ಕಾವೇರಿ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಶಿಕ್ಷಣ ಸಚಿವರಿಗೆ ಪೊನ್ನಣ್ಣ ಮನವಿ

A S Ponnanna

1968ರಲ್ಲಿ ಪ್ರಾರಂಭವಾಗಿ ಸುಮಾರು 55 ವರ್ಷಗಳಿಂದ ಕಾವೇರಿ ಪದವಿ ಪೂರ್ವ ಕಾಲೇಜು ಗೋಣಿಕೊಪ್ಪ ಕಾವೇರಿ ಪದವಿಪೂರ್ವ ಕಾಲೇಜು ವಿರಾಜ್ ಪೇಟೆಯಲ್ಲಿ ಎರಡು ಸಂಸ್ಥೆಗಳು ಉತ್ತಮ ಫಲಿತಾಂಶ, ಗುಣಮಟ್ಟದ ಶಿಕ್ಷಣ ಸಾಧನೆ ಮೂಲ ಸೌಕರ್ಯ ಸೇರಿದಂತೆ ಜಿಲ್ಲೆಯಲ್ಲಿ ಒಳ್ಳೆಯ ಸ್ಥಾನ ಗುರುತಿಸಿಕೊಂಡಿದೆ. 20 ವರ್ಷಗಳ ಹಿಂದೆ ಸರ್ಕಾರದ ಆದೇಶದಂತೆ ಪ್ರಥಮ ದರ್ಜೆ ಹಾಗೂ ಪಿಯು ಕಾಲೇಜುಗಳನ್ನು ಬೇರ್ಪಡಿಸಿದಾಗ ಪಿಯು ಕಾಲೇಜು ಸಿಬ್ಬಂದಿಗಳು ಪೂರ್ಣಪ್ರಮಾಣದಲ್ಲಿ ಅನುದಾನಕ್ಕೆ ಒಳಪಡಬೇಕಾಗಿತ್ತು. ಆದರೆ ಆಗಲಿಲ್ಲ ಹಾಗಾಗಿ ಈ ಎರಡು ಕಾಲೇಜು ಸಂಸ್ಥೆಗಳನ್ನು ವಿಶೇಷ ಪ್ರಕರಣವೆಂದು […]

‘ವಂತಾರಾ’ ವನ್ಯಜೀವಿ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ: ಇಲ್ಲಿ ಏನೆಲ್ಲಾ ಇದೆ?

Vantara wildlife centre

ಗುಜರಾತ್‌ನ ಜಾಮ್ ನಗರದಲ್ಲಿರುವ ವಂತಾರ (Vantara) ವನ್ಯಜೀವಿ ರಕ್ಷಣೆ, ಪುನರ್ವಸತಿ ಮತ್ತು ಸಂರಕ್ಷಣಾ ಕೇಂದ್ರವನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಮಂಗಳವಾರದಂದು (ಮಾರ್ಚ್ 4) ಉದ್ಘಾಟಿಸಿದರು. ವಂತಾರದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ರಭೇದಗಳಿಗೆ ನೆಲೆ ಒದಗಿಸಲಾಗಿದೆ. ಮತ್ತು ಒಂದೂವರೆ ಲಕ್ಷಕ್ಕೂ ಹೆಚ್ಚು ರಕ್ಷಣೆ ಮಾಡಲಾದ, ಅಳಿವಿನಂಚಿನಲ್ಲಿರುವ ಮತ್ತು ಅಪಾಯದಲ್ಲಿರುವ ಪ್ರಾಣಿಗಳಿಗೆ ನೆಲೆಯಾಗಿದೆ. ವಂತಾರದಲ್ಲಿ ಇರುವಂಥ ವಿವಿಧ ಸೌಲಭ್ಯಗಳ ಬಗ್ಗೆ ಪ್ರಧಾನಿ ಮೋದಿ ಮಾಹಿತಿ ಪಡೆದರು. ಇನ್ನು ಪುನರ್ವಸತಿ ಒದಗಿಸಲಾದ ವಿವಿಧ ಪ್ರಭೇದದ ಪ್ರಾಣಿಗಳೊಂದಿಗೆ ಅವರು ಸಮಯವನ್ನು ಕಳೆದರು. […]

ಮಡಿಕೇರಿಯಲ್ಲಿ ಮಾ.08 ರಂದು ಉದ್ಯೋಗ ಮೇಳ

Job opportunity

ಮಡಿಕೇರಿ : ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳವನ್ನು ಏರ್ಪಡಿಸಿದೆ. ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ (Job Fair) ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ […]

ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು “ವುಮೆನ್‌ ವಾಕಥಾನ್‌”

Womens walkathon

ಬೆಂಗಳೂರು: ಮಹಿಳೆಯರು ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಲ್ಟಿಯಸ್‌ ಆಸ್ಪತ್ರೆಯ ನೇತೃತ್ವದಲ್ಲಿ “ಮಹಿಳಾ ದಿನಾಚರಣೆ” ಪ್ರಯುಕ್ತವಾಗಿ 3ನೇ ಆವೃತ್ತಿಯ “ಮಹಿಳಾ ವಾಕಥಾನ್‌”(Womens walkathon) ನನ್ನು ಆಯೋಜಿಸಲಾಗಿತ್ತು. ಈ ವಾಕಥಾನ್ ಅನ್ನು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವ ಮೂಲಕ ಯಶಸ್ವಿ ಗೊಳಿಸಿದರು. ಬೆಂಗಳೂರಿನ ಕಲ್ಯಾಣ ನಗರದ ಕೆಬಿಸಿ ಬ್ಯಾಸ್ಕೆಟ್‌ ಬಾಲ್‌ ಕೋರ್ಟ್‌ನಿಂದ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಂಡ ವಾಕಥಾನ್‌ನನ್ನು ಆಲ್ಟಿಯಸ್‌ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರಿಯಾ ಎಸ್‌. […]

‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ ಕುರಿತು ಜನಜಾಗೃತಿ ಕಾರ್ಯಕ್ರಮ

FMC college Madikeri

ಮಡಿಕೇರಿ: ಯುವ ಜನರು ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಸಲಹೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಕಾರದಲ್ಲಿ ‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ […]

ದತ್ತಿ ಪ್ರಶಸ್ತಿಗೆ ಹಿರಿಯ ಸಾಹಿತಿ ನಾಗೇಶ್ ಕಾಲೂರ್ ಆಯ್ಕೆ

Nagesh kaloor

ಪುರುಷ ಸಾಹಿತಿಗಳಿಗೆ ಮೀಸಲಿಟ್ಟಿರುವ ಪ್ರಪ್ರಥಮ ಹಾಗೂ ಪ್ರತಿಷ್ಠಿತ ದತ್ತಿ “ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಜಿಲ್ಲೆಯ ಹಿರಿಯ ಸಾಹಿತಿ ನಾಗೇಶ್ ಕಾಲೂರು (Nagesh kaloor) ರವರು ರಚಿಸಿದ “ಶ್ರೀ ಕಾವೇರಿ ದರ್ಶನಂ – ಸಮಗ್ರ ಕಾವೇರಿ ಚರಿತೆ” ಕೃತಿಯು ಪುರಸ್ಕೃತ ಗೊಂಡಿದೆ. ಜಿಲ್ಲೆಯ ದೈನಿಕ ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾದ ಬಿ.ಎಸ್ ಗೋಪಾಲಕೃಷ್ಣ ರವರ ಹೆಸರಿನಲ್ಲಿ ಅವರ ಪುತ್ರರು ಸ್ಥಾಪಿಸಿರುವ ಈ ದತ್ತಿಯ ಮೊದಲ ಪ್ರಶಸ್ತಿ ಇದಾಗಿದ್ದು, ಈ ದತ್ತಿ ಪ್ರಶಸ್ತಿಯ ಆಯ್ಕೆಗಾಗಿ ಜಿಲ್ಲೆಯ ಬರಹಗಾರರ […]

ಮಾ.4 ರಿಂದ ಸೈಂಟ್ ಆ್ಯನ್ಸ್ ಪದವಿ ಕಾಲೇಜು ಎನ್‌ಎಸ್‌ಎಸ್‌ ಶಿಬಿರ

NSS Camp

ವಿರಾಜಪೇಟೆ: ಮಾರ್ಚ್, 04 ರಿಂದ 10 ರವರೆಗೆ ವಿರಾಜಪೇಟೆಯ ಸೈಂಟ್ ಆ್ಯನ್ಸ್ ಪದವಿ ಕಾಲೇಜು ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವು (NSS Camp) ವಿರಾಜಪೇಟೆ ತಾಲ್ಲೂಕು ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಮಾರ್ಚ್, 04 ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬೇಟೋಳಿ ಗ್ರಾ.ಪಂ. ಅಧ್ಯಕ್ಷರಾದ ಅಚ್ಚಪಂಡ ಎಂ.ಬೋಪಣ್ಣ, ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ, ಹೆಗ್ಗಳ ಸ.ಹಿ.ಪ್ರಾ.ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ಬಿ.ಆರ್. […]

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

Illegal Activist

ಮಡಿಕೇರಿ ಗ್ರಾಮಾಂತರ ಪೊಲೀಸ್ (Police) ಠಾಣಾ ವ್ಯಾಪ್ತಿಯ ಗಾಳಿಬೀಡಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ/ಸರಬರಾಜು ಮಾಡುತ್ತಿದ್ದ ಆರೋಪಿ ಓರ್ವನನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಬೆಟ್ಟತ್ತೂರು ನಿವಾಸಿ ಜಿ.ಆರ್. ಕಿರಣ್ ಕುಮಾರ್ (35) ಎಂಬಾತ ಬಂಧಿಸಲ್ಪಟ್ಟಿರುವ ಆರೋಪಿಯಾಗಿದ್ದಾನೆ. ಆರೋಪಿ ದಿನಾಂಕ 28-02-2025 ರಂದು ಗಾಳಿಬೀಡು ಗ್ರಾಮದ ಗಣಪತಿ ದೇವಾಲಯದ ಸಮೀಪದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಸರಬರಾಜು ಮಾಡಲು ಯತ್ನಿಸುತ್ತಿದ್ದುದರ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ 43 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಂಡು […]

ಡ್ರಿಂಕ್‌ & ಡ್ರೈವ್‌ ಮತ್ತಿತರ ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಚಾಲಕನಿಗೆ 60 ಸಾವಿರ !

Traffic Police

ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ, ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸಿ ಮತ್ತು ಮೊಬೈಲ್ ನಲ್ಲಿ ಮಾತನಾಡಬೇಡಿ ಎಂದು ಪೊಲೀಸ್ ಇಲಾಖೆ ಅರಿವು ಮೂಡಿಸುತ್ತಲೇ ಇರುತ್ತದೆ. ಆದರೆ ಇದಕ್ಕೆ ಸೊಪ್ಪು ಹಾಕದ ಇಲ್ಲೋರ್ವ ಚಾಲಕ ಈ ಎಲ್ಲ ಸಂಚಾರಿ ನಿಯಮಗಳ ಉಲ್ಲಂಘನೆಗಾಗಿ ಬರೋಬ್ಬರಿ 60 ಸಾವಿರ ದಂಡ ವಿಧಿಸಿದ್ದಾರೆ. ಕುಶಾಲನಗರ ಸಂಚಾರಿ ಪೊಲೀಸ್ (Traffic Police) ಠಾಣಾ ಪೊಲೀಸರು ಕೊಪ್ಪ ಗೇಟ್ ಬಳಿ ದಿನಾಂಕ 28/02/2025 ರಂದು ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುತ್ತಿರುವ ಬಗ್ಗೆ ತಪಾಸಣೆ […]

Bengaluru Airport: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದೇಶದ ಅತಿದೊಡ್ಡ ಕಾರ್ಗೋ ಟರ್ಮಿನಲ್‌ ಪ್ರಾರಂಭ

Kempegowda International Airport

ಬೆಂಗಳೂರು:  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಆವರಣದಲ್ಲಿ ವಿನ್ಯಾಸ ಸಾಮರ್ಥ್ಯದಲ್ಲಿ ಭಾರತದಲ್ಲೇ ಅತಿದೊಡ್ಡ ಗ್ರೀನ್‌ಫೀಲ್ಡ್ ದೇಶೀಯ ಕಾರ್ಗೋ ಟರ್ಮಿನಲ್‌ (ಡಿಸಿಟಿ) ಪ್ರಾರಂಭವಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಮತ್ತು ವಾಯುಯಾನ ಸರಕು ಸಾಗಣೆ ಕ್ಷೇತ್ರದ ಮೆನ್ಜೀಸ್ ಏವಿಯೇಷನ್ ಸಂಸ್ಥೆಗಳ ಸಹಯೋಗದಲ್ಲಿ ನಿರ್ಮಾಣವಾದ 245,000 ಚದರ ಅಡಿ ವ್ಯಾಪ್ತಿಯ ಈ ಕಾರ್ಗೋ ಟರ್ಮಿನಲ್‌ನ್ನು, ದೇಶೀಯವಾಗಿ ಹೆಚ್ಚುತ್ತಿರುವ ವಾಯುಮಾರ್ಗ ಸರಕು ಸಾಗಣೆಯ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಅತ್ಯಾಧುನಿಕ ಮೂಲಸೌಕರ್ಯದೊಂದಿಗೆ ವಿಶಾಲವಾಗಿ ವಿನ್ಯಾಸಗೊಳಿಸಲಾಗಿದೆ. ಕೈಗಾರಿಕೆಗಳ ಸಂಪರ್ಕ […]