಟೆ ಕುಸುಬೂರು, ಕಾರೆಕೊಪ್ಪ, ಸಜ್ಜಳ್ಳಿ, ಯಡವಾರೆ, ಹೊಸತೋಟ, ಐಗೂರು, ಗರಗಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಭೂಮಿ ಮತ್ತು ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ನ್ಯಾ. ಎಸ್. ನಟರಾಜ

ಪ್ರಕೃತಿ ಮತ್ತು ಭೂಮಿಯ ರಕ್ಷಿಸಿ ಮುಂದಿನ ಪೀಳಿಗೆಗೆ ನೀಡುವ ಜವಾಬ್ದಾರಿಯು ಭೂಮಿಯ ಮೇಲಿರುವ ಸರ್ವರ ಮೇಲಿದೆ ಎಂದು ಎರಡನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ. ಎಸ್. ನಟರಾಜ ಅಭಿಪ್ರಾಯ ವ್ಯಕ್ತಪಡಿಸಿದರು . ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘ, ಅರಣ್ಯ ಇಲಾಖೆ, ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ ವಿರಾಜಪೇಟೆ ಇವರ ಸಂಯುಕ್ತ ಆಶಯದಲ್ಲಿ ಬುಧವಾರ ವಿಶ್ವ ಭೂ ದಿನಾಚರಣೆಯನ್ನು ಆಚರಿಸಲಾಯಿತು. ಗಿಡಕ್ಕೆ ನೀರನ್ನು ಎರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾ. […]
ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತಿನಿಂದ ಹೊಸ ಭಾಷ್ಯ: ಸಾಧಕರಿಗೆ ಗೌರವಾರ್ಪಣೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಸಾಧಕರಿಗೆ ಪ್ರಶಸ್ತಿಯನ್ನು ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ನ ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು ಮಾಹಿತಿ ನೀಡಿದರು . ವಿರಾಜಪೇಟೆ ಪತ್ರಕರ್ತರ ವೇದಿಕೆಯಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರಿ ನೌಕರರ ಒತ್ತಡವನ್ನು ನಿವಾರಿಸಿ ಅವರಲ್ಲಿರುವ ಮನೋರಂಜನೆಯ ಕೊರತೆಯನ್ನು ಹೋಗಲಾಡಿಸುವುದರೊಂದಿಗೆ ಕನ್ನಡ ನಾಡು, ನುಡಿ ಸಾಹಿತ್ಯ ,ಕಲೆ […]
ನಕ್ಸಲ್ ನಿಗ್ರಹ ಪಡೆ ವತಿಯಿಂದ ಬುಡಕಟ್ಟು ಜನಾಂಗದವರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿರಾಜಪೇಟೆ: ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದಲ್ಲಿನ ವಾಲ್ಮೀಕಿ ಭವನದಲ್ಲಿ ನಕ್ಸಲ್ ನಿಗ್ರಹ ಪಡೆ ವತಿಯಿಂದ ಅತ್ಯಂತ ವ್ಯವಸ್ಥಿತವಾದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿತ್ತು. ನಕ್ಸಲ್ ಪೀಡಿತ ಪ್ರದೇಶಗಳ ಬುಡಕಟ್ಟು ಜನಾಂಗದವರ ಆರೋಗ್ಯ ಹಿತದೃಷ್ಟಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವು ಜನರ ಅಭೂತಪೂರ್ವ ಸ್ಪಂದನೆಯೊAದಿಗೆ ಯಶಸ್ವಿಯಾಯಿತು. ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್, ಅವರ ಸೂಕ್ತ ಮಾರ್ಗದರ್ಶನದಂತೆ, ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕು.ಬಿಂದು ಮಣಿ ಆರ್.ಎನ್, ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, […]
ಸೌತ್ ಇಂಡಿಯನ್ ಓಪನ್ ಕರಾಟೆ ಚಾಂಪಿಯನ್ಶಿಪ್‌ನಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಭವಿತ್ ರೈ

ಮಡಿಕೇರಿ : ಕೇರಳದ ತಿರುವನಂತಪುರದಲ್ಲಿ ನಡೆದ ಸೌತ್ ಇಂಡಿಯನ್ ಓಪನ್ ಕರಾಟೆ ಚಾಂಪಿಯನ್ಶಿಪ್‌ನಲ್ಲಿ ಕೊಡಗಿನ ಭವಿತ್ ರೈ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಕಟಾಸ್‌ನಲ್ಲಿ ಚಿನ್ನ ಹಾಗೂ ಕುಮಟಿಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈತ ಚೆರಂಬಾಣೆಯ ನಿವಾಸಿ ಪ್ರದೀಪ್ ರೈ ಮತ್ತು ಪ್ರಮಿಳ ರೈ ಯವರ ಪುತ್ರ.
ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ವಿರಾಜಪೇಟೆ ವಿದ್ಯುತ್ ವಿತರಣಾ 66/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ 33 ಕೆವಿ ಸಿದ್ದಾಪುರ ಮಾರ್ಗದಲ್ಲಿ ಏಪ್ರಿಲ್, 18 ರಂದು (ನಾಳೆ) ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ, ಸಿದ್ದಾಪುರ, ಕರಡಿಗೋಡು, ಗುಹ್ಯ, ಮಾಲ್ದಾರೆ, ನೆಲ್ಲಿಹುದಿಕೇರಿ, ಇಂಜಿಲಗೆರೆ, ಆರೆಂಜ್‍ಕೌಂಟಿ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.
ಮಡಿಕೇರಿಯಲ್ಲಿ ಹೊಸ ಪ್ರಯೋಗ : ಮಕ್ಕಳ ತಂಡದಿಂದ ಯಕ್ಷಗಾನ ಪ್ರದರ್ಶನ

ಮಡಿಕೇರಿ : ಸ್ಥಳೀಯ ಮಕ್ಕಳಿಂದಲೇ ರೂಪುಗೊಂಡ ಕೊಡಗಿನ ಪ್ರಪ್ರಥಮ ಮಕ್ಕಳ ಯಕ್ಷಗಾನ ತಂಡ ನಡೆಸಿಕೊಟ್ಟ ಎರಡು ಪ್ರಸಂಗಗಳು ಮಡಿಕೇರಿಯ ಮೈತ್ರಿ ಸಮುದಾಯ ಭವನದಲ್ಲಿ ಇತ್ತೀಚೆಗೆ ಯಶಸ್ವಿ ಪ್ರದರ್ಶನ ಕಂಡವು. ಕಲಾಕಾವ್ಯ ನಾಟ್ಯಶಾಲೆ ಪ್ರಸ್ತುತ ಪಡಿಸಿದ ವೀರ ಅಭಿಮನ್ಯು ಮತ್ತು ಶ್ರೀದೇವಿ ಮಹಾತ್ಮೆ ಎಂಬ ಪ್ರಸಂಗವನ್ನು ಪುಟಾಣಿ ಮಕ್ಕಳು ಅಮೋಘವಾಗಿ ಪ್ರದರ್ಶಿಸುವ ಮೂಲಕ ಪ್ರೇಕ್ಷಕರ ಹೃದಯ ಗೆದ್ದರು. ಲೋಕಕಂಟಕನಾದ ಮಹಿಷಾಸುರನನ್ನು ಜಗನ್ಮಾತೆ ಸಂಹರಿಸುವ `ಶ್ರೀದೇವಿ ಮಹಾತ್ಮೆ’ ಪ್ರಸಂಗದಲ್ಲಿ ಮಹಿಷ, ದೇವಿ ಮತ್ತು ಸಿಂಹದ ಪಾತ್ರ ಮನೋಜ್ಞವಾಗಿತ್ತು. ಮಹಿಷಾಸುರ ಮತ್ತು […]
ಹಜ್ಜ್ ಸೂಪರಿಂಟೆಂಡೆಂಟ್ ಆಗಿ ಕುಪ್ಪೋಡಂಡ ಎ. ರಫೀಕ್ ಆಯ್ಕೆ: ಕೆ.ಎಂ.ಎ ನಿಂದ ಗೌರವ

ಪೊನ್ನಂಪೇಟೆ: ಮುಂಬರುವ ಪವಿತ್ರ ಹಜ್ಜ್ ಕಾಲಾವಧಿಯಲ್ಲಿ ಹಜ್ಜ್ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸಲು ಸೌದಿ ಅರೇಬಿಯಾ ದೇಶಕ್ಕೆ ಕರ್ತವ್ಯ ನಿಮಿತ್ತ ತೆರಳುತ್ತಿರುವ ಕರ್ನಾಟಕ ಅಪರಾಧ ತನಿಖೆ ವಿಭಾಗದ (CID) ಡಿಟೆಕ್ಟಿವ್ ಪೊಲೀಸ್ ಇನ್ಸ್ಪೆಕ್ಟರ್ (ಡಿ.ಪಿ.ಐ.) ಕುಪ್ಪೋಡಂಡ ಎ. ರಫೀಕ್ ಅವರನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಬೀಳ್ಕೊಡಲಾಯಿತು. ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಸೂಫಿ ಹಾಜಿಯವರ ಅಧ್ಯಕ್ಷತೆಯಲ್ಲಿ ಎಡಪಾಲದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕೆ.ಎಂ.ಎ. ಆಡಳಿತ ಮಂಡಳಿ ಪದಾಧಿಕಾರಿಗಳ ತಂಡ ರಫೀಕ್ ಅವರಿಗೆ ಶಾಲು ಹೊದಿಸಿ ಪುಷ್ಪಗುಚ್ಛ […]
2nd PUC ಪರೀಕ್ಷೆಯಲ್ಲಿ ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ದ್ವಿತೀಯ ಪಿ. ಯು. ಫಲಿತಾಂಶ ಪ್ರಕಟಗೊಂಡಿದ್ದು ವಿರಾಜಪೇಟೆ ಕಾವೇರಿ ಪಿ. ಯು. ಕಾಲೇಜಿನ ವಿದ್ಯಾರ್ಥಿಗಳು ಶೇಕಡ 88 ರಷ್ಟು ಫಲಿತಾಂಶವನ್ನು ನೀಡಿ ಸಾಧನೆಯನ್ನು ತೋರಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡ 100 ರಷ್ಟು ಫಲಿತಾಂಶ ಪಡೆದಿದ್ದು 9 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡ 90ರಷ್ಟು ಫಲಿತಾಂಶ ಪಡೆದಿದ್ದು ಅದರಲ್ಲಿ ಎಂ.ಎಸ್ ಫರೀದ 588 , ಬಿ.ಎಸ್.ಚೈತ್ರ547 , ಎಂ.ಎಸ್.ಮಾನ್ವಿ 541 ಅಂಕಗಳನ್ನು ಪಡೆದು ಉನ್ನತ ಶ್ರೇಣಿ ಪಡೆದರೆ […]
ವಿರಾಜಪೇಟೆಯ ಸಂತ ಅನ್ನಮ್ಮ ಪಿ.ಯು ಕಾಲೇಜು: ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

ವಿರಾಜಪೇಟೆ: ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸಂತ ಅನ್ನಮ್ಮ ಪಿ ಯು ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸಾಧನೆಯನ್ನು ಮಾಡಿದ್ದು ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ 100% ಫಲಿತಾಂಶವನ್ನು ಪಡೆದಿದೆ. ವಿಜ್ಞಾನ ವಿಭಾಗದಲ್ಲಿ 41 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ,49 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಉತ್ತೀರ್ಣ ರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 48 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ,78 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಮೂವರು ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಜೆಸಿಕಾ […]