ಕೊಡಗು ಜಿಲ್ಲಾ ತೀಯಾನ್ ಮಹಾಸಭಾ ಸಮಿತಿಗೆ ನೂತನ ಸಾರಥಿಗಳ ಆಯ್ಕೆ

Thiyan Mahasabha

ಮಡಿಕೇರಿ: ಇಲ್ಲಿನ ರಾಜ ದರ್ಶನ್ ಹೋಟೆಲ್‌ನಲ್ಲಿ ಇತ್ತೀಚೆಗೆ ನಡೆದ ತೀಯಾನ್ ಮಹಾಸಭಾ ಜಿಲ್ಲಾ ಸಮಿತಿಯ ಪ್ರಮುಖ ಸಭೆಯಲ್ಲಿ ಸಂಘಟನೆಯ ಬಲವರ್ಧನೆಯ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಕಿರಗಂದೂರಿನ ಎ.ಎನ್. ಪದ್ಮನಾಭ ಆಯ್ಕೆಯಾಗಿದ್ದಾರೆ. ಉಳಿದಂತೆ ಎಸ್.ಆರ್. ಅಶೋಕ್ ಕುಮಾರ್ (ಉಪಾಧ್ಯಕ್ಷ), ಶ್ರೀಮತಿ ಜ್ಯೋತಿ ಅರುಣ್ (ಪ್ರಧಾನ ಕಾರ್ಯದರ್ಶಿ), ಎಂ.ಕೆ. ಮೋಹನ್ (ಖಜಾಂಜಿ) ಹಾಗೂ ಎನ್.ಸಿ. ಸುದರ್ಶನ್ (ಸಂಘಟನಾ ಕಾರ್ಯದರ್ಶಿ) ಅವರನ್ನು ನೇಮಕ ಮಾಡಲಾಯಿತು. ಸಂಘಟನೆಯ ಗೌರವ ಸಲಹೆಗಾರರಾಗಿ […]

ಕುಡಿಯುವ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ,ಪರಿಶೀಲನೆ

kodagu District Collector

ನಗರದ ಸ್ಟೀವರ್ಟ್ ಹಿಲ್ ಬಳಿ ಇರುವ ಕುಡಿಯುವ ನೀರು ಶುದ್ದೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಶುದ್ದ ಕುಡಿಯುವ ನೀರು ಶುದ್ದೀಕರಣ ಪ್ರಕ್ರಿಯೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಿದರು. ಕುಡಿಯುವ ನೀರು ಸಂಬಂಧಿಸಿದಂತೆ ಅಮೃತ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಪರಿಶೀಲಿಸಿದರು. ಹಾಗೆಯೇ ಸ್ಟೀವರ್ಟ್ ಹಿಲ್ ಬಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಜಾಗ ಸಂಬಂಧಿಸಿದಂತೆ ಆದಷ್ಟು ಬೇಗ ನಗರಸಭೆ ವ್ಯಾಪ್ತಿಗೆ ಪಡೆಯುವಂತೆ ಜಿಲ್ಲಾಧಿಕಾರಿ […]

ಜ.27 ಮತ್ತು 28 ರಂದು ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ  

ಮಡಿಕೇರಿ : ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಎನ್‍ಆರ್‍ಎಲ್‍ಎಂ, ಸಂಜೀವಿನಿ ಯೋಜನೆಯಡಿ ಗ್ರಾಮೀಣ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಬಲವರ್ಧನೆಗಾಗಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ಜನವರಿ, 27 ಮತ್ತು 28 ರಂದು ನಗರದ ಗಾಂಧಿ ಮೈದಾನದ ಆವರಣದಲ್ಲಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

ಪ್ರೊ. ಬಸವರಾಜುಗೆ ಕನ್ನಡ ರತ್ನ ಪ್ರಶಸ್ತಿ

ವಿರಾಜಪೇಟೆ: ಶಿಕ್ಷಣ, ಸಾಹಿತ್ಯ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಪ್ರಾಧ್ಯಾಪಕ ಪ್ರೊ. ಬಸವರಾಜು ಕೆ ರವರಿಗೆ ಕನ್ನಡ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಡಾ. ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಕನ್ನಂಬಾಡಿ ದಿನಪತ್ರಿಕೆ ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಸಂಕ್ರಾಂತಿ ಅಂಗವಾಗಿ ಸುಗ್ಗಿ ಸಂಭ್ರಮ ದ ಪ್ರಯುಕ್ತ 15 ನೇ ಅಖಿಲ ಕರ್ನಾಟಕ ಕನ್ನಡ ಅಕ್ಷರ ಜಾತ್ರೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವು ಇತ್ತೀಚೆಗೆ ಮಂಡ್ಯದ ಕೆ. ವಿ. ಶಂಕರಗೌಡ ಶತಮಾನೋತ್ಸವ ಭವನ […]

ಜ.22 ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ..!

ಮಡಿಕೇರಿ : ಪೊನ್ನಂಪೇಟೆಯ 66/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಫೀಡರ್ ನಿರ್ವಹಣೆ/ ಜಿಒಎಸ್ ಬದಲಾವಣೆ ಕಾಮಗಾರಿ ಕೈಗೊಗೊಳ್ಳುತ್ತಿದೆ. ಈ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಲ್ಲೂರು, ಎಫ್2-ಬಾಳೆಲೆ, ಎಫ್4-ತಿತಿಮತಿ, ಎಫ್5-ಪಾಲಿಬೆಟ್ಟ, ಎಫ್6 -ಬೇಗೂರು, ಎಫ್7-ಗೋಣಿಕೊಪ್ಪ, ಎಫ್8-ಪೊನ್ನಂಪೇಟೆ, ಎಫ್9-ಹಾತೂರು, ಎಫ್10-ಹೈಸೊಡ್ಲೂರು, ಎಫ್11-ಕೈಕೇರಿ, ಎಫ್12-ಬೆಕ್ಕಸೊಡ್ಲೂರು, ಎಫ್13 ದೇವನೂರು ಫೀಡರ್‍ನಲ್ಲಿ ಜನವರಿ 22 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿ ಆಗುವ ಗ್ರಾಮಗಳಾದ ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅತ್ತೂರು, ಕಾನೂರು, ಬಾಳೆಲೆ, ರಾಜಪುರ, ದೇವನೂರು, […]

ಕ್ಲೋಸ್‌ಬರ್ನ್‌ ಸಹಿಪ್ರಾ ಶಾಲೆಯಲ್ಲಿ ಕ್ಲಸ್ಟರ್‌ ಮಟ್ಟದ ಕಲಿಕಾ ಹಬ್ಬ

ಮಡಿಕೇರಿ : ಕಡಗದಾಳು ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬ ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಕೆ. ನಾರಾಯಣ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವನ್ನು ಸಿಆರ್‌ಪಿ ನಿಶಾ ಹಾಗೂ ಶಾಲೆ ಮುಖ್ಯಶಿಕ್ಷಕಿ ಎಂ.ಟಿ. ಲಕ್ಷ್ಮೀ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಪಠ್ಯಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳು ನಡೆದವು. ಮರಗೋಡು, ಅರೆಕಾಡು, ಬೋಯಿಕೇರಿ, ಕಟ್ಟೆಮಾಡು, ಕಡಗದಾಳು ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಾ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದರು. ವಿಜೇತರಿಗೆ ಅತಿಥಿಗಳು ಬಹುಮಾನ […]

ಲಾವಣ್ಯ ಬೋರ್ಕರ್‌ಗೆ ಅನರ್ಘ್ಯ ರತ್ನ ರಾಷ್ಟ್ರೀಯ ಪ್ರಶಸ್ತಿ

ವಿರಾಜಪೇಟೆ: ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್ ಲಾವಣ್ಯ ಬೋರ್ಕರ್ ರವರಿಗೆ ಅನರ್ಘ್ಯ ರತ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆ ಟ್ರಸ್ಟ್ ಹಾಗೂ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವದ ಪ್ರಯುಕ್ತ ಜರುಗಿದ ಸಮಾರಂಭದಲ್ಲಿ ಲಾವಣ್ಯ ಬೋರ್ಕರ್ ರವರ ಕಲಾ ಹಾಗೂ ಭರತನಾಟ್ಯದಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಇತ್ತೀಚೆಗೆ ಹಾಸನದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿದ ಸಮಾರಂಭದಲ್ಲಿ […]

ಕೂರ್ಗ್ ವ್ಯಾಲಿ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮ

ವಿರಾಜಪೇಟೆ: ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಬೇಕು. ಜೊತೆಗೆ ಪೋಷಕರು ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವುದರ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಎಂದು ಅರಮೇರಿ ಕಳಂಚೇರಿ ಮಠದ ಮಠಾಧಿಪತಿಗಳಾದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಯವರು ಹೇಳಿದರು. ಅವರು ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಜರುಗಿದ ಪಟ್ಟಣದ ಕೂರ್ಗ್ ವ್ಯಾಲಿ ಶಾಲೆಯ 25 ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕೂರ್ಗ್ ವ್ಯಾಲಿ ವಿದ್ಯಾಸಂಸ್ಥೆಯು 25 ವರ್ಷಗಳನ್ನು ಪೂರೈಸಿದ್ದು ಉತ್ತಮ ಪ್ರಜೆಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ. ಈ […]

ವಾಲಿಬಾಲ್ ಕ್ರೀಡೆಯ ಉತ್ತೇಜನಕ್ಕೆ ಯೋಜನೆ ರೂಪಿಸಿ: ಶಾಸಕ ಪೊನ್ನಣ್ಣ

ಪೊನ್ನಂಪೇಟೆ: ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ವಾಲಿಬಾಲ್ ಕ್ರೀಡಾಪಟುಗಳಿದ್ದಾರೆ. ವಾಲಿಬಾಲ್ ಕ್ರೀಡೆಗೆ ಜಿಲ್ಲೆಯ ಕ್ರೀಡಾಪಟುಗಳ ಕೊಡುಗೆ ಅಪಾರವಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ವಾಲಿಬಾಲ್ ಕ್ರೀಡೆಯನ್ನು ಮತ್ತಷ್ಟು ಉತ್ತೇಜಿಸಲು ಸೂಕ್ತವಾದ ಕಾರ್ಯ ಯೋಜನೆಗಳನ್ನು ರೂಪಿಸುವಂತೆ ವಿರಾಜಪೇಟೆ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಸಲಹೆ ನೀಡಿದ್ದಾರೆ. ಕೊಡಗು ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ವಿರಾಜಪೇಟೆಯ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಮಂಗಳವಾರದಂದು ನಡೆದ ವಿಶೇಷ ಸಭೆಯಲ್ಲಿ ಪಾಲ್ಗೊಂಡು ವಿವಿಧ ಬೇಡಿಕೆಗಳನ್ನುೊಳಗೊಂಡ ಸಂಸ್ಥೆಯ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಅವರು, ಕೊಡಗಿನಲ್ಲಿ […]

ಹರದೂರು ಹೊಳೆಯಲ್ಲಿ ಮುಳುಗಿ ಇಬ್ಬರು ಬಾಲಕರು ದುರ್ಮರಣ..!

ಸುಂಟಿಕೊಪ್ಪ : ಹೊಳೆಯಲ್ಲಿ ಮುಳುಗಿ ಇಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ಹರದೂರಿನಲ್ಲಿ ಸಂಭವಿಸಿದೆ. ಮಹಮ್ ರಹೀಜ್(16) ಮಹಮದ್ ನಿಹಾಲ್ (16) ಮೃತ ದುರ್ದೈವಿಗಳು. ಸೋಮವಾರಪೇಟೆ ತಾಲ್ಲೂಕಿನ ಹರದೂರು ಹೊಳೆಗೆ ಈ ಇಬ್ಬರು ಯುವಕರು ಇಂದು ಮಧ್ಯಾಹ್ನ ಈಜಲು ತೆರಳಿದ್ದರು ಎನ್ನಲಾಗಿದೆ. ಡಿ. ಚೆನ್ನಮ್ಮ ಕಾಲೇಜಿನ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಾದ ಇವರು ಇಂದು ಮಧ್ಯಾಹ್ನ ಕಾಲೇಜು ಮುಗಿಸಿ ನದಿಗೆ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ನುರಿತ ಈಜು ತಜ್ಞರು ಆಗಮಿಸಿ ಬಾಲಕರ ಮೃತದೇಹವನ್ನು ಹೊರ ತೆಗೆದಿದ್ದಾರೆ. ಸುಂಟಿಕೊಪ್ಪ ಪೊಲೀಸ್‌ ಠಾಣೆಯಲ್ಲಿ […]