ಮನೆ ಯಜಮಾನಿಯರ ಗಮನಕ್ಕೆ: ಗೃಹಲಕ್ಷ್ಮೀ ಯೋಜನೆ ಹೊಸ ಅಪ್ಡೇಟ್

Gruha Lakshmi Scheme

ಸೋಮವಾರಪೇಟೆ ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂದಿಸಿದ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮಿ” ಯೋಜನೆಗೆ (Gruha Lakshmi Scheme) ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು […]

ಮಡಿಕೇರಿ ಗಾಂಧಿ ಭವನದಲ್ಲಿ ಡಾ. ಬಾಬು ಜಗಜೀವನ್‍ರಾಂ ಜಯಂತಿ

Babu Jagjivanram

ಬಾಬು ಜಗಜೀವನ್ ರಾಮ್ ಅವರು ಹಸಿರು ಕ್ರಾಂತಿಯ ಹರಿಕಾರರಾಗಿ, ರಕ್ಷಣಾ ಸಚಿವರಾಗಿ ಉತ್ತಮ ಕೆಲಸ, ಕಾರ್ಮಿಕ ಸಚಿವರಾಗಿ ದುಡಿಯುವ ವರ್ಗದ ಹಿತರಕ್ಷಣೆ, ಸಮಾಜದ ಶೋಷಿತ ಸಮುದಾಯಗಳ ಧ್ವನಿಯಾಗಿದ್ದ ರಾಷ್ಟ್ರದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಜೀವನ ಸಾಧನೆಗಳನ್ನು ಪ್ರತಿಯೊಬ್ಬರೂ ಸ್ಮರಿಸುವಂತಾಗಬೇಕು ಎಂದು ಡಾ.ಮಂತರ್‍ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ಶನಿವಾರ ನಡೆದ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ (Dr. Babu […]

ಕೊಡಗಿನ ಶಾಸಕರ ವಿರುದ್ಧ FIR ದಾಖಲಿಸುವಂತೆ ವಿಜಯೇಂದ್ರ ಒತ್ತಾಯ: ಬೃಹತ್ ಪ್ರತಿಭಟನೆ

vijayendra

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರು ಕುಶಾಲನಗರದಲ್ಲಿ ವಿನಯ್ ಸೋಮಯ್ಯ(Vinay Somaiah) ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಮಾತನಾಡಿ, ಇಬ್ಬರು ಶಾಸಕರ ಕಿರುಕುಳದಿಂದಾಗಿ ವಿನಯ್ ಎಂಬ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಯಾರೆಂದು ಅವರು ತಮ್ಮ ಡೆತ್ ನೋಟ್‌ನಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ. ಆದರೆ, ಬೆಂಗಳೂರಿನಲ್ಲಿ ದಾಖಲಾದ FIR ನಲ್ಲಿ ಶಾಸಕರ ಹೆಸರುಗಳನ್ನು ಸೇರಿಸಿಲ್ಲ. ಇದು ಅಕ್ಷಮ್ಯ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರ ಮೇಲೆ ಒತ್ತಡಕ್ಕೆ ಇದೇ ಸ್ಪಷ್ಟ ಸಾಕ್ಷಿ, ವ್ಯಾಟ್ಸಾಪ್ ಗ್ರೂಪ್ […]

ಮಕ್ಕಳ ಪೋಷಣೆ ಮತ್ತು ರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಆರ್.ಐಶ್ವರ್ಯ

R. Aishwarya

ಮಕ್ಕಳ ಪೋಷಣೆ ಮತ್ತು ರಕ್ಷಣೆ(ಬಾಲ ನ್ಯಾಯ ಕಾಯ್ದೆ) ಸಂಬಂಧಿಸಿದಂತೆ ಮಾಹಿತಿ ಶಿಕ್ಷಣ, ಮಾರ್ಗದರ್ಶನದ ಮೂಲಕ ಹೆಚ್ಚಿನ ಜಾಗೃತಿ ಮೂಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ (R. Aishwarya) ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಹಾಡಿಗಳಲ್ಲಿ, ಲೈನ್ ಮನೆಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ಹೆಚ್ಚಿನ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ […]

ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಮನೆಗೆ ಭೇಟಿ ನೀಡಿದ ಪ್ರತಾಪ್ ಸಿಂಹ, ಕುಟುಂಬಸ್ಥರಿಗೆ ಸಾಂತ್ವನ

Pratap Simha

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದ ಮೂಲದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (39) (Vinay Somaiah) ಆತ್ಮಹತ್ಯೆ ಅವರು ಆತ್ಮಹತ್ಯೆ ಮಾಡಿಕೊಂಡಿದೆ. ಈ ಘಟನೆ ರಾಜ್ಯ ರಾಜಕಾರಣದಲ್ಲಿ ತಿರುವು ಪಡೆದುಕೊಂಡು ಕಾಂಗ್ರೆಸ್ ವರ್ಸಸ್ ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ವಾಟ್ಸಪ್​​ ಪೋಸ್ಟ್​ ಮಾಡಿ ಬಳಿಕ ಬೆಂಗಳೂರಿನ ನಾಗವಾರದ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಬಿಜೆಪಿ ಕಾರ್ಯಕರ್ತವಿನಯ್ ಸೋಮಯ್ಯ ಮನೆಗೆ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ […]

ದೆಖೋ ಅಪ್ನ ದೇಶ್ ಫೋಟೋ ಕಂಟೆಸ್ಟ್

Dekho Apna Desh Photo Contest 2025

ಪ್ರವಾಸೋದ್ಯಮ ಇಲಾಖೆ ವತಿಯಿಂದ ‘ಡಿಸ್ಕವರ್ ದಿ ಬ್ಯೂಟಿ ಆಫ್ ಇಂಡಿಯಾ’ ಶೀರ್ಷಿಕೆಯಡಿ ದೆಖೋ ಅಪ್ನ ದೇಶ್ ಫೋಟೋ ಕಂಟೆಸ್ಟ್-2025’ ಸ್ವರ್ಧೆ ಏರ್ಪಡಿಸಲಾಗಿದ್ದು, ಕೊಡಗು ಜಿಲ್ಲೆಯ ಪ್ರಮುಖ ಕಲೆ, ಸಂಸ್ಕøತಿ, ಬೆಳೆ, ಧಾರ್ಮಿಕ, ಸಾಂಸ್ಕøತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಪ್ರವಾಸಿ ತಾಣಗಳ ಆತ್ಯಾಕರ್ಷಕ ಛಾಯಾಚಿತ್ರಗಳನ್ನು ಸೆರೆಹಿಡಿದು ಪ್ರವಾಸಿ ತಾಣಗಳ ಕಿರು ವಿವರಣೆಯೊಂದಿಗೆ dekhoapnadeshphotos@gmail.com ಇ-ಮೇಲ್‍ಗೆ ನೇರವಾಗಿ ಕಳುಹಿಸಿಕೊಡಬಹುದು. ಪ್ರವಾಸೋದ್ಯಮವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಎಲ್ಲಾ ವರ್ಗಗಳ ಅಂದರೆ, ಧಾರ್ಮಿಕ, ಸಾಂಸ್ಕಂತಿಕ, […]

ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಕೊಡಗಿನ ಶಾಸಕರ ವಿರುದ್ಧ ದೂರು!

BJP worker Vinay Somaiah

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದ ಮೂಲದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (39) (Vinay Somaiah) ಆತ್ಮಹತ್ಯೆ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಶಾಸಕ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಅವರತ್ತ ಬಿಜೆಪಿ ನಾಯಕರು ಬೊಟ್ಟು ಮಾಡುತ್ತಿದ್ದಾರೆ ಮತ್ತು ತನಿಖೆಗೆ ಆಗ್ರಹಿಸಿದ್ದಾರೆ. ಆತ್ಮಹತ್ಯೆಗೆ ರಾಜಕೀಯ ಒತ್ತಡ ಮತ್ತು ಪೊಲೀಸ್ ಪ್ರಕರಣವೇ ಕಾರಣ ಎಂದು ಅವರು ಡೆತ್ ನೋಟ್‌ನಲ್ಲಿ ಆರೋಪಿಸಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದಂತೆ ಮೃತನ ಸಹೋದರ ಜೀವನ್ […]

ಇಂದಿನಿಂದ ಅಭ್ಯತ್ ಮಂಗಳ ಕ್ರಿಕೆಟ್ ಪ್ರೀಮಿಯರ್ ಲೀಗ್

Abhyat Mangal

ಮಡಿಕೇರಿ: ನ್ಯೂ ಫ್ರೆಂಡ್ಸ್ ಅಭ್ಯತ್ ಮಂಗಳ ಇವರ ವತಿಯಿಂದ ನಾಲ್ಕನೇ ವರ್ಷದ ಕ್ರಿಕೆಟ್ ಪ್ರೀಮಿಯರ್ ಲೀಗ್ (Cricket Premier League) ಪಂದ್ಯವು ಏಪ್ರಿಲ್ 4,5,6, ರಂದು ಚೆಟ್ಟಳ್ಳಿಯ ಪ್ರೌಢ ಶಾಲಾ ಮೈದಾನದಲ್ಲಿ ನಡೆಯಲಿದೆ. ಒಟ್ಟು 9 ಮಾಲೀಕತ್ವದ 9 ತಂಡಗಳು ಪಾಲ್ಗೊಳ್ಳಲಿದ್ದು ಸ್ಟಾರ್ ಬಾಯ್ಸ್ ಅಭ್ಯತ್ ಮಂಗಳ, ಜೆ. ಪಿ. ಫ್ರೆಂಡ್ಸ್, ಎಂ. ಜೆ. ಬ್ರದರ್ಸ್, ಸಗಮ್ ಜ್ಯೋತಿನಗರ, ಟೀಮ್ ಕೊಂಬನ್, ಎಂ, ಎಸ್, ಡಿ, ಅರೆಕಾಡ್, ಪೋಶಿತ್ ಫ್ರೆಂಡ್ಸ್, ಕೆ,ಯು, ಫ್ರೆಂಡ್ಸ್, ವಿಕ್ಟರಿ ಹಂಟರ್ಸ್, ತಂಡಗಳ […]

ಬಿಜೆಪಿ ಕಾರ್ಯಕರ್ತ ವಿನಯ್‌ ಆತ್ಮಹತ್ಯೆ ಪ್ರಕರಣ – ಮೂವರ ಬಂಧನಕ್ಕೆ ಆಗ್ರಹಿಸಿದ ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ…

ಮಡಿಕೇರಿ : ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆಗೆ ಕಾಂಗ್ರೆಸ್ ಶಾಸಕ ಪೊನ್ನಣ್ಣ, ಮಂತರ್ ಗೌಡ,  ಕಾಂಗ್ರೆಸ್ ಮುಖಂಡ ತೆನ್ನೀರ್ ಮೈನಾ ಕಾರಣ. ಈ ಮೂವರನ್ನ ಬಂಧಿಸಬೇಕು ಎಂದು ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಆಗ್ರಹಿಸಿದ್ದಾರೆ. ಡೆತ್ ನೋಟ್ ಬರೆದಿಟ್ಟು ಬಿಜೆಪಿ ಕಾರ್ಯಕರ್ತವಿನಯ್ ಆತ್ಮಹತ್ಯೆಗೆ ಶರಣಾದ ವಿಚಾರಕ್ಕೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಕೆ.ಜಿ ಬೋಪಯ್ಯ,  ಕೊಡಗು ಜಿಲ್ಲಾ ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ.  ವಿನಯ್ ವಿರುದ್ದ ರೌಡಿ ಶೀಟ್ ಓಪನ್ ಮಾಡಲು ತಯಾರಿ ನಡೆದಿತ್ತು.  ವಿನಯ್ ಬಂಧನಕ್ಕೂ ಪೊಲೀಸರು […]

ಶುಲ್ಕವಿನಾಯಿತಿ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ

Students

2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು (Students) ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಶುಲ್ಕವಿನಾಯಿತಿ ಸೌಲಭ್ಯಕ್ಕಾಗಿ’ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ, 31 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮ ವಿವರ, ಸೌಲಭ್ಯ ಪಡೆಯಲು ಇರಬೇಕಾದ […]