ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ವಿರಾಜಪೇಟೆ: ಪಟ್ಟಣದ ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯು ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಪಾಲ್ಗೊಂಡಿದ್ದು ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಆಯೋಜಿಸಲಾಗಿತ್ತು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ರವರು ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆಯನ್ನು ನೀಡಿದರು. ಬಳಿಕ ಅವರು ಮಾತನಾಡಿ ಸರ್ಕಾರವು ದೇಶಾದ್ಯಂತ ಪೋಲಿಯೋವನ್ನು ನಿರ್ಮೂಲನೆ ಮಾಡಿ ಪೋಲಿಯೋ ಮುಕ್ತ ಭಾರತವನ್ನು ನಿರ್ಮಿಸುವ ಉದ್ದೇಶವನ್ನು ಹೊಂದಿದೆ. ಸರ್ಕಾರ ಹಾಗೂ ಆರೋಗ್ಯ ಇಲಾಖೆಯ […]

ಕಳೆದ 24 ಗಂಟೆ ಅವಧಿಯಲ್ಲಿ ಕೊಡಗಿನಲ್ಲಿ ಸುರಿದ ಮಳೆ ಮಾಹಿತಿ ಇಲ್ಲಿದೆ

Kodagu Rain

ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 9.78 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 60.92 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 302.02 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1234.91 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 16.60 ಮಿ.ಮೀ. ಕಳೆದ ವರ್ಷ ಇದೇ ದಿನ 57.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 485.30 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]

ನಟಿ ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ಆತ್ಮಹತ್ಯೆ

Krishi Thapanda

ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ (Krishi Thapanda) ಅವರ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ (RR Nagar) ಅಪಾರ್ಟ್‌ಮೆಂಟ್‌ನಲ್ಲಿ ಅವರ ಆಪ್ತ ಗೆಳೆಯ, ಉದ್ಯಮಿ ವೈಶಾಖ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ. ಜೂನ್ 24ರಂದು ಕೃಷಿ ತಾಪಂಡ ಅವರ ಮನೆಗೆ ಬಂದಿದ್ದ ವೈಶಾಖ್, ಇಂದು (ಜೂನ್ 25) ಏಕಾಏಕಿ ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಆರ್.ಆರ್. ನಗರ ಪೊಲೀಸರು ಭೇಟಿ ನೀಡಿ […]

ಅಂತರಾಷ್ಟ್ರೀಯ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ವಿರಾಜಪೇಟೆಯ ಪ್ರಜ್ವಲ್ ಸಾಧನೆ

ಬೆಂಗಳೂರು ಯೂನಿವರ್ಸಿಟಿಯಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ನೈಸರ್ಗಿಕ ದೇಹದಾರ್ಢ್ಯ ಸ್ಪರ್ಧೆಯಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಜ್ವಲ್ ವಿ. ಎಂ. ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 13 ರಿಂದ 19 ವರ್ಷದೊಳಗಿನ ವಿಭಾಗದಲ್ಲಿ ಸ್ಪರ್ಧಿಸಿದ್ದ ಇವರು, ಪಿಯುಸಿ ಓದಿನ ನಡುವೆಯೂ ಕಠಿಣ ಪರಿಶ್ರಮದಿಂದ ಈ ಮೈಲಿಗಲ್ಲು ತಲುಪಿದ್ದಾರೆ. ಗಾಂಧಿನಗರದ ಪಿ. ಎ. ಮಂಜುನಾಥ್ ಹಾಗೂ ಉಪನ್ಯಾಸಕಿ ಅಶ್ವಿನಿ ದಂಪತಿಯ ಪುತ್ರನಾದ ಪ್ರಜ್ವಲ್‌ಗೆ ಜಿಮ್ ತರಬೇತುದಾರರಾದ ಲಕ್ಷ್ಮೀಶ್ ಮತ್ತು ರವಿ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಯ […]

ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನಲ್ಲಿ ಯೋಗ ದಿನಾಚರಣೆ

ಒಂದು ದಿನಕ್ಕೆ ಸೀಮಿತವಾಗಿರದೆ ಪ್ರತಿನಿತ್ಯ ಯೋಗ ಮಾಡುವುದರಿಂದ ನಮ್ಮ ದೇಹ ಹಾಗೂ ಮನಸ್ಸಿನ ಸ್ವಾಸ್ಥ್ಯವನ್ನು ಕಾಪಾಡಬಹುದು ಎಂದು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶುಶ್ರೂಷಕ ಅಧಿಕಾರಿ, ಸರ್ಕಾರಿ ನೌಕರರ ಸಂಘದ ರಾಷ್ಟ್ರೀಯ ಮಟ್ಟದ ಯೋಗಪಟು ಎ.ಬಿ.ಲಲಿತ ಅಭಿಪ್ರಾಯ ಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು ದೈಹಿಕ ಮತ್ತು ಮಾನಸಿಕ ಸದೃಢತೆಯ ಹಿನ್ನಲೆಯಲ್ಲಿ ಯೋಗವು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿಯನ್ನು ಪಡೆದಿದೆ. ನರೇಂದ್ರ ಮೋದಿಯವರು ಪ್ರಧಾನಿಗಳಾದ ನಂತರ ಯೋಗಕ್ಕೆ […]

ಕ್ಲೋಸ್‌ಬರ್ನ್‌ ಸಹಿಪ್ರಾ ಶಾಲೆ ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕ ವಿತರಣೆ

ಮಡಿಕೇರಿ : ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ಥಳೀಯ ಬೆಳೆಗಾರರಾದ ಜೆ. ಶರತ್‌ ಬಾಬುರವರು ನೋಟ್‌ ಪುಸ್ತಕ ಹಾಗೂ ಪಠ್ಯ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಸಾಲಿನಿಂದ ಎಲ್‌ಕೆಜಿ, ಯುಕೆಜಿ ಕೂಡಾ ಆರಂಭವಾಗಿದ್ದು, ಏಳನೇ ತರಗತಿವರೆಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಹಿಂದಿನ ಶೈಕ್ಷಣಿಕ ಸಾಲಿನಲ್ಲೂ ಶರತ್‌ ಬಾಬು ನೋಟ್‌ ಪುಸ್ತಕಗಳನ್ನು ವಿತರಿಸಿದ್ದರು. ಈ ವರ್ಷವೂ ಮುಂದುವರೆಸಿದ್ದು, ಅಗತ್ಯ ಪರಿಕರಗಳನ್ನು ಶಾಲೆಗೆ ತಲುಪಿಸಿದ್ದು, ಶಿಕ್ಷಕರು ವಿದ್ಯಾರ್ಥಿಗಳಿಗೆ ವಿತರಿಸಿದರು. ಅವರ ಸೇವಾ ಮನೋಭಾವಕ್ಕೆ ಶಿಕ್ಷಕರು, ಎಸ್‌ಡಿಎಂಸಿ ಮೆಚ್ಚುಗೆ […]

ಗ್ಯಾರಂಟಿ ಭರವಸೆ ಈಡೇರಿಸುವಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲ : ಜಿಲ್ಲಾ ಬಿಜೆಪಿ

ಮಡಿಕೇರಿ : ಮೂರು ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜನತೆಗೆ ಚುನಾವಣೆ ಸಂದರ್ಭದಲ್ಲಿ ನೀಡಿದ ಗ್ಯಾರಂಟಿ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬರುತ್ತದೆ ಎಂದು ಬಹುತೇಕ ಸಮೀಕ್ಷೆಯಲ್ಲಿ ಹೇಳಲಾಗಿತ್ತು. ಇದರಿಂದ ವಿಚಲಿತವಾದ ಕಾಂಗ್ರೆಸ್ ಚುನಾವಣೆ ಗೆಲ್ಲಲು ಬೇರೆ ಯಾವ ಮಾರ್ಗವಿಲ್ಲದೆ ಮತದಾರರಿಗೆ ಬಿಟ್ಟಿ ಭಾಗ್ಯಗಳ ಆಮಿಷ ಒಡ್ಡಿ ಚುನಾವಣೆ ಗೆದ್ದಿತ್ತು. ಆ ಸಂದರ್ಭದಲ್ಲಿ […]

ವಿವಿಧ ಅಂಗನವಾಡಿಗಳಲ್ಲಿ ಅರಿವು ಕಾರ್ಯಕ್ರಮ – ನಿವೃತ್ತರಾದ ಕಾರ್ಯಕರ್ತೆ, ಸಹಾಯಕಿಯರಿಗೆ ಬೀಳ್ಕೊಡುಗೆ

ಮಡಿಕೇರಿ : ಕೆ. ನೀಡುಗಣೆ ಗ್ರಾಮ ಪಂಚಾಯಿತಿಯ ಭಗವತಿ ನಗರ, ಭಾಗಮಂಡಲ ಗ್ರಾಮ ಪಂಚಾಯಿತಿಯ ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಅರಿವು ಕಾರ್ಯಕ್ರಮ ನಡೆಯಿತು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅಭಿಯಾನದ ಕುರಿತಾಗಿ ಮಾಹಿತಿ ನೀಡಿದರು. ಇಲಾಖೆ ವತಿಯಿಂದ ಜಿಲ್ಲಾಧ್ಯಂತ ಗ್ರಾಮ ಪಂಚಾಯಿತಿವಾರು ಬೇಟಿ ಬಚಾವೋ ಬೇಟಿ ಪಡವೋ ಕಾರ್ಯಕ್ರಮ, ಇಲಾಖೆಯ ಯೋಜನೆಗಳ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಲು ಕರೆ ನೀಡಿದರು. 36 ವರ್ಷ […]

ಪೊಲೀಸ್ ಹುದ್ದೆಯ ಕನಸು ಕಾಣುವವರಿಗೆ ಸುವರ್ಣಾವಕಾಶ: 3,395 ಹುದ್ದೆಗಳಿಗೆ ಅರ್ಜಿ ಆಹ್ವಾನ

Karnataka constables Police Recruitment

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ರಾಜ್ಯಾದ್ಯಂತ ಒಟ್ಟು 3,395 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯಲ್ಲಿ ತೃತೀಯ ಲಿಂಗಿ ಸಮುದಾಯಕ್ಕೆ 35 ಹುದ್ದೆಗಳನ್ನು ಮೀಸಲಿರಿಸುವ ಮೂಲಕ ವಿಶೇಷ ಅವಕಾಶ ಕಲ್ಪಿಸಲಾಗಿದೆ. 2025ರಲ್ಲಿ ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೆ ಅವಕಾಶ ನೀಡಲಾಗಿದ್ದರೂ, ಆಯ್ಕೆ ಪ್ರಕ್ರಿಯೆ ಮತ್ತು ದೈಹಿಕ ಪರೀಕ್ಷೆಯ ಕುರಿತಾದ ಅರಿವಿನ ಕೊರತೆಯಿಂದಾಗಿ ಅಂದು ಕೇವಲ ಇಬ್ಬರು ಮಾತ್ರ ಆಯ್ಕೆಯಾಗಿದ್ದರು. ಈ ಬಾರಿಯ ನೇಮಕಾತಿಯಲ್ಲಿ ತೃತೀಯ ಲಿಂಗಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ದೃಢ […]

ಕರ್ನಾಟಕ ಆನೆ ಶಿಬಿರಗಳಲ್ಲಿ ಹೊಸ ಸುರಕ್ಷತಾ ನಿಯಮಗಳು!

Elephant Camps

ಕರ್ನಾಟಕ ಅರಣ್ಯ ಇಲಾಖೆಯು ಆನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆ ಹಾಗೂ ಆನೆಗಳ ಕ್ಷೇಮಕ್ಕಾಗಿ ಮೊದಲ ಬಾರಿಗೆ ಸಮಗ್ರ ‘ಕರ್ನಾಟಕ ಆನೆ ಶಿಬಿರ ಸುರಕ್ಷತಾ ಪ್ರೋಟೋಕಾಲ್’ ಅನ್ನು ಜಾರಿಗೆ ತಂದಿದೆ. ಕಳೆದ ಮೇ ತಿಂಗಳಲ್ಲಿ ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ತಮಿಳುನಾಡಿನ ಪ್ರವಾಸಿಗರೊಬ್ಬರು ಮೃತಪಟ್ಟ ದುರದೃಷ್ಟಕರ ಘಟನೆಯ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವಾಸಿಗರಿಗೆ ಪ್ರಮುಖ ನಿರ್ಬಂಧಗಳು: ದೂರ ಕಾಯ್ದುಕೊಳ್ಳಿ: ಆನೆಗಳಿಗೂ ಪ್ರವಾಸಿಗರಿಗೂ ಕನಿಷ್ಠ 30 ಅಡಿ ಅಂತರ ಕಡ್ಡಾಯ. ಮುಟ್ಟುವಂತಿಲ್ಲ: ಆನೆಗಳನ್ನು ಮುಟ್ಟುವುದು, ಅವುಗಳೊಂದಿಗೆ ಸ್ನಾನ […]