ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆ ಬಿಟ್ಟುಹೋಗಿದ್ದಾರೆ..? : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಚಿಕ್ಕಬಳ್ಳಾಪುರ : ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಂದಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆ ಬಿಟ್ಟುಹೋಗಿದ್ದಾರೆ ಎಂದು ಪ್ರಶ್ನಿಸಿದರು. ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, […]

ರಾಜ್ಯದಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚಳ – ಕೋವಿಡ್‌ ಲಸಿಕೆ ಕಾರಣನಾ..? – ICMR, AIIMS ಅಧ್ಯಯನ ಹೇಳಿದ್ದೇನು..?

ನವದೆಹಲಿ : ರಾಜ್ಯದಲ್ಲೀಗ ಹೃದಯಾಘಾತಕ್ಕೊಳಗಾಗಿ ಮೃತರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಏನು ಕಾರಣ ಅನ್ನುವ ಬಗ್ಗೆ ವಿವಿಧ ವರ್ಗದ ಜನ ವಿವಿಧ ರೀತಿಯಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಕೋವಿಡ್‌ ಲಸಿಕೆಯ ಅಡ್ಡ ಪರಿಣಾಮವೇ ಹೃದಯಾಘಾತಕ್ಕೆ ಕಾರಣ ಅಂತ ಒಂದು ವರ್ಗ ವಾದಿಸುತ್ತಿದೆ. ಆದರೆ ಕೋವಿಡ್ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ICMR, AIIMS ನಡೆಸಿದ ಅಧ್ಯಯನದಲ್ಲಿ ತಿಳಿದುಬಂದಿದೆ. ಕೋವಿಡ್‌ ಲಸಿಕೆಯ ಅಡ್ಡಪರಿಣಾಮದಿಂದ ಈ ರೀತಿ ಆಗುತ್ತಿದೆ ಎಂಬ ಮಾತು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಆರೋಗ್ಯ ಮತ್ತು […]

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ

heavy rainfall

ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 19.06 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 27.41 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1437.30 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 876 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.33 ಮಿ.ಮೀ. ಕಳೆದ ವರ್ಷ ಇದೇ ದಿನ 33.23 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2053.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1280.46 […]

ಜು.03 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾಲೋಚನಾ ಸಭೆ

ಮಡಿಕೇರಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಜುಲೈ ೦೩ ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ ೧೨ ಗಂಟೆಗೆ ಮಡಿಕೇರಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಭವನದಲ್ಲಿ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಶಾಸಕರಾದ ಡಾ.ಮಂತರ್‌ಗೌಡ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಮುಖರು ತಿಳಿಸಿದ್ದಾರೆ.

ರೈತರಿಗೆ ಮಾಹಿತಿ : ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಅವಕಾಶ

ಮಡಿಕೇರಿ : ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು ೨೦೨೫-೨೬ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.೨ ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ […]

ಗ್ರಾಮ ಒನ್ ಕೇಂದ್ರ ನಡೆಸಲು ಆಸಕ್ತಿ ಹೊಂದಿದ್ದೀರಾ?- ಈ ಗ್ರಾಮಗಳಲ್ಲಿ ಅವಕಾಶವಿದೆ..!

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ ೧೦ ಗ್ರಾಮ ಪಂಚಾಯತ್‌ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ಪೊನ್ನಂಪೇಟೆಯ ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು ಮತ್ತು ಕಿರುಗೂರು, ಮಡಿಕೇರಿ ತಾಲ್ಲೂಕಿನ ಹಾಕತ್ತೂರು ಮತ್ತು ಕರಿಕೆ, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ ೧೫ ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ care@blsinternational.net […]

ಕೊಡಗು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ – ೧೦ ಮಂದಿ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ – ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಣೆಗೆ ಪತ್ರಿಕಾ ರಂಗದ ಕೊಡುಗೆ ಅಪಾರ : ಶಿವಕುಮಾರ್‌ ನಾಣಯ್ಯ ಅಭಿಮತ

ಮಡಿಕೇರಿ : ಪ್ರಜಾತಂತ್ರ ವ್ಯವಸ್ಥೆಗೆ ವಿವಿಧ ಕಾಲ ಘಟ್ಟಗಳಲ್ಲಿ ಎದುರಾದ ಸಂಕಷ್ಟಗಳ ಸಂದರ್ಭಗಳಲ್ಲೆಲ್ಲ ಪತ್ರಿಕಾ ಕ್ಷೇತ್ರ ಅದಕ್ಕೆ ಎದುರಾಗಿ ಕಾರ್ಯ ನಿರ್ವಹಿಸುವ ಮೂಲಕ ‘ಪ್ರಜಾಪ್ರಭುತ್ವ’ ವ್ಯವಸ್ಥೆಯ ಸಂರಕ್ಷಣೆಗೆ ಶ್ರಮಿಸಿರುವುದಾಗಿ ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಅಭಿಪ್ರಾಯಿಸಿದರು. ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿತ ‘ಪತ್ರಿಕಾ ದಿನಾಚರಣೆ’ ಮತ್ತು ವಾರ್ಷಿಕ ಪ್ರಶಸ್ತಿ ಪದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕೊಡಗು ಪತ್ರಕರ್ತರ ಸಂಘದ ‘ಸ್ವಾಸ್ಥ್ಯ ಸುಂದರ, ಸಮಾಜ’ ಎನ್ನುವ ಘೋಷವಾಕ್ಯದಂತೆ ಪತ್ರಿಕಾ ಕ್ಷೇತ್ರವು […]

ಕೊಡವ ಹಾಕಿ ಪ್ರೀಮಿಯರ್‌ ಲೀಗ್‌ – ಪಳೆ ತಾಲೂಕ್ ಚಾಂಪಿಯನ್, ಕೂರ್ಗ್ ಟೈಟಾನ್ಸ್ ರನ್ನರಪ್..!

ಮೈಸೂರು : ಚಾಮುಂಡಿ ವಿಹಾರ ಹಾಕಿ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಕೊಡವ ಹಾಕಿ ಪ್ರೀಮಿಯರ್ ಲೀಗ್‌ನಲ್ಲಿ ಪಳೆ ತಾಲೂಕ್ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಪಳೆ ತಾಲೂಕ್ ಹಾಗೂ ಕೂರ್ಗ್ ಟೈಟಾನ್ಸ್ ನಡುವೆ ಫೈನಲ್‌ ಪಂದ್ಯ ನಡೆಯಿತು. ಪಳೆ ತಾಲೂಕ್ ತಂಡ 3-1 ಗೋಲುಗಳ ಅಂತರದಲ್ಲಿ ಗೆದ್ದು ಕೊಡವ ಹಾಕಿ ಪ್ರೀಮಿಯರ್ ಲೀಗ್ ಚಾಂಪಿಯನ್ ಪಟ್ಟ ಅಲಂಕರಿಸಿತು. ರನ್ನರಪ್‌ ಪ್ರಶಸ್ತಿಗೆ ಕೂರ್ಗ್ ಟೈಟಾನ್ಸ್ ಭಾಜನವಾದರೆ, ಮೂರನೇ ಸ್ಥಾನಕ್ಕೆ ಕೊಡವು ವಾರಿಯರ್ಸ್ ತಂಡ ತೃಪ್ತಿ ಪಟ್ಟುಕೊಂಡಿತು. […]

ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ – ಜುಲೈ 01ರಂದು ಪ್ರದಾನ ಸಮಾರಂಭ..!

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ) ದಿಂದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ ಮಾಡಲಾಗಿದ್ದು, ಜಿಲ್ಲೆಯ ಹತ್ತು ಮಂದಿ ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜು.1 ರಂದು ಮಂಗಳವಾರ ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಕರ್ತರಾಗಿದ್ದ ದಿ.ಕೆ.ಬಿ. ಮಹಂತೇಶ್ ಸ್ಮರಣಾರ್ಥ ಅವರ ಪತ್ನಿ ಭಾಗೀರಥಿ ಅವರು […]

ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವನ್ಯ ಪ್ರಾಣಿ-ಮಾನವ ಸಂಘರ್ಷ ಪ್ರತಿಧ್ವನಿ : ಉಸ್ತುವಾರಿ ಸಚಿವ ಬೋಸರಾಜ್ ಹೇಳಿದ್ದೇನು..?

ಮಡಿಕೇರಿ : ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳ ಹಾಗೂ ಮಾನವ ಸಂಘರ್ಷ ನಿರಂತರವಾಗಿ ಮುಂದುವರಿದಿದ್ದು, ಅದನ್ನು ತಡೆಯುವ ನಿಟ್ಟಿನಲ್ಲಿ ಅರಣ್ಯ ಅಧಿಕಾರಿಗಳು ಅಗತ್ಯ ಕಾರ್ಯಯೋಜನೆ ರೂಪಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.‌ ಬೋಸರಾಜು ನಿರ್ದೇಶನ ನೀಡಿದ್ದಾರೆ. ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ೨೦೨೫-೨೬ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಡು ಪ್ರಾಣಿಗಳ ಹಾವಳಿ ನಿರಂತರವಾಗಿ ಇದ್ದು, ಇವುಗಳನ್ನು […]