ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಭೂಮಿಪೂಜೆ

ಮಡಿಕೇರಿ : ನಗರದ ಹೊರವಲಯದಲ್ಲಿರುವ ಕರ್ಣಂಗೇರಿ ಬಳಿ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ ಇತರರು ಇದ್ದರು. ಬಳಿಕ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ […]

ಈ ಬಾರಿ ೧೧ ದಿನ ನಾಡಹಬ್ಬ ದಸರಾ ಆಚರಣೆ – ವಿಜೃಂಭಣೆಯ ಉತ್ಸವಕ್ಕೆ ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ..!

ಬೆಂಗಳೂರು : ಈ ಬಾರಿಯ ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಮುಂದಾಗಿದೆ. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು. ಈ ಬಾರಿ […]

ಚಾಮರಾಜನಗರ : ಐದು ಹುಲಿ ಸಾವು ಪ್ರಕರಣ – ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ..!

ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ವಿಷವಿಕ್ಕಿದ್ದ ಮಾದರಾಜು, ನಾಗರಾಜು ಇಬ್ಬರನ್ನು ಮೊದಲು ಬಂಧಿಸಲಾಗಿತ್ತು. ಇದೀಗ ಪೊಲೀಸರು ಕೋನಪ್ಪ ಅಲಿಯಾಸ್ ಕೂನಯ್ಯ ಎಂಬಾತನನ್ನ ಬಂಧಿಸಿದ್ದಾರೆ. ಈತನನ್ನು ಮೃತ ಹಸುವಿನ ಮಾಲೀಕ ಎನ್ನಲಾಗಿದೆ. ಕಳ್ಳಬೇದೊಡ್ಡಿಯ ಮಾದುರಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇಂದು ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದಾರೆ.

ಸ್ವಸ್ತಿಕ್ ಯುವ ವೇದಿಕೆ ಗಣೇಶೋತ್ಸವ ಸಮಿತಿಗೆ ಜಂಟಿ ಅಧ್ಯಕ್ಷರಾಗಿ ಜಗದೀಶ್, ಮಿಲನ್ ಆಚಾರ್ಯ ಆಯ್ಕೆ

ಮಡಿಕೇರಿ : ಸ್ವಸ್ತಿಕ್ ಯುವ ವೇದಿಕೆಯ 24ನೇ ವರ್ಷದ ಗಣೇಶೋತ್ಸವ ಸಮಿತಿಯ ಜಂಟಿ ಅಧ್ಯಕ್ಷರಾಗಿ ಜಗದೀಶ್ (ಜಗ್ಗಿ) ಹಾಗೂ ಮಿಲನ್ ಆಚಾರ್ಯ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಂದ, ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತಿ, ಸಹ ಕಾರ್ಯದರ್ಶಿಯಾಗಿ ಪುನೀತ್ ಭೀಮಯ್ಯ, ಖಜಾಂಜಿಯಾಗಿ ಅಂಚೆಮನೆ ಸತೀಶ್ ಕುಟ್ಟಪ್ಪ, ಸಹ ಖಜಾಂಜಿಯಾಗಿ ಮನೋಹರ್, ಗೌರವರಾಧ್ಯಕ್ಷರಾಗಿ ಸವಿತಾ ರಾಕೇಶ್, ಪ್ರೇಮ ರಾಮಯ್ಯ, ರಶ್ಮಿ ಪ್ರವೀಣ್, ನಿರ್ದೇಶಕರಾಗಿ ಜಯನ್ ಡಿ, ಶಿವರಾಜ್, ಸೋನಲ್ ಎಂ.ಎಸ್, ಮಂಜುನಾಥ್, ಹೇಮಂತ್ ಕುಮಾರ್, ಸಮಿತಿ ಮುಖ್ಯಸ್ಥರಾಗಿ ಎಂ.ಎಸ್. ಪ್ರಸಾದ್ ಆಯ್ಕೆಯಾಗಿದ್ದಾರೆಂದು ಸಮಿತಿಯ […]

ಮೇಯಲು ಬಂದಿದ್ದ ಹಸು ವಿದ್ಯುತ್‌ ಸ್ಪರ್ಶವಾಗಿ ದುರ್ಮರಣ..!

ಕುಶಾಲನಗರದ : ವಿದ್ಯುತ್‌ ತಗಲಿ ಹಸುವೊಂದು ಮೃತಪಟ್ಟ ಘಟನೆ ರಾಧಾಕೃಷ್ಣ ಬಡಾವಣೆಯ ಓಂ ಶಾಂತಿ ಆಶ್ರಮದ ಉದ್ಯಾನದ ಬಳಿ ನಡೆದಿದೆ. ಪಾರ್ಕ್‌ ಬಳಿ ಮೇಯುತ್ತಿದ್ದ ವೇಳೆ ಹಸುವಿಗೆ ವಿದ್ಯುತ್‌ ಸ್ಪರ್ಶವಾಗಿ ಈ ದುರ್ಘಟನೆ ಸಂಭವಿಸಿದೆ.ಮುಳ್ಳುಸೋಗೆಯ ಎಂ.ಎಸ್.‌ ಪ್ರಸನ್ನ ಎಂಬವರಿಗೆ ಸೇರಿದ ಹಸುವಾಗಿದ್ದು, ತನ್ನ ಮುದ್ದಿನ ಹಸು ಮೃತಪಟ್ಟಿದ್ದನ್ನ ಕಂಡು ರೋಧಿಸುತ್ತಿದ್ದ ಚಿತ್ರಣ ಅಲ್ಲಿದ್ದವರಲ್ಲೂ ಕಂಬನಿ ತರಿಸಿತ್ತು. ಈ ವ್ಯಾಪ್ತಿಯಲ್ಲಿ ಹೆಚ್ಚಿನ ಮಕ್ಕಳು ಆಟವಾಡಲು ಬರುತ್ತಿರುತ್ತಾರೆ. ಇಂದು ರಜೆ ಕೂಡಾ ಇದ್ದುದ್ದರಿಂದ ಸಮಯ ಕಳೆದಂತೆ ಹೆಚ್ಚಿನ ಮಕ್ಕಳು ಬರುವ […]

ಉಪನ್ಯಾಸಕ ಡಾ. ಜ಼ಮೀರ್ ಅಹಮದ್ ಅವರಿಗೆ ‘ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ’ ಪ್ರದಾನ

ಬೆಂಗಳೂರು : ಕನ್ನಡ ಜಾನಪದ ಪರಿಷತ್ ವತಿಯಿಂದ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಜ಼ಮೀರ್ ಅಹಮದ್ ಅವರಿಗೆ ಕರ್ನಾಟಕ ಜಾನಪದ ಕಲೆ, ಸಾಹಿತ್ಯದ ಸಂರಕ್ಷಣೆಗಾಗಿ ಸಲ್ಲಿಸಿದ ಅಮೂಲ್ಯ ಸೇವೆಯನ್ನು ಗುರುತಿಸಿ ‘ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡ ಸಾಹಿತ್ಯ ವಿದ್ಯಾರ್ಥಿಯಾಗಿರುವ ಜಮೀರ್ ಅಹಮದ್, ಕುವೆಂಪು ಅವರ ವಿಶ್ವಮಾನವ ಸಂದೇಶವನ್ನು ಬದುಕಿನುದ್ದಕ್ಕೂ ಮೈಗೂಡಿಸಿಕೊಂಡು ಸರ್ವ […]

ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಆರ್ಭಟಿಸಿದ ಮಳೆ ಡಿಟೇಲ್ಸ್

kodagu rain

ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 40.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 92.22 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1367.96 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 737.17 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 71.28 ಮಿ.ಮೀ. ಕಳೆದ ವರ್ಷ ಇದೇ ದಿನ 160.07 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1950.48 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1083 […]

ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಗೆ ಭಾನುವಾರ ‘ಅಭಿವಂದನಾ ದೀಪಾ’ ಗೌರವ ಸಮರ್ಪಣೆ – ಏಕ ಕಾಲದಲ್ಲಿ ಹಲವಾರು ಸಂಘಟನೆಗಳಿಂದ ಸನ್ಮಾನ..

ಮಡಿಕೇರಿ : ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ಮಡಿಕೇರಿಯ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕತ೯ರ ಸಂಘದ ಆಶ್ರಯದಲ್ಲಿ ಜೂನ್ 29 ರಂದು ಭಾನುವಾರ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಜೂನ್ 29 ರಂದು ಭಾನುವಾರ ಸಂಜೆ 5 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆಯಲ್ಲಿ […]

ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ ಇಲ್ಲಿದೆ

heavy rainfall

ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 92.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 62.63 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1327.46 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 644.95 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 79 ಮಿ.ಮೀ. ಕಳೆದ ವರ್ಷ ಇದೇ ದಿನ 90.13 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1879.20 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]

ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ – ಈ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ – ಇಲ್ಲಿದೆ ಮಾಹಿತಿ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ನಾಳೆ ಮುಂಜಾನೆ 08:30 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ನಂತರ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ. ಸಾರ್ವಜನಿಕರು/ಮಕ್ಕಳು/ಕಾರ್ಮಿಕರು ಮಳೆ ಗಾಳಿ/ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು, ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರುವುದು ಮತ್ತು ಸಾರ್ವಜನಿಕರು/ಪ್ರವಾಸಿಗರು/ಮೀನುಗಾರರು ನದಿ/ನೀರಿರುವ ಪ್ರದೇಶಕ್ಕೆ […]