Karnataka SSLC Result: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ… ಕೊಡಗು ಜಿಲ್ಲೆಗೆ ಎಷ್ಟನೇ ಸ್ಥಾನ?

2024-25ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result) ಇಂದು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನ ಹಾಗೂ ಕಲಬುರಗಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು 91.12% ಪಡೆದುಕೊಳ್ಳುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಉಡುಪಿ ಜಿಲ್ಲೆಯು 89.96% […]
ಕುಶಾಲನಗರದಲ್ಲಿ ಡಿವೈಎಸ್ಪಿ ಗಂಗಾಧರಪ್ಪಗೆ ನಾಗರಿಕ ಸನ್ಮಾನ ಕಾರ್ಯಕ್ರಮ

ಕುಶಾಲನಗರದಲ್ಲಿ ಪೊಲೀಸ್ ಉಪ ಅಧೀಕ್ಷಕ (ಡಿವೈಎಸ್ಪಿ) ರಾಗಿ ಸೇವೆ ಸಲ್ಲಿಸುತ್ತಿದ್ದು, ಬೆಂಗಳೂರಿಗೆ ವರ್ಗಾವಣೆ ಆಗಿರುವ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ (DySP) ಪಿ ಆರ್.ವಿ.ಗಂಗಾಧರಪ್ಪ ಅವರಿಗೆ ಮಂಗಳವಾರ ಸಂಜೆ ಕುಶಾಲನಗರ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಇಲ್ಲಿನ ರೈತ ಸಹಕಾರ ಭವನದಲ್ಲಿ ಏರ್ಪಡಿಸಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಪ್ರಜ್ಞಾವಂತ ನಾಗರಿಕ ವೇದಿಕೆಯ ಅಧ್ಯಕ್ಷ ವಿ.ಪಿ.ಶಶಿಧರ್ ಅಧ್ಯಕ್ಷತೆಯಲ್ಲಿ ನಡೆದ ಸನ್ಮಾನ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ ಅಶೋಕ್ ಸಂಗಪ್ಪ ಆಲೂರ ಉದ್ಘಾಟಿಸಿದರು. […]
ಭಾರತದಾದ್ಯಂತ ರಸ್ತೆ ಸುರಕ್ಷತೆ ಸಾಧಿಸುವ ತನ್ನ ಬದ್ಧತೆಯನ್ನು ಪ್ರದರ್ಶಿಸಿದ ಟೊಯೋಟಾ

ಬೆಂಗಳೂರು: ಸುರಕ್ಷಿತ ಮತ್ತು ಜವಾಬ್ದಾರಿಯುತ ಸಾರಿಗೆ ವ್ಯವಸ್ಥೆಯನ್ನು ನಿರ್ಮಿಸುವ ಗುರಿ ಹೊಂದಿರುವ ಟೊಯೋಟಾ (Toyota) ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಭಾರತದಾದ್ಯಂತ ತನ್ನ ವಿಶಿಷ್ಟ ಯೋಜನೆಗಳ ಮೂಲಕ ರಸ್ತೆ ಸುರಕ್ಷತೆ ಸಾಧಿಸುವ ತನ್ನ ದೀರ್ಘಕಾಲೀನ ಬದ್ಧತೆಯನ್ನು ಪುನರುಚ್ಛರಿಸಿದೆ. ಜಾಗೃತಿ, ಶಿಕ್ಷಣ ಮತ್ತು ಹೊಸತನವನ್ನು ಒಳಗೊಂಡ ಟಿಕೆಎಂನ ಸಮಗ್ರ ರಸ್ತೆ ಸುರಕ್ಷತಾ ಯೋಜನೆಗಳು ಭಾರತದ 10 ಲಕ್ಷಕ್ಕೂ ಹೆಚ್ಚು ಜನರ ಬದುಕಿನಲ್ಲಿ ಧನಾತ್ಮಕ ಪರಿಣಾಮ ಬೀರಿರುವುದು ಗಮನಾರ್ಹವಾಗಿದೆ. ಟೊಯೋಟಾದ ರಸ್ತೆ ಸುರಕ್ಷತಾ ಯೋಜನೆಗಳಲ್ಲಿ ಟಿಎಸ್ಇಪಿ ಪ್ರಮುಖ ಕಾರ್ಯಕ್ರಮವಾಗಿದ್ದು, ಈ ಯೋಜನೆಯನ್ನು […]
ನಾಳೆ SSLC ಫಲಿತಾಂಶ ಪ್ರಕಟ: ರಿಸಲ್ಟ್ ನೋಡುವುದು ಹೇಗೆ?

SSLC ವಿದ್ಯಾರ್ಥಿಗಳ ಭವಿಷ್ಯದ ಬಹಳ ದೊಡ್ಡ ತಿರುವು . ವಿದ್ಯಾರ್ಥಿಗಳು ಪರೀಕ್ಷೆ ಬರೆದು ಬಹುಕಾತರದಿಂದ ಕಾಯುತ್ತಿರುವ ನಾಳೆ ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡುವುದಾಗಿ ಅಧಿಕೃತ ಮಾಹಿತಿ ನೀಡಿದೆ. ರಾಜ್ಯದ ಎಲ್ಲೆಡೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಈ ವರ್ಷದ ಪರೀಕ್ಷೆಯು ಮಾರ್ಚ್-ಏಪ್ರಿಲ್ 21, 2025 ರಿಂದ ಏಪ್ರಿಲ್ 4, 2025 ರವರೆಗೆ ನಡೆಯಿತು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಗಿಸಿರುವ ಕರ್ನಾಟಕ ಪರೀಕ್ಷಾ ಮಂಡಳಿ, ನಾಳೆ SSLC ಫಲಿತಾಂಶ […]
ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಮೊಂಬತ್ತಿ ಹಿಡಿದು ಹಿಂದೂ ಮಲಯಾಳಿ ಸಮಾಜ ಪ್ರತಿಭಟನೆ

ವಿರಾಜಪೇಟೆ: ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ಉಗ್ರರು ನಡೆಸಿದ ಪೈಶಾಚಿಕ ಕ್ರೌರ್ಯವನ್ನು ಖಂಡಿಸಿ ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ, ಹಿಂದೂ ಮಲಯಾಳಿ (Hindu Malayali) ಅಸೋಶಿಯೇಷನ್, ಹಿಂದೂ ಮಲಯಾಳಿ ಅಸೋಶಿಯೇಷನ್ ಮಹಿಳಾ ಘಟಕ ವಿರಾಜಪೇಟೆ ಮತ್ತು ಎಸ್.ಎನ್.ಡಿ.ಪಿ ವಿರಾಜಪೇಟೆ ಶಾಖೆಯ ವತಿಯಿಂದ ನಗರದ ಗಡಿಯಾರ ಕಂಬದ ಬಳಿ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು ಶ್ರೀ ಮುತ್ತಪ್ಪ ಮಲಯಾಳಿ ಸಮಾಜ ಅದ್ಯಕ್ಷ ಪಿ.ಜಿ. ಸುಮೇಶ್ ಮಾತನಾಡಿ, ಉಗ್ರರ ಧಾಳಿಯನ್ನು ನಾವು ಖಂಡಿಸುತ್ತೇವೆ. ಕಾಶ್ಮೀರದಲ್ಲಿ ಆರ್ಟಿಕಲ್ 370 ಜಾರಿಗೆ ಮಾಡಿರುವುದನ್ನು ಸಹಿಸಲಾರದ […]
ನಾಳೆಯಿಂದ ವಾಹನ ಮಾಲೀಕರಿಗೆ ತೆರಿಗೆ ಶಾಕ್: ವಾಹನಗಳು ದುಬಾರಿ!

ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ವಾಹನ ಖರೀದಿ ಕರ್ನಾಟಕದಲ್ಲಿ ಬಲು ದುಬಾರಿಯಾಗಿದೆ. ಅಲ್ಲದೇ ನಾಳೆಯಿಂದ ಅಂದರೆ ಮೇ ತಿಂಗಳ ಆರಂಭದಿಂದ ಲೈಫ್ ಟೈಮ್ ಟ್ಯಾಕ್ಸ್ (Tax) ಹೆಚ್ಚಾಗುತ್ತಿದೆ. ಸಣ್ಣ ಗೂಡ್ಸ್, ಟ್ಯಾಕ್ಸಿ, ಎಲೆಕ್ಟ್ರಿಕ್ ವಾಹನ ಸೇರಿದಂತೆ ಯಲ್ಲೋ ಬೋರ್ಡ್ ವಾಹನ ಖರೀದಿ ಕರ್ನಾಟಕದಲ್ಲಿ ಬಲು ದುಬಾರಿಯಾಗಿದೆ. ಮೇ.1 ರಿಂದ ಕರ್ನಾಟಕದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ಲೈಫ್ ಟೈಮ್ ಟ್ಯಾಕ್ಸ್ ಅಥವಾ ಜೀವಿತಾವಧಿ ತೆರಿಗೆ ಪಾವತಿಸಬೇಕು. ಹೊಸ ಆದೇಶ ನಾಳೆಯಿಂದಲೇ ಜಾರಿಯಾಗುತ್ತಿದೆ. ಮೇ 1ರಿಂದ 10 ಲಕ್ಷ ರೂ. […]
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಘಟಿಕೋತ್ಸವ

ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ(Kodagu Institute of Medical Sciences) ಅಪ್ರತಿಮ 2019ನೇ ಬ್ಯಾಚಿನ ಅವಿರತ 2025 ಘಟಿಕೋತ್ಸವ (Convocation) ಸಮಾರಂಭವು ಬುಧವಾರ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಕ್ಯಾಂಪಸ್‍ನಲ್ಲಿ ನಡೆಯಿತು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಭಗವಾನ್ ಬಿ.ಸಿ.ಅವರು ಮಾತನಾಡಿ, ಈ ಕ್ಷಣವು ವಿದ್ಯಾರ್ಥಿಗಳಿಗಿಂತ ಅವರ ಪೋಷಕರಿಗೆ ಅತೀವ ಸಂತೋಷ ತಂದಿರುವ ದಿನವಾಗಿದೆ ಎಂದರು. ಈ ದಿನದ ವರೆಗೂ ನೀವು ವಿದ್ಯಾರ್ಥಿಗಳಾಗಿದ್ದಿರಿ, ಇಂದಿನಿಂದ ವೃತ್ತಿಪರ ವೈದ್ಯರಾಗುತ್ತಿದ್ದಿರ ಎಂದು ತಿಳಿದರು. ಪದವಿ […]
ಸಮಗ್ರ-ಸಮತೆಯೆಡೆಗೆ ಸಾಹಿತ್ಯ: ರಾಷ್ಟ್ರೀಯ ವಿಚಾರ ಸಂಕಿರಣ

ಇತಿಹಾಸ ನೆನಪುಗಳನ್ನು ಜೀವಂತವಾಗಿರಿಸುತ್ತದೆ ಇತಿಹಾಸ ಅರಿಯದವನು ಬದುಕಲಿರುವ ಹಕ್ಕನ್ನು ಕಳೆದುಕೊಳ್ಳುತ್ತಾನೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅಭಿಪ್ರಾಯ ಪಟ್ಟಿದ್ದಾರೆ. ಕುಶಾಲನಗರ (Kushalnagar) ಸಮೀಪದ ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಹಾರಂಗಿ ಸಭಾಂಗಣದಲ್ಲಿ ದಲಿತ ಸಾಹಿತ್ಯ ಪರಿಷತ್ತು, ಕೊಡಗು ವಿಶ್ವವಿದ್ಯಾಲಯ, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ ಹಾಗೂ ಅಹಿಂದ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಗ್ರ-ಸಮತೆಯೆಡೆಗೆ ಸಾಹಿತ್ಯ ಎಂಬ ವಿಷಯದ ರಾಷ್ಟಿಯ ವಿಚಾರ ಸಂಕಿರಣದಲ್ಲಿ ಸಾಹಿತಿ ಅರ್ಜುನ್ ಮೌರ್ಯರವರ “ಬೆಂದೊಡಲ ಕುಣಿತ” ಎಂಬ ಕೃತಿಯನ್ನು […]
ಚೆಕ್ಕೇರ ಕಪ್ ಕ್ರಿಕೆಟ್: ಅಜ್ಜಿಕುಟ್ಟಿರ ತಂಡದ ಪರ ಮೈದಾನಕ್ಕಿಳಿದ ಶಾಸಕ ಪೊನ್ನಣ್ಣ

ಹುದಿಕೇರಿಯಲ್ಲಿ ನಡೆಯುತ್ತಿರುವ ಚೆಕ್ಕೇರ ಕಪ್ ಕ್ರಿಕೆಟ್ (Chekkera Cup Cricket) ಪಂದ್ಯಾವಳಿಯ ವಿಶೇಷ ಅತಿಥಿಯಾಗಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ (Ponnanna) ರವರು ಭಾಗವಹಿಸಿ ಶುಭ ಕೋರಿದರು. ಕೊಡಗಿನ ಕೊಡವ ಕುಟುಂಬಸ್ಥರ ನಡುವೆ ನಡೆಯುತ್ತಿರುವ ಪ್ರತಿಷ್ಠಿತ ಚೆಕ್ಕೇರ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ, ಹಲವು ಪ್ರಬಲ ಕ್ರಿಕೆಟ್ ಕುಟುಂಬಗಳು ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸೆಣಸಾಟ ನಡೆಸುತ್ತಿದೆ. ಇಂದು ಮೈದಾನಕ್ಕೆ ಭೇಟಿ ನೀಡಿದ ಮಾನ್ಯ ಶಾಸಕರು, ಕ್ರಿಕೆಟ್ ತಂಡಗಳ ಸದಸ್ಯರೊಂದಿಗೆ ಹಲವು ಸಮಯವನ್ನು […]
ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ ಮಾಡಿದ ಯುವಕ ಬಂಧನ: ಓರ್ವ ಸಾವು

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ ಪರಿಣಾಮವಾಗಿ ವ್ತಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾದ ಆರೋಪಿಯನ್ನು ಬಂಧಿಸಲಾಗಿದೆ. ಮಧ್ಯಪಾನ ಮಾಡಿ ರಸ್ತೆಯಲ್ಲಿ ವಾಹನ ಚಲಾಯಿಸುವ ಸಂದರ್ಭ ಅಪಘಾತವಾದಲ್ಲಿ ಜೀವಕ್ಕೆ ಹಾನಿಯುಂಟಾಗುವ ಬಗ್ಗೆ ಅರಿವಿದ್ದರೂ ಸಹ ಮಧ್ಯಪಾನ ಮಾಡಿ ಅತೀವೇಗ ಮತ್ತು ಅಜಾಗೂಕತೆಯಿಂದ ವಾಹನ ಚಾಲನೆ ಮಾಡಿ ಪಾದಚಾರಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣವಾಗಿರುವ ಕೆಎ-05-ಎಂಕ್ಯೂ-2672 ಕಾರಿನ ಚಾಲಕನಾದ ಶಿವನ್ ಕರುಂಬಯ್ಯನ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 281,125(ಬಿ), 105, 62 ಬಿ.ಎನ್.ಎಸ್ ಆಕ್ಟ್ […]