ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನಲ್ಲಿ ಯೋಗ ದಿನಾಚರಣೆ

ಒಂದು ದಿನಕ್ಕೆ ಸೀಮಿತವಾಗಿರದೆ ಪ್ರತಿನಿತ್ಯ ಯೋಗ ಮಾಡುವುದರಿಂದ ನಮ್ಮ ದೇಹ ಹಾಗೂ ಮನಸ್ಸಿನ ಸ್ವಾಸ್ಥ್ಯವನ್ನು ಕಾಪಾಡಬಹುದು ಎಂದು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶುಶ್ರೂಷಕ ಅಧಿಕಾರಿ, ಸರ್ಕಾರಿ ನೌಕರರ ಸಂಘದ ರಾಷ್ಟ್ರೀಯ ಮಟ್ಟದ ಯೋಗಪಟು ಎ.ಬಿ.ಲಲಿತ ಅಭಿಪ್ರಾಯ ಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು ದೈಹಿಕ ಮತ್ತು ಮಾನಸಿಕ ಸದೃಢತೆಯ ಹಿನ್ನಲೆಯಲ್ಲಿ ಯೋಗವು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿಯನ್ನು ಪಡೆದಿದೆ. ನರೇಂದ್ರ ಮೋದಿಯವರು ಪ್ರಧಾನಿಗಳಾದ ನಂತರ ಯೋಗಕ್ಕೆ […]
ಕ್ಲೋಸ್‌ಬರ್ನ್ ಸಹಿಪ್ರಾ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

ಮಡಿಕೇರಿ : ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ಥಳೀಯ ಬೆಳೆಗಾರರಾದ ಜೆ. ಶರತ್ ಬಾಬುರವರು ನೋಟ್ ಪುಸ್ತಕ ಹಾಗೂ ಪಠ್ಯ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಸಾಲಿನಿಂದ ಎಲ್‌ಕೆಜಿ, ಯುಕೆಜಿ ಕೂಡಾ ಆರಂಭವಾಗಿದ್ದು, ಏಳನೇ ತರಗತಿವರೆಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಹಿಂದಿನ ಶೈಕ್ಷಣಿಕ ಸಾಲಿನಲ್ಲೂ ಶರತ್ ಬಾಬು ನೋಟ್ ಪುಸ್ತಕಗಳನ್ನು ವಿತರಿಸಿದ್ದರು. ಈ ವರ್ಷವೂ ಮುಂದುವರೆಸಿದ್ದು, ಅಗತ್ಯ ಪರಿಕರಗಳನ್ನು ಶಾಲೆಗೆ ತಲುಪಿಸಿದ್ದು, ಶಿಕ್ಷಕರು ವಿದ್ಯಾರ್ಥಿಗಳಿಗೆ ವಿತರಿಸಿದರು. ಅವರ ಸೇವಾ ಮನೋಭಾವಕ್ಕೆ ಶಿಕ್ಷಕರು, ಎಸ್‌ಡಿಎಂಸಿ ಮೆಚ್ಚುಗೆ […]
ಗ್ಯಾರಂಟಿ ಭರವಸೆ ಈಡೇರಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ : ಜಿಲ್ಲಾ ಬಿಜೆಪಿ

ಮಡಿಕೇರಿ : ಮೂರು ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜನತೆಗೆ ಚುನಾವಣೆ ಸಂದರ್ಭದಲ್ಲಿ ನೀಡಿದ ಗ್ಯಾರಂಟಿ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬರುತ್ತದೆ ಎಂದು ಬಹುತೇಕ ಸಮೀಕ್ಷೆಯಲ್ಲಿ ಹೇಳಲಾಗಿತ್ತು. ಇದರಿಂದ ವಿಚಲಿತವಾದ ಕಾಂಗ್ರೆಸ್ ಚುನಾವಣೆ ಗೆಲ್ಲಲು ಬೇರೆ ಯಾವ ಮಾರ್ಗವಿಲ್ಲದೆ ಮತದಾರರಿಗೆ ಬಿಟ್ಟಿ ಭಾಗ್ಯಗಳ ಆಮಿಷ ಒಡ್ಡಿ ಚುನಾವಣೆ ಗೆದ್ದಿತ್ತು. ಆ ಸಂದರ್ಭದಲ್ಲಿ […]
ವಿವಿಧ ಅಂಗನವಾಡಿಗಳಲ್ಲಿ ಅರಿವು ಕಾರ್ಯಕ್ರಮ – ನಿವೃತ್ತರಾದ ಕಾರ್ಯಕರ್ತೆ, ಸಹಾಯಕಿಯರಿಗೆ ಬೀಳ್ಕೊಡುಗೆ

ಮಡಿಕೇರಿ : ಕೆ. ನೀಡುಗಣೆ ಗ್ರಾಮ ಪಂಚಾಯಿತಿಯ ಭಗವತಿ ನಗರ, ಭಾಗಮಂಡಲ ಗ್ರಾಮ ಪಂಚಾಯಿತಿಯ ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಅರಿವು ಕಾರ್ಯಕ್ರಮ ನಡೆಯಿತು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅಭಿಯಾನದ ಕುರಿತಾಗಿ ಮಾಹಿತಿ ನೀಡಿದರು. ಇಲಾಖೆ ವತಿಯಿಂದ ಜಿಲ್ಲಾಧ್ಯಂತ ಗ್ರಾಮ ಪಂಚಾಯಿತಿವಾರು ಬೇಟಿ ಬಚಾವೋ ಬೇಟಿ ಪಡವೋ ಕಾರ್ಯಕ್ರಮ, ಇಲಾಖೆಯ ಯೋಜನೆಗಳ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಲು ಕರೆ ನೀಡಿದರು. 36 ವರ್ಷ […]
ಪೊಲೀಸ್ ಹುದ್ದೆಯ ಕನಸು ಕಾಣುವವರಿಗೆ ಸುವರ್ಣಾವಕಾಶ: 3,395 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ರಾಜ್ಯಾದ್ಯಂತ ಒಟ್ಟು 3,395 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯಲ್ಲಿ ತೃತೀಯ ಲಿಂಗಿ ಸಮುದಾಯಕ್ಕೆ 35 ಹುದ್ದೆಗಳನ್ನು ಮೀಸಲಿರಿಸುವ ಮೂಲಕ ವಿಶೇಷ ಅವಕಾಶ ಕಲ್ಪಿಸಲಾಗಿದೆ. 2025ರಲ್ಲಿ ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೆ ಅವಕಾಶ ನೀಡಲಾಗಿದ್ದರೂ, ಆಯ್ಕೆ ಪ್ರಕ್ರಿಯೆ ಮತ್ತು ದೈಹಿಕ ಪರೀಕ್ಷೆಯ ಕುರಿತಾದ ಅರಿವಿನ ಕೊರತೆಯಿಂದಾಗಿ ಅಂದು ಕೇವಲ ಇಬ್ಬರು ಮಾತ್ರ ಆಯ್ಕೆಯಾಗಿದ್ದರು. ಈ ಬಾರಿಯ ನೇಮಕಾತಿಯಲ್ಲಿ ತೃತೀಯ ಲಿಂಗಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ದೃಢ […]
ಕರ್ನಾಟಕ ಆನೆ ಶಿಬಿರಗಳಲ್ಲಿ ಹೊಸ ಸುರಕ್ಷತಾ ನಿಯಮಗಳು!

ಕರ್ನಾಟಕ ಅರಣ್ಯ ಇಲಾಖೆಯು ಆನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆ ಹಾಗೂ ಆನೆಗಳ ಕ್ಷೇಮಕ್ಕಾಗಿ ಮೊದಲ ಬಾರಿಗೆ ಸಮಗ್ರ ‘ಕರ್ನಾಟಕ ಆನೆ ಶಿಬಿರ ಸುರಕ್ಷತಾ ಪ್ರೋಟೋಕಾಲ್’ ಅನ್ನು ಜಾರಿಗೆ ತಂದಿದೆ. ಕಳೆದ ಮೇ ತಿಂಗಳಲ್ಲಿ ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ತಮಿಳುನಾಡಿನ ಪ್ರವಾಸಿಗರೊಬ್ಬರು ಮೃತಪಟ್ಟ ದುರದೃಷ್ಟಕರ ಘಟನೆಯ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವಾಸಿಗರಿಗೆ ಪ್ರಮುಖ ನಿರ್ಬಂಧಗಳು: ದೂರ ಕಾಯ್ದುಕೊಳ್ಳಿ: ಆನೆಗಳಿಗೂ ಪ್ರವಾಸಿಗರಿಗೂ ಕನಿಷ್ಠ 30 ಅಡಿ ಅಂತರ ಕಡ್ಡಾಯ. ಮುಟ್ಟುವಂತಿಲ್ಲ: ಆನೆಗಳನ್ನು ಮುಟ್ಟುವುದು, ಅವುಗಳೊಂದಿಗೆ ಸ್ನಾನ […]
ಮಾರ್ನಿಂಗ್ ಸ್ಟಾರ್ ತಂಡದಲ್ಲಿ ತರಬೇತಿ ಪಡೆದು ಸೇನೆಗೆ ಆಯ್ಕೆಯಾದ 05 ತರುಣರಿಗೆ ಗೌರವದ ಬೀಳ್ಕೊಡುಗೆ

ಮಡಿಕೇರಿ : ನಗರದ ಮಾರ್ನಿಂಗ್ ಸ್ಟಾರ್ ತಂಡದಿಂದ ತರಬೇತಿ ಪಡೆದ ಐವರು ಯುವಕರು ಅಗ್ನಿವೀರ್ ಯೋಜನೆ ಮೂಲಕ ಭಾರತೀಯ ಸೇನೆಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದವರಿಗೆ ಅಭಿನಂದನೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ಶುಕ್ರವಾರ ಸಂಜೆ ನಗರದ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ತಂಡದ ಪ್ರಮುಖರಾದ ಸುರೇಶ್ ರೈ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು. ಸೇನೆಗೆ ಆಯ್ಕೆಯಾಗಿರುವ ಎಸ್.ವಿ. ಮೋಕ್ಷಿತ್ ಭಾಗಮಂಡಲ, ಡಿ.ಎಚ್. ಆಕಾಶ್ ಭಾಗಮಂಡಲ, ಎಚ್.ಆರ್. ಯಶ್ವಂತ್ ಕೂಡಿಗೆ, ಬಿ.ಜಿ. ಹರ್ಷಿತ್ ಚೆಂಬು, ಬಿ.ಎಸ್. ತಿಲಕ್ ಮಡಿಕೇರಿ ಅವರನ್ನು ಶಾಲು […]
ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ನಾಗಾಲ್ಯಾಂಡ್ ಮೂಲದ ಇಬ್ಬರು ಯುವಕರು ಜಲಸಮಾಧಿ

ಕುಶಾಲನಗರದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಈಶಾನ್ಯ ಭಾರತ ಮೂಲದ ಇಬ್ಬರು ಯುವಕರು ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಕುಶಾಲನಗರ ಗಡಿಭಾಗದ ಕಾವೇರಿ ಸೇತುವೆ ಬಳಿ ನದಿಯಲ್ಲಿ ಮುಳುಗಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದೆ. ನಾಗಾಲ್ಯಾಂಡ್ ರಾಜ್ಯದ ಬಸೊಸೊ ಕುಚಂಗ್ (23) ಹಾಗೂ ಯಾಂಕಂಗ್ (27) ಮೃತ ದುರ್ದೈವಿಗಳಾಗಿದ್ದಾರೆ. ಸಂಜೆ ವೇಳೆ ಘಟನೆ ನಡೆದಿದ್ದು ಕತ್ತಲು ಕವಿದಿದ್ದ ಹಿನ್ನೆಲೆಯಲ್ಲಿ ಮೃತದೇಹಗಳ ಪತ್ತೆ ಕಾರ್ಯಕ್ಕೆ ತೊಡಕಾಗಿದ್ದು, ಗುರುವಾರವೂ ಕಾರ್ಯಾಚರಣೆ ಮುಂದುವರಿಯಲಿದೆ. ಈ ಕುರಿತು ಕುಶಾಲನಗರ ಪೊಲೀಸ್ ಠಾಣೆಯಲ್ಲಿ […]
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ

ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 6.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.44 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 229.82 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 786.04 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 7.47 ಮಿ.ಮೀ. ಕಳೆದ ವರ್ಷ ಇದೇ ದಿನ 1.93 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 311.40 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ಕೊಡಗಿನ ಪ್ರಮುಖ ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ : ಸಂಸದ ಯದುವೀರ್ ಒಡೆಯರ್

ಮಡಿಕೇರಿ : ಕೊಡಗು ಜಿಲ್ಲೆಯ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRF) ಅಡಿಯಲ್ಲಿ ಜಿಲ್ಲೆಯ ಮೂರು ಪ್ರಮುಖ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ₹22 ಕೋಟಿ ಮಂಜೂರು ಮಾಡಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಈ ಮಂಜೂರಾತಿಯನ್ನು ಸ್ವಾಗತಿಸಿರುವ ಅವರು, ಕೊಡಗಿನ ಬಹುಕಾಲದ ರಸ್ತೆ ಅಭಿವೃದ್ಧಿ ಅಗತ್ಯಗಳಿಗೆ ಸ್ಪಂದಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ […]