ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಡಗು ಜಿಲ್ಲಾ ಬಿಜೆಪಿ ಅಹೋರಾತ್ರಿ ಧರಣಿ

ಮಡಿಕೇರಿ: ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚಬಾರದು, ಪರಿಶಿಷ್ಟ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆಡೆಗೆ ಬಳಸದಿರಿ, ಕಾಫಿ ಉತ್ಪಾದನೆ ಕುಂಠಿತವಾಗಿದ್ದು ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯ ಹಳೆಯ ಖಾಸಗಿ ಬಸ್‌ನಿಲ್ದಾಣದಲ್ಲಿ ಅಹೋರಾತ್ರಿ ಧರಣಿ ಪ್ರಾರಂಭಿಸಿದೆ. ಒಂದು ವೇಳೆ ಬೇಡಿಕೆಗಳು ಈಡೇರದೇ ಹೋದರೆ ಮಾರ್ಚ್ 11ರಂದು ಕೊಡಗು ಜಿಲ್ಲಾ ಬಂದ್‌ಗೆ ಕರೆ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಬಿಜೆಪಿ ಹೇಳಿದೆ. ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚದೇ ಉಳಿಸಬೇಕು, ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ […]
ಪೊಲೀಸ್ ಇಲಾಖೆ ವತಿಯಿಂದ ಮಡಿಕೇರಿಯಲ್ಲಿ ಮಾ.09 ರಂದು ಮ್ಯಾರಥಾನ್

ಪೊಲೀಸ್ ಇಲಾಖೆ ವತಿಯಿಂದ ‘ಫಿಟ್‍ನೆಸ್ ಫಾರ್ ಆಲ್’ ಎಂಬ ಧ್ಯೇಯದೊಂದಿಗೆ ಸಮಾಜದ ಆರೋಗ್ಯ ಕಾಪಾಡುವ ಸಂದೇಶದೊಂದಿಗೆ ಹಾಗೂ ಮಾದಕ ಮುಕ್ತ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲು ‘ಕರ್ನಾಟಕ ರಾಜ್ಯ ಪೊಲೀಸ್’ ಇಲಾಖಾ ವತಿಯಿಂದ ಮಾರ್ಚ್ 9 ರಂದು ಮ್ಯಾರಥಾನ್ (Marathon) ಓಟ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಕೇಂದ್ರಸ್ಥಾನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಮಾರ್ಚ್ 9 ರಂದು ಬೆಳಗ್ಗೆ 8 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಪ್ರಾರಂಭಿಸಿ ನಗರದ […]
ಸೈಂಟ್ ಆ್ಯನ್ಸ್ ಪದವಿ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನಾ ಕಾರ್ಯಕ್ರಮ

ಯಾವುದೇ ಫಲಾಪೆಕ್ಷೆ ಇಲ್ಲದೆ ಮಾಡುವ ನಿಶ್ವಾರ್ಥ ಸೇವೆಯು ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಚ್ಚಪಂಡ ಮಹೇಶ್ ಗಣಪತಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಸಂತ ಅನ್ನಮ್ಮ ಪದವಿ ಕಾಲೇಜು ವಿರಾಜಪೇಟೆ ಕೊಡಗು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನಾ (NSS) ಘಟಕದ ವತಿಯಿಂದ ಬೇಟೋಳಿ ಗ್ರಾಮ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ 2024-25 ನೇ ಸಾಲೀನ ವಾರ್ಷಿಕ ಶಿಭಿರದ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಶಿಬಿರವನ್ನು ಹೂ ಗಿಡಕ್ಕೆ ನೀರು ಎರೆಯುವ […]
ವಾಣಿಜ್ಯ ವಾಹನಗಳ ಕಾರ್ಯಕ್ಷಮತೆ ಹೆಚ್ಚಿಸಲು ಬಂತು ಹೊಸ ಫ್ಲೂಯಿಡ್

ಬೆಂಗಳೂರು: ಭಾರತದ ತೈಲ ಕಂಪನಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಮತ್ತು ದೇಶದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕ ಸಂಸ್ಥೆಯಾಗಿರುವ ಟಾಟಾ ಮೋಟಾರ್ಸ್ (Tata Motors) ಜಂಟಿಯಾಗಿ ಸಂಸ್ಥಾಪನೆ ಮಾಡಿರುವ ಜೆನ್ಯೂನ್ ಡೀಸೆಲ್ ಎಕ್ಸಾಸ್ಟ್ ಫ್ಲೂಯಿಡ್ (ಡಿಇಎಫ್) ಬ್ರಾಂಡ್ ಅನ್ನು ಬಿಡುಗಡೆ ಮಾಡಿದೆ. ಈ ಅತ್ಯುತ್ತಮ ಗುಣಮಟ್ಟದ ಡಿಇಎಫ್ ಉತ್ಪನ್ನವು ವಾಹನಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲಿದ್ದು, ಡ್ರೈವ್ ಟ್ರೇನ್ ದಕ್ಷತೆಯನ್ನು ಉತ್ತಮಗೊಳಿಸುತ್ತದೆ ಮತ್ತು ವಾಹನದ ಆಯುಷ್ಯವನ್ನು ಜಾಸ್ತಿ ಮಾಡುತ್ತದೆ. ಉದ್ಯಮದ ಉನ್ನತ ಮಾನದಂಡಗಳನ್ನು ಪೂರೈಸುವ ಬಿಐಎಸ್- ಪ್ರಮಾಣೀಕೃತ […]
Power Cut: ನಾಳೆ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಶನಿವಾರಸಂತೆ ಶಾಖಾ ವ್ಯಾಪ್ತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಶನಿವಾರಸಂತೆ ಟೌನ್, ಗುಡುಗಳಲೆ, ಕಾಜೂರು, ಕೂಜುಗೇರಿ, ಮಾದ್ರೆ, ಅಪ್ಪಶೆಟ್ಟಳ್ಳಿ, ಶೆಟ್ಟಿಗನ ಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕಾವೇರಿ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಶಿಕ್ಷಣ ಸಚಿವರಿಗೆ ಪೊನ್ನಣ್ಣ ಮನವಿ

1968ರಲ್ಲಿ ಪ್ರಾರಂಭವಾಗಿ ಸುಮಾರು 55 ವರ್ಷಗಳಿಂದ ಕಾವೇರಿ ಪದವಿ ಪೂರ್ವ ಕಾಲೇಜು ಗೋಣಿಕೊಪ್ಪ ಕಾವೇರಿ ಪದವಿಪೂರ್ವ ಕಾಲೇಜು ವಿರಾಜ್ ಪೇಟೆಯಲ್ಲಿ ಎರಡು ಸಂಸ್ಥೆಗಳು ಉತ್ತಮ ಫಲಿತಾಂಶ, ಗುಣಮಟ್ಟದ ಶಿಕ್ಷಣ ಸಾಧನೆ ಮೂಲ ಸೌಕರ್ಯ ಸೇರಿದಂತೆ ಜಿಲ್ಲೆಯಲ್ಲಿ ಒಳ್ಳೆಯ ಸ್ಥಾನ ಗುರುತಿಸಿಕೊಂಡಿದೆ. 20 ವರ್ಷಗಳ ಹಿಂದೆ ಸರ್ಕಾರದ ಆದೇಶದಂತೆ ಪ್ರಥಮ ದರ್ಜೆ ಹಾಗೂ ಪಿಯು ಕಾಲೇಜುಗಳನ್ನು ಬೇರ್ಪಡಿಸಿದಾಗ ಪಿಯು ಕಾಲೇಜು ಸಿಬ್ಬಂದಿಗಳು ಪೂರ್ಣಪ್ರಮಾಣದಲ್ಲಿ ಅನುದಾನಕ್ಕೆ ಒಳಪಡಬೇಕಾಗಿತ್ತು. ಆದರೆ ಆಗಲಿಲ್ಲ ಹಾಗಾಗಿ ಈ ಎರಡು ಕಾಲೇಜು ಸಂಸ್ಥೆಗಳನ್ನು ವಿಶೇಷ ಪ್ರಕರಣವೆಂದು […]
‘ವಂತಾರಾ’ ವನ್ಯಜೀವಿ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ: ಇಲ್ಲಿ ಏನೆಲ್ಲಾ ಇದೆ?

ಗುಜರಾತ್‌ನ ಜಾಮ್ ನಗರದಲ್ಲಿರುವ ವಂತಾರ (Vantara) ವನ್ಯಜೀವಿ ರಕ್ಷಣೆ, ಪುನರ್ವಸತಿ ಮತ್ತು ಸಂರಕ್ಷಣಾ ಕೇಂದ್ರವನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಮಂಗಳವಾರದಂದು (ಮಾರ್ಚ್ 4) ಉದ್ಘಾಟಿಸಿದರು. ವಂತಾರದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ರಭೇದಗಳಿಗೆ ನೆಲೆ ಒದಗಿಸಲಾಗಿದೆ. ಮತ್ತು ಒಂದೂವರೆ ಲಕ್ಷಕ್ಕೂ ಹೆಚ್ಚು ರಕ್ಷಣೆ ಮಾಡಲಾದ, ಅಳಿವಿನಂಚಿನಲ್ಲಿರುವ ಮತ್ತು ಅಪಾಯದಲ್ಲಿರುವ ಪ್ರಾಣಿಗಳಿಗೆ ನೆಲೆಯಾಗಿದೆ. ವಂತಾರದಲ್ಲಿ ಇರುವಂಥ ವಿವಿಧ ಸೌಲಭ್ಯಗಳ ಬಗ್ಗೆ ಪ್ರಧಾನಿ ಮೋದಿ ಮಾಹಿತಿ ಪಡೆದರು. ಇನ್ನು ಪುನರ್ವಸತಿ ಒದಗಿಸಲಾದ ವಿವಿಧ ಪ್ರಭೇದದ ಪ್ರಾಣಿಗಳೊಂದಿಗೆ ಅವರು ಸಮಯವನ್ನು ಕಳೆದರು. […]
ಮಡಿಕೇರಿಯಲ್ಲಿ ಮಾ.08 ರಂದು ಉದ್ಯೋಗ ಮೇಳ

ಮಡಿಕೇರಿ : ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳವನ್ನು ಏರ್ಪಡಿಸಿದೆ. ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ (Job Fair) ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ […]
ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು “ವುಮೆನ್ ವಾಕಥಾನ್”

ಬೆಂಗಳೂರು: ಮಹಿಳೆಯರು ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಲ್ಟಿಯಸ್ ಆಸ್ಪತ್ರೆಯ ನೇತೃತ್ವದಲ್ಲಿ “ಮಹಿಳಾ ದಿನಾಚರಣೆ” ಪ್ರಯುಕ್ತವಾಗಿ 3ನೇ ಆವೃತ್ತಿಯ “ಮಹಿಳಾ ವಾಕಥಾನ್”(Womens walkathon) ನನ್ನು ಆಯೋಜಿಸಲಾಗಿತ್ತು. ಈ ವಾಕಥಾನ್ ಅನ್ನು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವ ಮೂಲಕ ಯಶಸ್ವಿ ಗೊಳಿಸಿದರು. ಬೆಂಗಳೂರಿನ ಕಲ್ಯಾಣ ನಗರದ ಕೆಬಿಸಿ ಬ್ಯಾಸ್ಕೆಟ್ ಬಾಲ್ ಕೋರ್ಟ್‌ನಿಂದ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಂಡ ವಾಕಥಾನ್‌ನನ್ನು ಆಲ್ಟಿಯಸ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರಿಯಾ ಎಸ್. […]
‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ ಕುರಿತು ಜನಜಾಗೃತಿ ಕಾರ್ಯಕ್ರಮ

ಮಡಿಕೇರಿ: ಯುವ ಜನರು ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಸಲಹೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಕಾರದಲ್ಲಿ ‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ […]