ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸ್ಕಾಲರ್ಶಿಪ್, ಪ್ರತಿಭಾ ಪುರಸ್ಕಾರ ವಿತರಣೆ

Dubai Kodagu Alumni Association

ಸಂಯುಕ್ತ ಅರಬ್ ಸಂಸ್ಥಾನದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೊಡಗಿನ ಹಳೆ ವಿದ್ಯಾರ್ಥಿಗಳ ಸಂಘದ ಅವರ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಎಲ್ಲಾ ವರ್ಷವು ನೀಡಿ ಬರುವ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭ ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಕೊಡಗಿಗೆ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಕಾರ್ಯಕ್ರಮ ಫೆ.01 ರಂದು ಹೊದವಾಡದಲ್ಲಿರುವ ರಾಫಲ್ಸ್ […]

ಕರ್ನಾಟಕ ಬಜೆಟ್ 2025: ಕೊಡಗಿಗೆ ಸಿಕ್ಕಿದ್ದೇನು?

Karnataka Budget 2025

ಸಿಎಂ ಸಿದ್ದರಾಮಯ್ಯನವರು (CM Siddaramaih) ದಾಖಲೆಯ 16ನೇ ಬಜೆಟ್ (Budget) ಅನ್ನು ಮಂಡಿಸಿದ್ದಾರೆ. ಬರೋಬ್ಬರಿ 4.09 ಲಕ್ಷ ಕೋಟಿಯ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಹಾಗಾದರೆ ಕೊಡಗು ಜೆಲ್ಲೆಗೆ (Kodagu) ಈ ಬಾರಿ ಬಜೆಟ್ ನಲ್ಲಿ ಸಿಕ್ಕ ಕೊಡುಗೆಗಳು ಏನು ಎಂದು ತಿಳಿಯೋಣ. * ಪೊನ್ನಂಪೇಟೆಯಲ್ಲಿ ಹೊಸ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲಾಗುತ್ತದೆ. * ಕುಶಾಲನಗರ ತಾಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು ಹಾಗೂ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ […]

Karnataka Budget 2025: ಸಿದ್ದರಾಮಯ್ಯ ಬಜೆಟ್ ಪ್ರಮುಖಾಂಶಗಳು

Karnataka Budget 2025

ಬೆಂಗಳೂರು: 2025-26ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget)  ಮಂಡನೆ ಪೂರ್ಣಗೊಂಡಿದೆ. ಬರೋಬ್ಬರಿ 3 ಗಂಟೆ 30 ನಿಮಿಷ ಬಜೆಟ್ ಭಾಷಣ ಮಾಡಿದ್ದು, 178 ಪುಟಗಳ ಯೋಜನೆಗಳನ್ನು ಓದಿದ್ದಾರೆ. ದಾಖಲೆಯ 16 ನೇ ಬಾರಿಯ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಈ ಬಜೆಟ್ ಯಾರಿಗೆ ಸಿಹಿಯಾಗಿತ್ತು, ಯಾರಿಗೆ ಕಹಿ, ಯಾವ ವಲಯಕ್ಕೆ ಎಷ್ಟು ಅನುದಾನ, ಹೊಸ ಕೊಡುಗೆಗಳು ಏನು ಎನ್ನುವುದನ್ನು ಇಲ್ಲಿ ತಿಳಿಯೋಣ. ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್​ನ […]

ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿ

fashion designing/tailoring training

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 03 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ಅನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ […]

ಮಡಿಕೇರಿ ನಗರ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮ

General Thimmaiah Public School students

ಮಡಿಕೇರಿ (Madikeri) ನಗರ ಠಾಣೆಯಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ (General Thimmaiah Public School) ಮಕ್ಕಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ನಡೆಸಿದ್ದು ಠಾಣೆಗೆ ಭೇಟಿ ನೀಡಿದ ವಿದ್ಯಾರ್ಥಿಗಳಿಗೆ ಠಾಣೆಯ ಬಗ್ಗೆ, ಪೊಲೀಸ್‌ ಸೇವೆಗಳ ಬಗ್ಗೆ, ಮಕ್ಕಳ ಕಾನೂನು, ರಸ್ತೆ ಸುರಕ್ಷತೆ, ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮಗಳು ಮುಂತಾದವ ವಿಷಯಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಡಗು ಜಿಲ್ಲಾ ಬಿಜೆಪಿ ಅಹೋರಾತ್ರಿ ಧರಣಿ

Kodagu Bjp

ಮಡಿಕೇರಿ: ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚಬಾರದು, ಪರಿಶಿಷ್ಟ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆಡೆಗೆ ಬಳಸದಿರಿ, ಕಾಫಿ ಉತ್ಪಾದನೆ ಕುಂಠಿತವಾಗಿದ್ದು ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯ ಹಳೆಯ ಖಾಸಗಿ ಬಸ್‌ನಿಲ್ದಾಣದಲ್ಲಿ ಅಹೋರಾತ್ರಿ ಧರಣಿ ಪ್ರಾರಂಭಿಸಿದೆ. ಒಂದು ವೇಳೆ ಬೇಡಿಕೆಗಳು ಈಡೇರದೇ ಹೋದರೆ ಮಾರ್ಚ್ 11ರಂದು ಕೊಡಗು ಜಿಲ್ಲಾ ಬಂದ್‌ಗೆ ಕರೆ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಬಿಜೆಪಿ ಹೇಳಿದೆ. ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚದೇ ಉಳಿಸಬೇಕು, ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ […]

ಪೊಲೀಸ್ ಇಲಾಖೆ ವತಿಯಿಂದ ಮಡಿಕೇರಿಯಲ್ಲಿ ಮಾ.09 ರಂದು ಮ್ಯಾರಥಾನ್

Marathon

ಪೊಲೀಸ್ ಇಲಾಖೆ ವತಿಯಿಂದ ‘ಫಿಟ್‍ನೆಸ್ ಫಾರ್ ಆಲ್’ ಎಂಬ ಧ್ಯೇಯದೊಂದಿಗೆ ಸಮಾಜದ ಆರೋಗ್ಯ ಕಾಪಾಡುವ ಸಂದೇಶದೊಂದಿಗೆ ಹಾಗೂ ಮಾದಕ ಮುಕ್ತ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲು ‘ಕರ್ನಾಟಕ ರಾಜ್ಯ ಪೊಲೀಸ್’ ಇಲಾಖಾ ವತಿಯಿಂದ ಮಾರ್ಚ್ 9 ರಂದು ಮ್ಯಾರಥಾನ್ (Marathon) ಓಟ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಕೇಂದ್ರಸ್ಥಾನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಮಾರ್ಚ್ 9 ರಂದು ಬೆಳಗ್ಗೆ 8 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಪ್ರಾರಂಭಿಸಿ ನಗರದ […]

ಸೈಂಟ್ ಆ್ಯನ್ಸ್ ಪದವಿ ಕಾಲೇಜು ಎನ್‌ಎಸ್‌ಎಸ್‌ ಶಿಬಿರ ಉದ್ಘಾಟನಾ ಕಾರ್ಯಕ್ರಮ

St Annes College Virajpet NSS Camp

ಯಾವುದೇ ಫಲಾಪೆಕ್ಷೆ ಇಲ್ಲದೆ ಮಾಡುವ ನಿಶ್ವಾರ್ಥ ಸೇವೆಯು ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಚ್ಚಪಂಡ ಮಹೇಶ್ ಗಣಪತಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಸಂತ ಅನ್ನಮ್ಮ ಪದವಿ ಕಾಲೇಜು ವಿರಾಜಪೇಟೆ ಕೊಡಗು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನಾ (NSS) ಘಟಕದ ವತಿಯಿಂದ ಬೇಟೋಳಿ ಗ್ರಾಮ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ 2024-25 ನೇ ಸಾಲೀನ ವಾರ್ಷಿಕ ಶಿಭಿರದ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಶಿಬಿರವನ್ನು ಹೂ ಗಿಡಕ್ಕೆ ನೀರು ಎರೆಯುವ […]

ವಾಣಿಜ್ಯ ವಾಹನಗಳ ಕಾರ್ಯಕ್ಷಮತೆ ಹೆಚ್ಚಿಸಲು ಬಂತು ಹೊಸ ಫ್ಲೂಯಿಡ್

HPCL, Tata Motors

ಬೆಂಗಳೂರು: ಭಾರತದ ತೈಲ ಕಂಪನಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಮತ್ತು ದೇಶದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕ ಸಂಸ್ಥೆಯಾಗಿರುವ ಟಾಟಾ ಮೋಟಾರ್ಸ್ (Tata Motors) ಜಂಟಿಯಾಗಿ ಸಂಸ್ಥಾಪನೆ ಮಾಡಿರುವ ಜೆನ್ಯೂನ್ ಡೀಸೆಲ್ ಎಕ್ಸಾಸ್ಟ್ ಫ್ಲೂಯಿಡ್ (ಡಿಇಎಫ್) ಬ್ರಾಂಡ್ ಅನ್ನು ಬಿಡುಗಡೆ ಮಾಡಿದೆ. ಈ ಅತ್ಯುತ್ತಮ ಗುಣಮಟ್ಟದ ಡಿಇಎಫ್ ಉತ್ಪನ್ನವು ವಾಹನಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲಿದ್ದು, ಡ್ರೈವ್‌ ಟ್ರೇನ್ ದಕ್ಷತೆಯನ್ನು ಉತ್ತಮಗೊಳಿಸುತ್ತದೆ ಮತ್ತು ವಾಹನದ ಆಯುಷ್ಯವನ್ನು ಜಾಸ್ತಿ ಮಾಡುತ್ತದೆ. ಉದ್ಯಮದ ಉನ್ನತ ಮಾನದಂಡಗಳನ್ನು ಪೂರೈಸುವ ಬಿಐಎಸ್- ಪ್ರಮಾಣೀಕೃತ […]

Power Cut: ನಾಳೆ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ಶನಿವಾರಸಂತೆ ಶಾಖಾ ವ್ಯಾಪ್ತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಶನಿವಾರಸಂತೆ ಟೌನ್, ಗುಡುಗಳಲೆ, ಕಾಜೂರು, ಕೂಜುಗೇರಿ, ಮಾದ್ರೆ, ಅಪ್ಪಶೆಟ್ಟಳ್ಳಿ, ಶೆಟ್ಟಿಗನ ಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.