Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಮೂರ್ನಾಡು (Murnad) 33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಮಳೆಗಾಲ ಮುಂಜಾಗೃತಾ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಏಪ್ರಿಲ್, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಬಲಮುರಿ, ಪಾರಾಣೆ, ಬಾವಲಿ, ಕೈಕಾಡು, ಕಿರಂದಾಡು, ಎಡಪಾಲ, ಕಡಂಗ, ಚೆಂಯ್ಯಂಡಾಣೆ, ಚೇಲವಾರ, ಮರಂದೋಡ, ಕೋಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.
ಮುದ್ದಂಡ ಕಪ್ ಹಾಕಿ ನಮ್ಮೆ: ಮಹಿಳೆಯರ ಹಾಕಿ ಆಟದ ಜೋಶ್ ಏಪ್ರಿಲ್ 21ರಿಂದ – ಪ್ರಶಸ್ತಿಗಾಗಿ ಸೆಣಸಲಿವೆ 56 ತಂಡಗಳು..!

ಮಡಿಕೇರಿ : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಏ.೨೧ ರಿಂದ ಮಹಿಳೆಯರ ೫ಎ ಸೈಡ್ ಹಾಕಿ ಉತ್ಸವ ಆರಂಭಗೊಳ್ಳಲಿದೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ. ಮುದ್ದಂಡ ಹಾಕಿ (Muddanda Hockey) ಉತ್ಸವದ ಮೈದಾನದಲ್ಲಿ ಬೆಳಿಗ್ಗೆ ೯ ಗಂಟೆಗೆ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ವಿಜೇತ ಹಿರಿಯ […]
ಜಾತಿ ಗಣತಿ ವರದಿಗೆ ಕೊಡಗು ಒಕ್ಕಲಿಗರ ಸಂಘ ವಿರೋಧ – ನನ್ನ ಮನೆಗೆ ಯಾವುದೇ ಸಮೀಕ್ಷಾ ತಂಡ ಬಂದಿಲ್ಲ ಎಂದ ಪ್ರಮುಖರು..!

ಮಡಿಕೇರಿ : ರಾಜ್ಯ ಸರ್ಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಗಣತಿ ವರದಿಯನ್ನು ಕೊಡಗು ಜಿಲ್ಲಾ ಒಕ್ಕಲಿಗರ (Kodagu Vokkaliga) ಸಂಘ ಹಾಗೂ ತಾಲ್ಲೂಕು ಸಂಘಗಳು ತೀವ್ರವಾಗಿ ವಿರೋಧಿಸಿವೆ. ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ವಿ.ಜಿ.ಮೋಹನ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಎ.ಆರ್.ಮುತ್ತಣ್ಣ ಹಾಗೂ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಎಂ.ಕೆ.ದಿನೇಶ್ ಅವರುಗಳು ಸಚಿವ ಸಂಪುಟದಲ್ಲಿ ಮಂಡನೆಯಾದ ವರದಿ ಅವೈಜ್ಞಾನಿಕ ಸಮೀಕ್ಷೆಯಿಂದ […]
ಜಾತಿ ಸಾಮಾಜಿಕ ಸಮೀಕ್ಷೆಯಿಂದ ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು. ಜಾತಿ ಸಾಮಾಜಿಕ […]
ಸೆಕೆಂಡ್ ಹ್ಯಾಂಡ್ ಸ್ಮಾರ್ಟ್‌ಫೋನ್ ಖರೀದಿಸುವ ಮುನ್ನ ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯಗಳಿವು!

ಇತ್ತೀಚೆಗೆ ಹೊಸ ಹೊಸ ಫೀಚರ್ಸ್‌ಗಳನ್ನು ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಬರುತ್ತಿದೆ. ಆದರೆ ಈ ಹೊಸ ಸ್ಮಾರ್ಟ್‌ಫೋನ್ (Smartphone) ಖರೀದಿಸಲು ಕೆಲವರಿಗೆ ಬಜೆಟ್ ಇರಲ್ಲ. ಸ್ಮಾರ್ಟ್‌ಫೋನ್‌ಗಳ ಬೆಲೆಗಳು ಏರಿಕೆಯಾಗುವುದರಿಂದ ಜನರು ಸೆಕೆಂಡ್ ಹ್ಯಾಂಡ್ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವ ಬಗ್ಗೆ ಯೋಚಿಸುತ್ತಿದ್ದಾರೆ. ಆದರೆ ಸೆಕೆಂಡ್ ಹ್ಯಾಂಡ್ ಫೋನ್ ಖರೀದಿಸುವ ಮೊದಲು ಪರಿಗಣಿಸಬೇಕಾದ ಕೆಲವು ಅಂಶಗಳ ಬಗ್ಗೆ ಮಾಹಿತಿ ಇಲ್ಲಿದೆ. * ನೀವು ಸೆಕೆಂಡ್ ಹ್ಯಾಂಡ್ ಸ್ಮಾರ್ಟ್‌ಫೋನ್ ಖರೀದಿಸುವ ಬಗ್ಗೆ ಯೋಚಿಸಿದಾಗ, ಅರ್ಧ ಬೆಲೆಗೆ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಆತುರಪಡಬೇಡಿ. ಎಲ್ಲಾ ಟೆಕ್ನಿಕಲ್ […]
ಯುವಜನತೆಗೆ ಅವಕಾಶ: ಕೊಡಗಿನಲ್ಲಿ ಉದ್ಯೋಗ ಮೇಳ

ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಏಪ್ರಿಲ್, 16 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆವರೆಗೆ ಉದ್ಯೋಗ ಮೇಳ (Job fair) ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ರಾಣಿ ಮದ್ರಾಸ್ ಪ್ರೈ.ಲಿ., ಮೈಸೂರು, ಆಟೋ ಲೈವ್, ಕಾಡಕೊಳ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಕೂರ್ಗ್ ಜಂಗಲ್ ಕ್ಯಾಂಪ್ ರೆಸಾರ್ಟ್, ಕುಶಾಲನಗರ, ಮುತ್ತೂಟ್ ಪೈನಾನ್ಸ್, ಮೈಸೂರು, ಕಾವೇರಿ ಹೊಂಡಾ, ಕುಶಾಲನಗರ, ಪ್ಯಾಲೇಸ್ ಟಯೋಟ ಕಾರ್ ಶೋ ರೂಂ, ಕುಶಾಲನಗರ ಹಾಗೂ ಪರ್ಪಲ್ ಪಾಮ್ಸ್ […]
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಭಾಗಮಂಡಲದಲ್ಲಿ ಗಡಿನಾಡ ಉತ್ಸವ

ಅರೆಭಾಷೆ (Areabashe) ಉಳಿದರೆ ಮಾತ್ರ ಅರೆಭಾಷೆ ಸಂಸ್ಕೃತಿ, ಸಮಾಜ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ತಮ್ಮದೇ ಆದ ವಿಭಿನ್ನ ಸಂಸ್ಕøತಿ, ಆಚಾರ-ವಿಚಾರ ಕಲೆಗಳನ್ನು ಉಳಿಸಿಕೊಂಡು ಬಂದಿರುವ ಅರೆಭಾಷೆಯನ್ನು ಎಲ್ಲೆಡೆ ಪಸರಿಸುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಭಾಗಮಂಡಲ ನಾಡಗೌಡ ಸಮಾಜ, ಕರಿಕೆ, ಚೇರಂಬಾಣೆ ಗೌಡ ಸಮಾಜ, ಭಾಗಮಂಡಲ ನಾಡಗೌಡ ಯುವ ಒಕ್ಕೂಟ ಮತ್ತು ಚೇರಂಬಾಣೆ […]
Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಮಡಿಕೇರಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಎಫ್1 ಕೋಟೆ ಮಾರ್ಗದಲ್ಲಿ ಅಭಿವೃದ್ದಿ ಕಾಮಗಾರಿ ಕೈಗೊಂಡಿರುವುದರಿಂದ ಏಪ್ರಿಲ್ 16 (ನಾಳೆ) ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಮಡಿಕೇರಿಯ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.
FMKMCC ಹಳೆ ವಿದ್ಯಾರ್ಥಿ ಸಂಘದಿಂದ ಗುರು ವಂದನಾ ಕಾರ್ಯಕ್ರಮ: ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು (FMKMCC) ಹಳೆ ವಿದ್ಯಾರ್ಥಿ ಸಂಘದ ಮಾಸಿಕ ಸಭೆ ಕಾಲೇಜಿನ ನ್ಯಾಕ್ ಕೊಠಡಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಲೇಜಿನ ಅಭಿವೃದ್ಧಿ ಹಾಗೂ ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ನಡೆಯಬೇಕಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ.ಬಿ ಅವರು ಮಾತನಾಡಿ, ಕಾಲೇಜು ಈಗಾಗಲೇ 75 ವರ್ಷಗಳನ್ನು ಪೂರೈಸಿದ್ದು, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದಿಂದ ವಿದ್ಯಾರ್ಥಿಗಳಿಗಾಗಿ ಬಹಳಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಕಾಲೇಜಿನ […]
ಮಡಿಕೇರಿಯ ಜಿ.ಆರ್. ಗಿರೀಶ್‌ಗೆ “ಛಾಯಾ ಶ್ರೀ” ಪ್ರಶಸ್ತಿ

ಮಡಿಕೇರಿ ಏ.14 : ಬೆಂಗಳೂರಿನ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘ ನೀಡುವ “ಛಾಯಾ ಶ್ರೀ” (Chhaya shri) ಪ್ರಶಸ್ತಿಗೆ ಮಡಿಕೇರಿಯ ಜಿ.ಆರ್. ಗಿರೀಶ್ (G.R Girish) ಭಾಜನರಾಗಿದ್ದಾರೆ. ಗೌಳಿಬೀದಿ ನಿವಾಸಿಯಾಗಿರುವ ಗಿರೀಶ್, ಛಾಯಾಗ್ರಹಣ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ್ದು, ಛಾಯಾಗ್ರಾಹಕರ ಸಂಘಟನೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಛಾಯಾಚಿತ್ರ ಕ್ಷೇತ್ರದಲ್ಲಿ ಗಿರೀಶ್ ಅವರ ಸೇವೆಯನ್ನು ಪರಿಗಣಿಸಿ ಕರ್ನಾಟಕ ಛಾಯಾ ಗ್ರಾಹಕರ ಸಂಘದ “ಡಿಜಿ ಇಮೇಜ್ 2025″ರ ವಸ್ತು ಪ್ರದರ್ಶನದಲ್ಲಿ” “ಛಾಯಾ ಶ್ರೀ” ಪ್ರಶಸ್ತಿ ನೀಡಿ ಸನ್ಮಾನಿಸಿ, ಗೌರವಿಸಲಾಯಿತು.