ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಕ್ಕೆ ಅವಧಿ ವಿಸ್ತರಣೆ – ಹೆಚ್ಚಿನ ವಿವರ ಇಲ್ಲಿದೆ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕ.ರಾ.ಮು.ವಿ ಮಡಿಕೇರಿಯಲ್ಲಿ 2025-26 ಸಾಲಿನ ಪ್ರವೇಶಾತಿಯ ಕೊನೆಯ ದಿನಾಂಕವನ್ನು ಅಕ್ಟೋಬರ್, 10 ರವರೆಗೆ ವಿಸ್ತರಿಸಲಾಗಿದೆ. ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ 2025-26 ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್‍ಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2025-26ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯು.ಜಿ.ಸಿ […]
ಚಿಕ್ಕತ್ತೂರುವಿನಲ್ಲಿ ಪೋಷಣ ಅಭಿಯಾನ ಮತ್ತು ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಕುಶಾಲನಗರ : ಚಿಕ್ಕತ್ತೂರು ಗ್ರಾಮದಲ್ಲಿ ಪೋಷಣ ಅಭಿಯಾನ ಮತ್ತು ಆತ್ಮಹತ್ಯೆ ತಡೆ ದಿನಾಚರಣೆ ನಡೆಯಿತು. ಕೂಡುಮಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ದೇಶದಲ್ಲಿ ಅಪೌಷ್ಟಿಕತೆ ತಡೆಯುವುದು ಮತ್ತು ಕಡಿಮೆ ತೂಕದ ಶಿಶುಗಳ ಜನನ ಮಟ್ಟವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸರ್ಕಾರಗಳು ಹೆಚ್ಚಿನ ಒತ್ತು ನೀಡಬೇಕೆಂದು ಹೇಳಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಮಾತನಾಡಿ, ಅಪೌಷ್ಟಿಕತೆಯಿಂದ ಪೌಷ್ಟಿಕತೆಯಡೆಗೆ ಸಮುದಾಯವನ್ನು ಕೊಂಡೊಯ್ಯುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶ. ವಿಶ್ವದಾದ್ಯಂತ ಏಳರಿಂದ ಎಂಟು ಲಕ್ಷ ಜನರು ಪ್ರತಿ ವರ್ಷ […]
ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ

ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರ ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಾಲ್ಕು ದಿನದ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿಯು ನಡೆಯುತ್ತಿದ್ದು, ಈ ಕಾರ್ಯಕ್ರಮ ಉದ್ಘಾಟಿಸಿ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬಿ ರವರು ಮಾತನಾಡಿ, ರಾಜಕೀಯವನ್ನು ಪ್ರವೇಶಿಸಿದ ನಂತರ ಪಂಚಾಯಿತಿ ಅಧ್ಯಕ್ಷರಾಗಿ ಸಾರ್ವಜನಿಕ ಅಭಿವೃದ್ಧಿಗೆ ಶ್ರಮಿಸಿ, ಉತ್ತಮ ಸೇವೆ ಆಡಳಿತ ನೀಡಬೇಕೆಂಬ ಹಂಬಲ ಮಹಿಳಾ ಚುನಾಯಿತ ಪ್ರತಿನಿಧಿಗಳಲ್ಲಿರುತ್ತದೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ತಮ್ಮ ಅಧಿಕಾರದ ವ್ಯಾಪ್ತಿ ,ನೀತಿ […]
ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಸೆಪ್ಟೆಂಬರ್, 11 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಫೀಡರ್ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ಮೀನುಪೇಟೆ, ಸುಣ್ಣದ ಬೀದಿ, ಖಾಸಗಿ ಬಸ್ ನಿಲ್ದಾಣ, ಪೋಲಿಸ್ ಸ್ಠೇಷನ್ ಹಿಂಬಾಗ, ಆರ್ಜಿ, ಪೆರಂಬಾಡಿ, ಹೆಗ್ಗಳ, ತೋರ, ರಾಮನಗರ, ಬಟ್ಟಮಕ್ಕಿ, ಎಡಮಕ್ಕಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು […]
ಮಡಿಕೇರಿ ತಾಲೂಕು ಬಂಟರ ಸಂಘದ ವತಿಯಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅ.26ಕ್ಕೆ

ಮಡಿಕೇರಿ : ಮಡಿಕೇರಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟ ಸಮುದಾಯದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಅ.26ರಂದು ನಡೆಯಲಿದೆ. ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ ತಾಲೂಕು ಮಹಿಳಾ ಘಟಕ, ಯುವ ಬಂಟ್ಸ್ ಅಸೋಸಿಯೇಷನ್, ನಗರ ಬಂಟರ ಸಂಘ, ನಗರ ಮಹಿಳಾ ಘಟಕ, ವಿರಾಜಪೇಟೆ, ಸೋಮವಾರಪೇಟೆ ತಾಲೂಕು ಘಟಕದ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಶೈಕ್ಷಣಿಕವಾಗಿ ಸಾಧನೆಗೈದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು […]
ಪ್ರವಾಸಿಗರ ಮೇಲೆ ಹಲ್ಲೆ ಪ್ರಕರಣ – ನಂದಿಮೊಟ್ಟೆ ಜೀಪ್ ಚಾಲಕರ ವಿರುದ್ಧ ಪ್ರಕರಣ ದಾಖಲು..!

ಮಡಿಕೇರಿ : ನಗರದ ಹೊರವಲಯದ ನಂದಿಮೊಟ್ಟೆಯಲ್ಲಿ ಇತ್ತೀಚೆಗೆ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಂದಲಪಟ್ಟಿಗೆ ಬಾಡಿಗೆ ತೆರಳುವ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರವಾಸಿ ಕುಟುಂಬ ಹಾಗೂ ಸ್ಥಳೀಯ ಜೀಪ್ ಚಾಲಕರ ನಡುವೆ ಗಲಾಟೆ ನಡೆದು, ಈ ವೇಳೆ ಅಲ್ಲಿನ ಚಾಲಕರು ಕೆಲವರು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದರು. ಘಟನೆಯ ವಿಡಿಯೋ ಎಲ್ಲೆಡೆ ಹರಿದಾಡಿತ್ತು. ಬಳಿಕ ಹಲ್ಲೆಗೊಳಗಾದ ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ದಾಖಲೆ ಸಹಿತವಾಗಿ ಪೊಲೀಸ್ ಠಾಣೆಯಲ್ಲಿ ದೂರು […]
ಕಾಲೇಜು ಆವರಣದಲ್ಲಿ ಮಚ್ಚು ಹಿಡಿದು ರೀಲ್ಸ್ – ಕೇಸ್ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚಿಸಿದ ವಿದ್ಯಾರ್ಥಿ..!

ಕುಶಾಲನಗರದ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಮಾರಕಾಸ್ತ್ರ ಹಿಡಿದು ರಿಲ್ಸ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದ ವಿದ್ಯಾರ್ಥಿ ಈಗ ಕ್ಷಮೆ ಯಾಚಿಸಿದ್ದಾನರೆ. ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿ ಕಾಲೇಜಿನೊಳಗೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ, ಇದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾಲೇಜು ಪ್ರಾಂಶುಪಾಲರು ಹಾಗೂ ಆಡಳಿತ ವ್ಯವಸ್ಥೆ ವಿರುದ್ಧ ಕೂಡ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಮಾತ್ರವಲ್ಲ ಈ ಬಗ್ಗೆ ಕುಶಾಲನಗರ ಪೊಲೀಸ್ […]
ಚನ್ನಪಟ್ಟಣದಲ್ಲಿ ಕಾರು ಅಪಘಾತ : ಕೊಡಗಿನ ದಂಪತಿ ದುರ್ಮರಣ

ರಾಮನಗರ : ಚನ್ನಪಟ್ಟಣದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಕೊಡಗಿನ ದಂಪತಿ ದುರ್ಮರಣಕ್ಕೀಡಾಗಿದ್ದಾರೆ. ಪೊನ್ನಂಪೇಟೆ ತಾಲೂಕಿನ ಪೂಕೋಳ ಗ್ರಾಮದ ಕಾಳಿಮಾಡ ಸೋಮಯ್ಯ ಹಾಗೂ ಸರಸು ಎಂಬವರೇ ಮೃತ ದಂಪತಿ. ಚನ್ನಪಟ್ಟಣ ತಾಲೂಕಿನ ದೇವರ ಹೊಸಹಳ್ಳಿ ಬಳಿ ಕಾರು ಅಪಘಾತಕ್ಕೀಡಾಗಿದೆ. ಜೊತೆಯಲ್ಲಿದ್ದ ಪುತ್ರ ಸಜನ್ ಅಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.
ಸೆಪ್ಟೆಂಬರ್ ೧೦ ರಂದು ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ..!

ಮಡಿಕೇರಿ : ೬೬/೧೧ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12 ರಾಜಾಸೀಟ್ ಫೀಡರ್‌ನಲ್ಲಿ ಸೆಪ್ಟೆಂಬರ್ ೧೦ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ದಸರಾ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಡಿ.ಸಿ ಕಚೇರಿ, ರಾಜಸೀಟ್ ರಸ್ತೆ, ಇಂದಿರಾನಗರ, ಚಾಮುಂಡೇಶ್ವರಿ ನಗರ, ನ್ಯೂ ಎಕ್ಸಟೆಂಕ್ಷನ್, ಎಲ್.ಐ.ಸಿ ರಸ್ತೆ, ಸ್ಟುವರ್ಟ್ ಹಿಲ್, ಗೌಳಿ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಂಜಿನಿಯರ್ […]
ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸೆ.೧೧ ಮತ್ತು ೧೨ ರಂದು ವಿವಿಧೆಡೆ ಜನ ಸಂಪರ್ಕ ಸಭೆ

ಮಡಿಕೇರಿ : ಗೋಣಿಕೊಪ್ಪ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ಸೆಪ್ಟೆಂಬರ್ ೧೧ ರಂದು ಬೆಳಗ್ಗೆ ೧೧.೩೦ ಗಂಟೆಯಿಂದ ೧೨.೩೦ ಗಂಟೆವರೆಗೆ ಗೋಣಿಕೊಪ್ಪ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆ ಸೆಪ್ಟೆಂಬರ್ ೧೧ ರಂದು ಮಧ್ಯಾಹ್ನ ೦೨.೩೦ ಗಂಟೆಯಿಂದ ೦೩.೩೦ ಗಂಟೆವರೆಗೆ ವಿರಾಜಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೋಮವಾರಪೇಟೆ […]