ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ: ವಿದ್ಯಾರ್ಥಿನಿ ನಿಧಿಗೆ ಶಾಸಕರಿಂದ ಸನ್ಮಾನ

ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ಮೂಲದವರು. ಇದೀಗ ರಾಷ್ಟ್ರೀಯ ಮಟ್ಟದ ನೀಟ್ (NEET) ಪರೀಕ್ಷೆಯಲ್ಲಿ 720 ಅಂಕಗಳಲ್ಲಿ 710 ಅಂಕಗಳನ್ನು ಪಡೆದು ಭಾರತದಲ್ಲಿ 84ನೇ ರ‍್ಯಾಂಕ್ ಮತ್ತು ಕರ್ನಾಟಕ ರಾಜ್ಯದಲ್ಲಿ ಗೌರವಾನ್ವಿತ 7ನೇ ಸ್ಥಾನವನ್ನು ಪಡೆದು ತಮ್ಮ ಗ್ರಾಮ ಹಾಗೂ ಜಿಲ್ಲೆಯ ಹೆಮ್ಮೆಗಾಗಿರುವ ವಿದ್ಯಾರ್ಥಿನಿ ಕೆ. ಜಿ. ನಿಧಿ ಅವರು ತಮ್ಮ ಈ ಅಪಾರ ಶ್ರದ್ಧೆ, ಪರಿಶ್ರಮ ಹಾಗೂ ಕನಸುಗಳನ್ನು ಪೂರೈಸುವ ದೃಢನಿಶ್ಚಯದಿಂದ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ […]
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಕೊಡಗು (kodagu)ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 68.54 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1142.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 529.05 ಮಿ.ಮೀ ಮಳೆಯಾಗಿತ್ತು. ಮಡಿಕೇರಿ : ಇಂದಿನ ಸರಾಸರಿ ಮಳೆ 99.60 ಮಿ.ಮೀ. ಕಳೆದ ವರ್ಷ ಇದೇ ದಿನ 13.08 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1713.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ಕುಶಾಲನಗರ : ಮಳೆ ಗಾಳಿಯಿಂದ ಮನೆಯ ಹಿಂಬದಿಯ ಗೋಡೆ ಕುಸಿತ

ಕುಶಾಲನಗರ (Kushalnagar) ತಾಲೂಕು, ಸುಂಟಿಕೊಪ್ಪ ಹೋಬಳಿಯ ಕಾನ್ ಬೈಲು ಬೈಚನಹಳ್ಳಿ ಗ್ರಾಮದ ನಿವಾಸಿಯಾದ ಪಿ ಬಿ ಗುರುವ ಪೌತಿ ಬಾಬು ಇವರ ವಾಸದ ಮನೆ ಭಾನುವಾರ ಸುರಿದ ಬಾರಿ ಮಳೆ ಗಾಳಿಯಿಂದ ಮನೆಯ ಹಿಂಬದಿಯ ಗೋಡೆ ಕುಸಿತವಾಗಿದ್ದು ಅಂದಾಜು 30% ಹಾನಿ ಉಂಟಾಗಿದೆ. ಸೋಮವಾರ ಕಂದಾಯ ಪರೀವಿಕ್ಷಕರು ಸುಂಟಿಕೊಪ್ಪ ಹೋಬ ಳಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಕೂರು ಶಿರಂಗಾಲರವರೊಂದಿಗೆ ಜಂಟಿ ಪರಿಶೀಲಿಸಿದರು.
ಇಂದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಪ್ರಕಟ!!

ಇಂದು ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ (Assembly By-Election) ಫಲಿತಾಂಶ. ಪಶ್ಚಿಮ ಬಂಗಾಳ, ಪಂಜಾಬ್, ಕೇರಳ ಮತ್ತು ಗುಜರಾತ್ ಈ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟಣೆ ಗುಜರಾತ್, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನ ಐದು ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆದಿತ್ತು. ಕೇರಳದ ನೀಲಾಂಬೂರ್‌ನಲ್ಲಿ ಸ್ವತಂತ್ರ ಶಾಸಕ ಪಿ.ವಿ.ಅನ್ವರ್ ಹಾಗೂ ಗುಜರಾತ್‌ನ ವಿಸಾವದರ್‌ನಲ್ಲಿ ಆಪ್ ಶಾಸಕ ಭೂಪೇಂದ್ರಭಾಯಿ ರಾಜೀನಾಮೆಯಿಂದ ಉಪಚುನಾವಣೆ ನಡೆದಿತ್ತು. ಭಾರತದ ನಾಲ್ಕು […]
ಭಾಗಮಂಡಲದಲ್ಲಿ ಆರೋಗ್ಯ ತಪಾಸಣಾ ಉಚಿತ ಶಿಬಿರ ಜೂನ್ 30ಕ್ಕೆ

ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘ ವತಿಯಿಂದ ರೋಟರಿ ಮಡಿಕೇರಿ ವುಡ್ಸ್ ಸಹಯೋಗದೊಂದಿಗೆ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ. ಜೂನ್ 30ರಂದು ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ತಪಾಸಣೆ, ಸ್ತ್ರೀರೋಗ, ಹೃದಯ ಸಂಬಂಧಿಸಿದ ಕಾಯಿಲೆಗಳ ತಪಾಸಣೆ ಮಾಡಲಾಗುವುದು. ಶಿಬಿರಕ್ಕೆ ಬರುವ ಮಂದಿಗೆ ಭಾಗಮಂಡಲ ಶ್ರೀ ಕಾವೇರಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಉಚಿತ ಸೇವೆ ಇರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. […]
ಸಾಂಸ್ಕೃತಿಕ ನಗರಿಯಲ್ಲಿ ಕೊಡವ ಹಾಕಿ ಪ್ರೀಮಿಯರ್ ಲೀಗ್ – ಜೂ. 27ರಿಂದ ಮೈಸೂರಿನಲ್ಲಿ ಚೊಟ್ಟಲ ಟೂರ್ನಿ

ವರದಿ : ಚೆಯ್ಯಂಡ ಬನೀತ್ ಬೋಜಣ್ಣ ಮೈಸೂರು : ಕೊಡಗು ಅಥವಾ ಕೊಡವರು ಎಂದಾಗ ನಮಗೆ ನೆನಪಿಗೆ ಬರುವ ಹಲವು ವಿಷಯಗಳಲ್ಲಿ ಕ್ರೀಡೆಯು ಒಂದು. ಅದರಲ್ಲೂ ಹಾಕಿ ಕ್ರೀಡೆ ಕೊಡಗಿನಲ್ಲಿ ಬಹಳ ಪ್ರಾಮುಖ್ಯತೆ ಪಡೆದುಕೊಂಡಿದೆ. ಭಾರತದ ಹಾಕಿ ತಂಡಕ್ಕೆ ನಮ್ಮ ಜಿಲ್ಲೆಯ ಅಸಂಖ್ಯಾತ ಆಟಗಾರರು ಆಡಿದ್ದಾರೆ. ಇದರಿಂದ ಕೊಡಗನ್ನು ಭಾರತದ ಹಾಕಿಯ ತೊಟ್ಟಿಲು ಎಂದು ಕರೆಯುತ್ತಾರೆ. ಹಾಕಿಯ ಮೂಲಕ ಕೊಡವ ಜನಾಂಗವನ್ನು ಮತ್ತಷ್ಟು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಕೊಡಗಿನಲ್ಲಿ ಕೊಡವ ಕೌಟುಂಬಿಕ ಹಾಕಿ ಉತ್ಸವ ನಡೆಯುತ್ತದೆ. […]
ಪಾಲಿಬೆಟ್ಟ : ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಯೋಗ ದಿನಾಚರಣೆ

ಪಾಲಿಬೆಟ್ಟ : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಮೇಲ್ವಿಚಾರಕಿ ಸುಮಯ್ಯ ಕೆ. ಎಂ., ಸಿಬ್ಬಂದಿ ಸುಜಾತ, ಪ್ರೀತು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕೊಡಗು ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಜೂ.27ಕ್ಕೆ

ಮಡಿಕೇರಿ : ೨೦೨೫-೨೬ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೆöÊಮಾಸಿಕ ಕೆಡಿಪಿ ಸಭೆಯು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅಧ್ಯಕ್ಷತೆಯಲ್ಲಿ ಜೂನ್, ೨೭ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.
ದುಬೈ-ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವಾರ್ಷಿಕ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ..!

ಮಡಿಕೇರಿ : ಸಂಯುಕ್ತ ಅರಬ್ ಸಂಸ್ಥಾನದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೊಡಗಿನ ಹಳೆ ವಿದ್ಯಾರ್ಥಿಗಳ ಸಂಘದ ಅವರ ವತಿಯಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹೊದವಾಡದ ರಾಫಲ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಶೈಕ್ಷಣಿಕವಾಗಿ ಸಾಧನೆಗೈಡ ಭಾಷಿತ, ಡಿಯಾನ, ಚರಿಷ್ಮಾ, ಹೇಮಾವತ, ಸಫಾನಾ, ಫಾಹಿನ ಅವರನ್ನು ಅಸೋಸಿಯೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಳೆ […]
ವಿದೇಶಿ ವಿದ್ಯಾರ್ಥಿ ವೇತನಕ್ಕೆ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!

ಮಡಿಕೇರಿ : ಪ್ರಸಕ್ತ (೨೦೨೫-೨೬) ಸಾಲಿಗೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ವಿದೇಶಿ ವಿದ್ಯಾರ್ಥಿವೇತನ ಯೋಜನೆಯಡಿ ಸೇವಾಸಿಂಧು ಪೋರ್ಟಲ್‌ನ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ೨೦೨೫-೨೬ ನೇ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ ನೀಡಲು ಸೇವಾಸಿಂಧು ಪೋರ್ಟಲ್‌ನ (https://sevasindhu.karnataka.gov.in/Sevasindhu/DepartmentServices) ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ […]