ಮಿತ ಆಹಾರ ಸೇವನೆಯಿಂದ ಆರೋಗ್ಯಕರ ಜೀವನ ಸಾಧ್ಯ – ಮಂಜುನಾಥ್

ಮಡಿಕೇರಿ : ಮಿತವಾದ ಆಹಾರ ಸೇವನೆ, ಆರೋಗ್ಯಕರ ಚಟುವಟಿಕೆಯಿಂದ ಮಾತ್ರ ಆರೋಗ್ಯ ಸುಧಾರಣೆ ಸಾಧ್ಯವೆಂದು ಆಹಾರ ಸುರಕ್ಷತಾ ಸಹಾಯಕ ಅಧಿಕಾರಿ ಮಂಜುನಾಥ್ ಅಭಿಪ್ರಾಯಪಟ್ಟರು. ಕೋಪಟ್ಟಿ ಸಮೀಪದ ಚೆರಂಡೇಟಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಪೋಷಣ್ ಅಭಿಯಾನದ ಅಡಿಯಲ್ಲಿ ಅರಿವು ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮತೋಲನ ಆಹಾರದ ಕುರಿತು ಕಾರ್ಯಕ್ರಮಕ್ಕೆ ಸೀಮಿತವಾಗದೆ ಪ್ರತಿದಿನದ ಬದುಕಿನ ಭಾಗವಾಗಬೇಕು ಎಂದು ತಿಳಿಸಿದರು. ಮಡಿಕೇರಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಅವರು ಮಾತನಾಡಿ ಪ್ರತಿದಿನದ ಆಹಾರದಲ್ಲಿ ಸಮತೋಲನ ಆಹಾರ ಸೇವನೆ ಅಗತ್ಯವಾಗಿದ್ದು, […]
ಹೆಸರಿಗೆ ಬ್ಯೂಟಿ ಪಾರ್ಲರ್, ಮಸಾಜ್ ಸೆಂಟರ್ – ಆದ್ರೆ ಅಲ್ಲಿ ಆಗುತ್ತಿದ್ದ ಮಸಾಜ್ ಬೇರೆಯದ್ದೇ..!

ವೀರಾಜಪೇಟೆ : ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಪ್ರದೀಪನ್ ಮತ್ತು ಶಿಜು ಬಂಧಿತರು. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಇಬ್ಬರ ವಿರುದ್ಧ ವೀರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಂಧಿನಗರದಲ್ಲಿ ಖಾಸಗಿ ಕಟ್ಟಡವೊಂದನ್ನು ಬಾಡಿಗೆಗೆ ಪಡೆದಿದ್ದ ಇಬ್ಬರು ಆರೇಂಜ್ ಫ್ಯಾಮಿಲಿ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಸೆಂಟರ್ ನಡೆಸುತಿದ್ದರು. ಆದರೆ ಅಲ್ಲಿ ಬೇರೆಯದ್ದೇ ಚಟುವಟಿಕೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ ಇತ್ತು. ಕೆಲವರು ಐಶಾರಾಮಿ ಕಾರಿನಲ್ಲಿ ಬಂದು […]
ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಗೆ ವೀರಾಜಪೇಟೆಯ ಮುಹಮ್ಮದ್ ಅಶ್ಹದ್ ಆಯ್ಕೆ

ವೀರಾಜಪೇಟೆ : ಎಸ್‌ಎಸ್‌ಎಫ್ ಜಿಲ್ಲಾ ಘಟಕ ವತಿಯಿಂದ ಕಡಂಗದಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ ನಡೆಯಿತು. ಜೂನಿಯರ್ ವಿಭಾಗದ ಕನ್ನಡ ಕಥೆ ಹೇಳುವ ಸ್ಪರ್ಧೆಯಲ್ಲಿ ಕಲ್ಲುಬಾಣೆಯ ಮುಹಮ್ಮದ್ ಅಶ್ಹದ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತ ಕಲ್ಲುಬಾಣೆಯ ಹ್ಯಾರಿಸ್, ಅಮೀನ ದಂಪತಿಯ ಪುತ್ರ. ರಾಜ್ಯಮಟ್ಟದ ಸ್ಪರ್ಧೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ತುರ್ಕಳಿಕೆಯಲ್ಲಿ ಸೆ.26ರಿಂದ 28ರವರೆಗೆ ನಡೆಯಲಿದೆ.
ಮರಗೋಡುವಿನಲ್ಲಿ ʼದುರ್ಗಾಷ್ಟಮಿ ಮತ್ತು ಗೋಪೂಜೆʼ ಸೆ. 26ಕ್ಕೆ

ಮರಗೋಡು : ವಿಶ್ವ ಹಿಂದು ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಗಿನಿ ಮರಗೋಡು ಘಟಕ ವತಿಯಿಂದ ದುರ್ಗಾಷ್ಟಮಿ ಮತ್ತು ಗೋಪೂಜೆ ಸೆ.26ರಂದು ನಡೆಯಲಿದೆ. ಮರಗೋಡುವಿನ ಶಿವಪಾರ್ವತಿ ದೇವಾಲಯದಲ್ಲಿ ಬೆಳಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾತೃಶಕ್ತಿ ಪ್ರಮುಖ್ ಗುಡ್ಡೆಮನೆ ರೋಹಿಣಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದು, ನಿವೃತ್ತ ಶಿಕ್ಷಕಿ ಭಾಗೀರಥಿ ಹುಲಿತಾಳ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ 2025-26 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯ ಉದ್ದೇಶ; ಈ ಯೋಜನೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ನೇರವಾಗಿ ಸಾಲ- ಸಹಾಯಧನ ಮಂಜೂರು ಮಾಡಲು ಉದ್ದೇಶಿಸಿದೆ. ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು […]
ಮಡಿಕೇರಿ ಜನೋತ್ಸವ ದಸರಾ : ಸೆ.28 ರಂದು ಮಹಿಳಾ ದಸರಾ ಸಂಭ್ರಮ – ಹೆಂಗಳೆಯರಿಗಾಗಿ ಹಲವು ಸ್ಪರ್ಧೆಗಳು

ಮಡಿಕೇರಿ : ನಗರ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ 8 ನೇ ವರ್ಷದ ಮಹಿಳಾ ದಸರಾ ಆಯೋಜಿಸಲಾಗಿದ್ದು, ಸೆಪ್ಟೆಂಬರ್ 28 ರಂದು ನಡೆಯಲಿದೆ. ವೈವಿಧ್ಯಮಯ ಸ್ಪರ್ಧೆಗಳನ್ನು ಜಿಲ್ಲೆಯ ಮಹಿಳೆಯರಿಗಾಗಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ. ಮೆಹಂದಿ ಹಾಕುವುದು, ಭಾರತೀಯ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ, ಕೇಶವಿನ್ಯಾಸ, ಸೀರೆಗೆ ನಿಖರ ಬೆಲೆ ಹೇಳುವುದು, ಕಣ್ಣಿಗೆ ಬಟ್ಟೆ ಕಟ್ಟಿ ಮೇಕಪ್ ಮಾಡುವುದು, ಬಲೂನ್ ಗ್ಲಾಸ್ ಸ್ಪರ್ಧೆ, ಬಾಂಬ್ ಇನ್ ದಿ ಸಿಟಿ, ಕೆರೆ ದಡ ಆಟ, ಹಣೆಯಲ್ಲಿ […]
ವೀರಾಜಪೇಟೆ ಸೆಂಟ್ ಆನ್ಸ್ ಕಾಲೇಜಿನಲ್ಲಿ ಎಂ.ಕಾಂ ಪ್ರವೇಶಾತಿ ಆರಂಭ

ವೀರಾಜಪೇಟೆ : ವೀರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ ಎಂ.ಕಾಂ. ಸ್ನಾತಕೋತ್ತರ ವಿಭಾಗಕ್ಕೆ 2025 -26ನೇ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ. ನುರಿತ ಉಪನ್ಯಾಸಕರು, ಸುಸಜ್ಜಿತ ಕೊಠಡಿ, ಐಸಿಟಿ ತರಗತಿ, ಗ್ರಂಥಾಲಯ ವ್ಯವಸ್ಥೆ, ವೈಫೈ, ಕೆ ಸೆಟ್ ಹಾಗೂ ನೆಟ್ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ. ಜೊತೆಗೆ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ವಿಚಾರ ಮಂಡನೆ, ಇಂಡಸ್ಟ್ರಿಯಲ್ ವಿಸಿಟ್, ಹಾಗೂ ಇಂಟರ್ನ್‌ಶಿಪ್, ಬೋಧನಾ ಕೌಶಲ್ಯ ತರಬೇತಿ, ಸೆಮಿನಾರ್, ಫೆಸ್ಟ್‌ಗಳಲ್ಲಿ ಪಾಲ್ಗೊಳ್ಳುವಿಕೆ, ಹಾಗೂ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. […]
ಗೋಣಿಕೊಪ್ಪ ದಸರಾ : ಕೊಪ್ಪ ಮಂಟಪ ಸಮಿತಿ ಅಧ್ಯಕ್ಷರಾಗಿ ಸುದೀಶ್ ರೈ ಆಯ್ಕೆ

ಗೋಣಿಕೊಪ್ಪ : ಇಲ್ಲಿನ ಸ್ನೇಹಿತ ಬಳಗ ಕೊಪ್ಪದ 36ನೇ ವರ್ಷದ ಮಂಟಪ ಸಮಿತಿ ಅಧ್ಯಕ್ಷರಾಗಿ ಸುದೀಶ್ ರೈ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಮಿತಿ ಸಭೆಯಲ್ಲಿ ಸುದೀಶ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಕಾರ್ಯಾಧ್ಯಕ್ಷರಾಗಿ ಕಾಡ್ಯಮಾಡ ಚೇತನ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್, ಖಜಾಂಚಿಯಾಗಿ ಅನೀಸ್ ಆಯ್ಕೆಯಾಗಿದ್ದಾರೆ.
ನಾಡಹಬ್ಬ ಮೈಸೂರು ದಸರಾ 2025 – ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಸುಪ್ರೀಂ ಅಸ್ತು..!

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ 2025 ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್ ಉದ್ಘಾಟಿಸುವುದಕ್ಕೆ ತಡೆ ನೀಡಬೇಕೆಂದು ಸಲ್ಲಿಕೆಯಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಅದನ್ನು ವಜಾಗೊಳಿಸಿದ ಕೋರ್ಟ್ ದಸರಾ ಉದ್ಘಾಟಿಸಲು ಬಾನು ಮುಷ್ತಾಕ್ ಅವರಿಗೆ ಅನುಮತಿ ನೀಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾ.ಸಂದೀಪ್ ಮೆಹ್ತಾ ಅವರಿದ್ದ ಪೀಠ ಕರ್ನಾಟಕ ಹೈಕೋರ್ಟ್ ಆದೇಶವನ್ನು […]
ಮಡಿಕೇರಿ ನಗರಸಭೆಗೆ ಲೋಕಾಯುಕ್ತ ದಿಢೀರ್ ದಾಳಿ..!

ಮಡಿಕೇರಿ : ಮಡಿಕೇರಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದಾರೆ. ನಗರಸಭೆಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳು ವಿಳಂಬವಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಂದು ದಿಢೀರ್ ದಾಳಿಯಾಗಿದೆ. ನಗಸಭೆಯ ವಿವಿಧ ವಿಭಾಗದ ಕಚೇರಿಗಳಿಗೆ ದಾಳಿ ನಡೆಸಿದ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸಿದ್ದಾರೆ. ದಾಳಿ ಹಿನ್ನೆಲೆಯಲ್ಲಿ ನಗರಸಭೆ ಕಚೇರಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.