ಕ್ರೀಡಾ ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ (ಕೇರ್‌ಟೇಕರ್) ಹುದ್ದೆಗೆ (ಹೊರಗುತ್ತಿಗೆ ಆಧಾರದ ಮೇಲೆ) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಗಲು ಮತ್ತು ರಾತ್ರಿಯ ವೇಳೆಯಲ್ಲಿ ಕ್ಷೇಮಪಾಲಕರು ಕಿರಿಯರ ಕ್ರೀಡಾ ನಿಲಯದಲ್ಲಿಯೇ ಇರಬೇಕು. ಮಹಿಳಾ ಅಭ್ಯರ್ಥಿಯಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. ೦೮೨೭೨-೨೨೦೯೮೬ ಅಥವಾ ೯೪೮೦೦೩೨೭೧೨ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.

ನಿಮ್ಮ ಶಾಲೆ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿದ್ಯಾ..? ಸರ್ಕಾರದಿಂದ ಸಿಗುತ್ತೆ ಪ್ರೋತ್ಸಾಹ ಧನ – ನೀವೇನ್‌ ಮಾಡ್ಬೇಕು ಗೊತ್ತಾ..?

ಮಡಿಕೇರಿ : ರಾಜ್ಯ ಯುವನೀತಿ-೨೦೧೨ ಅನುಷ್ಠಾನ ಅಡಿಯಲ್ಲಿ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ೨೦೧೭-೧೮ನೇ ಸಾಲಿನಿಂದ ಅನ್ವಯವಾಗುವಂತೆ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ.೧ ಲಕ್ಷದಂತೆ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ಅನುದಾನದಲ್ಲಿ […]

ಕೊಡಗು ಜಿಲ್ಲೆಯಲ್ಲಿ ಕಂಬಳ, ಎತ್ತಿನ ಬಂಡಿ ಓಟ, ಮಲ್ಲಕಂಬ ಕ್ರೀಡಾಕೂಟಕ್ಕೆ ಸರ್ಕಾರದಿಂದ ಸಿದ್ಧತೆ..! ಇಲ್ಲಿದೆ ನೋಡಿ

ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ತಮ್ಮ ೨೦೨೫-೨೬ ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಘೋಷಿಸಿರುತ್ತಾರೆ. ಅದರಂತೆ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಯನ್ನು ಆಯೋಜಿಸಲು ಕೊಡಗು ಜಿಲ್ಲೆಯಲ್ಲಿ ಆಸಕ್ತಿ ಹೊಂದಿರುವ ಸಂಘ ಸಂಸ್ಥೆಗಳು ಒಂದು ವಾರದ ಒಳಗೆ ಅರ್ಜಿ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ದೂ.ಸಂ.೯೪೮೦೦೩೨೭೧೨ ಅಥವಾ […]

ಉದ್ಯಮಿ ಕುಂಜಿಲ ಯೂಸುಫ್ ನಿಧನ

ನಾಪೋಕ್ಲು ಕಕ್ಕಬ್ಬೆ ಬಳಿಯ ಕುಂಜಿಲ ಗ್ರಾಮದ ನಿವಾಸಿ ಹಲವು ವರ್ಷಗಳ ಹಿಂದೆ ಜಿಲ್ಲೆಯ ವಿವಿಧೆಡೆ ಸಂಚರಿಸುತ್ತಿದ್ದ ಐಡಿಯಲ್ ಬಸ್ಸಿನ ಮಾಲೀಕರಾಗಿದ್ದ ಕುಂಜಿಲ ಯೂಸುಫ್ (60)ರವರು ನಿಧನರಾಗಿದ್ದಾರೆ. ಮೃತರ ದಫನ ಕಾರ್ಯವು ಇಂದು ಮದ್ಯಾಹ್ನ ಕುಂಜಿಲ ಪೈನರಿ ಜುಮಾ ಮಸೀದಿಯ ಖಬರ್ ಸ್ಥಾನದಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ಮಡಿಕೇರಿ: ನಗರದ ವಿದ್ಯುತ್ 66/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಹಾಗೂ ಎಫ್5 ಜಿ.ಟಿ ರಸ್ತೆ ಫೀಡರ್‍ನಲ್ಲಿ ಆಗಸ್ಟ್, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿಬೀದಿ, ಪೆನ್ಸನ್ ಲೈನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆಎಸ್‍ಆರ್‍ಟಿಸಿ ಬಸ್ ಸ್ಟಾಂಡ್, ಹಳೆ ಖಾಸಗಿ ಬಸ್ ಸ್ಟಾಂಡ್, ಜಯನಗರ, ಅಶೋಕಪುರ, ಜಲಾಶ್ರಯ ಬಡಾವಣೆ, ಸರಕಾರಿ ಆಸ್ಪತ್ರೆ, ಮಂಗಳದೇವಿನಗರ, ಅರಣ್ಯಭವನ, ಚೈನ್‍ಗೇಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ […]

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ಆಕ್ರೋಶ – ಅನಿರ್ಧಿಷ್ಟಾವಧಿಗೆ ಪ್ರತಿಭಟನೆ ಮುಂದೂಡಿಕೆ..!

ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಆರಂಭಿಸಿದ್ದ ಮುಷ್ಕರವನ್ನ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು. ಈ ವೇಳೆ ನೌಕರರ ನಡೆಗೆ ಹೈಕೋರ್ಟ್ ಆಕ್ರೋಶ ವ್ಯಕ್ತಪರಿಸಿ, ನೌಕರರ ಸಂಘಟನೆಗಳಿಗೆ ತರಾಟೆ ತೆಗೆದುಕೊಂಡಿತು. ಮುಷ್ಕರದ ಬಗ್ಗೆ ಮಾಹಿತಿ ನೀಡಬೇಕು. ಇಲ್ಲದಿದ್ದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ಎಚ್ಚರಿಸಿತು. ಹೈಕೋರ್ಟ್‌ನಲ್ಲಿ ತರಾಟೆಗೊಳಗಾಗುತ್ತಿದ್ದಂತೆ ಸುದ್ದಿಗೊಷ್ಠಿ ನಡೆಸಿದ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್, ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ […]

ಕೊಡಗು ಜಿಲ್ಲೆಯ ಮಳೆ ಮಾಹಿತಿ ಇಲ್ಲಿದೆ

Kodagu rain

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 1.43 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.23 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2175.38 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2299.33 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.27 ಮಿ.ಮೀ. ಕಳೆದ ವರ್ಷ ಇದೇ ದಿನ 8.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3271.77 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]

KSRTC ನೌಕರರು ಹಠ ಮಾಡೋದ್ರಲ್ಲಿ ಅರ್ಥ ಇಲ್ಲ, ಸರ್ಕಾರದ ಪರಿಸ್ಥಿತಿ ಅರ್ಥ ಮಾಡ್ಕೊಳ್ಳಿ – ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಬೆಂಗಳೂರು : ಹಲವು ಬೇಡಿಕೆಗಳನ್ನ ಮುಂದಿಟ್ಟು ಕೆಎಸ್‌ಆರ್‌ಟಿಸಿ ನೌಕರರು ಇಂದಿನಿಂದ ಮುಷ್ಕರ ಆರಂಭಿಸಿದ್ದಾರೆ. ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಹೈಕೋರ್ಟ್‌ ಸೂಚಿಸಿತ್ತು. ಆದ್ರೆ ಅದನ್ನೂ ಲೆಕ್ಕಿಸದೆ ನೌಕರರು ಮುಷ್ಕರ ಶುರುಮಾಡಿದ್ದಾರೆ. ಮುಷ್ಕರದ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದು, ಅವರ ಬೇಡಿಕೆಗಳನ್ನ ನಮ್ಮ ಮುಂದಿಡುವುದು ತಪ್ಪಲ್ಲ. ಆದ್ರೆ ಅವ್ರು ಸರ್ಕಾರದ ಪರಿಸ್ಥಿತಿಯನ್ನ ಅರ್ಥ ಮಾಡಿಕೊಳ್ಳಬೇಕು. ಆಗದಿರೋದನ್ನ ಮಾಡಿ ಅಂತ ಹೇಳೋದಲ್ಲ ಎಂದಿದ್ದಾರೆ. ನಮಗೆ ನಾಗರಿಕರು ಇಂಪಾರ್ಟೆಂಟ್.‌ ಜನರಿಗೆ ಯಾರೂ ತೊಂದರೆ ಕೊಡಬೇಡಿ. ಕೆಲವು ಚಾಲಕರು, ನಿರ್ವಾಹಕರು ಕರ್ತವ್ಯಕ್ಕೆ […]

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ʼಬಾಲಗೋಕುಲ ಮಡಿಕೇರಿʼ ವತಿಯಿಂದ ಛದ್ಮವೇಷ ಸ್ಪರ್ಧೆ…

ಮಡಿಕೇರಿ : ʼಬಾಲಗೋಕುಲ ಮಡಿಕೇರಿʼ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.೧೭ರಂದು ʼಶ್ರೀ ಕೃಷ್ಣ, ಬಲರಾಮ, ರುಕ್ಮಣಿ, ರಾಧೆ, ದೇವಕಿ, ಯಶೋದೆ, ವಸುದೇವ ಹಾಗೂ ಕುಚೇಲರ ಛದ್ಮವೇಷʼ ಸಮಾಗಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲಾ ಛದ್ಮವೇಷದಧಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ ಉಡುಗೊರೆ ನೀಡಲಾಗುವುದು. ಭಾಗವಹಿಸಲು ಇಚ್ಚಿಸುವವರು 09-08-2025 ರೊಳಗೆ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಕೊಳ್ಳಬೇಕಿದೆ. ಮೊಬೈಲ್ ಸಂಖ್ಯೆ: 9448541328, 9740131805

Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ !

Power Cut

66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಆಗಸ್ಟ್, 05 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ಈ ಫೀಡರ್‍ಗಳ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಸದರಿ ಫೀಡರ್‍ನಿಂದ ಹೊರಹೊಮ್ಮುವ ವಿರಾಜಪೇಟೆ ಪಟ್ಟಣದ ದೊಡ್ಡಟ್ಟಿ ಚೌಕಿಯಿಂದ ಪ್ರೈವೇಟ್ ಬಸ್ ನಿಲ್ದಾಣದವರೆಗೆ(ದರ್ಶನ್ ಲಾಡ್ಜ್ ಪರಿವರ್ತಕ, ಅಭಿಲಾಷ್ ಸ್ಟೋರ್, ಬದ್ರಿಯಾಸ್ ಪಳ್ಳಿ, ಮಮತಾ ಲಾಡ್ಜ್, ಮತ್ತು ಪ್ರೈವೇಟ್ ಬಸ್‍ನಿಲ್ದಾಣದ ಪರಿವರ್ತಕಗಳಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ […]