ಕೊಡಗು ಎಸ್‌ಪಿ ಸೇರಿ ಮೂವರು ಪೊಲೀಸರಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’

ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಕೊಡಗಿನ (Kodagu) ಪೊಲೀಸ್ ವರಿಷ್ಟಾದಿಕಾರಿ ಕೆ.ರಾಮರಾಜನ್, ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿ ಮುದ್ದು ಮಹದೇವ, ವಿಶೇಷ ಮಕ್ಕಳ ಘಟಕಲ್ಯಾಣಾಧಿಕಾರಿ ಮತ್ತು ಹೆಡ್ ಕಾನ್ಸಟೇಬಲ್, ಸುಮತಿ ಅವರು ಭಾಜನರಾಗಿದ್ದಾರೆ. ಅತ್ಯುತ್ತಮ ಕರ್ತವ್ಯ ನಿವ೯ಹಣೆಗಾಗಿ ರಾಜ್ಯ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳಿಂದ ನೀಡಲ್ಪಡುವ ಪ್ರಶಸ್ತಿ ಇದಾಗಿದೆ. ಈ ಪದಕವನ್ನು ಮೇ 21ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.
ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ: ಅರಣ್ಯ ಹಕ್ಕು ಅರ್ಜಿಗೆ ಒಪ್ಪಿಗೆ

ಮಡಿಕೇರಿ:-ಅರಣ್ಯ ಹಕ್ಕು ಕಾಯ್ದೆಯಡಿ ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳ ಅರ್ಜಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಅನುಮೋದನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ (Meeting) ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳಿಗೆ ಅನುಮೋದನೆ ನೀಡಲಾಯಿತು. ಈ ಕುರಿತು ಮಾತನಾಡಿದ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು […]
ಪೊನ್ನಂಪೇಟೆ: ಮನೆ ಬಾಗಿಲಲ್ಲಿ ಚಿರತೆ ಪ್ರತ್ಯಕ್ಷ…!

ಪೊನ್ನಂಪೇಟೆ (Ponnampet) ತಾಲೂಕಿನ ಕೋತೂರು ಗ್ರಾಮದ ಅಜ್ಜಮಾಡ ಪವನ್ ಪೊನ್ನಪ್ಪ ಅವರ ಮನೆಯ ಅಂಗಳದಲ್ಲಿ ಭಾನುವಾರ ರಾತ್ರಿ ದೃಶ್ಯ ಸಿ ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು,ಅರಣ್ಯಾಧಿಕಾರಿಗಳು ಕಾರ್ಯಚರಣೆ ನಡೆಸುವಂತೆ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಪೊನ್ನಪೇಟೆ ಆರ್. ಎಫ್. ಓ ಶಂಕರ್, ಹಾಗೂ ಸಿಬ್ಬಂದಿ ಗಳಿಂದ ಭೇಟಿ.
ಅತಿರುದ್ರ ಜಪಯಜ್ಞ ಮೇ 21ರಂದು ಕಣಿವೆಯ ಶ್ರೀರಾಮಲಿಂಗೇಶ್ವರದಲ್ಲಿ ಸಂಪನ್ನ: ಮೇ 20ರಂದು ಮಡಿಕೇರಿಯಲ್ಲಿ ರುದ್ರ ಹೋಮ

ಮಡಿಕೇರಿ : ಲೋಕ ಕಲ್ಯಾಣಕ್ಕಾಗಿ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಸನ್ನಿಧಿಯಲ್ಲಿ ಜಪಯಜ್ಞ ಸಮಿತಿ ವತಿಯಿಂದ ನಡೆಯುತ್ತಿರುವ ಅತಿರುದ್ರ ಜಪಯಜ್ಞ ಮೇ ೨೧ರಂದು ಕಾವೇರಿ ತೀರದಲ್ಲಿರುವ ಕಣಿವೆಯ ಶ್ರೀರಾಮಲಿಂಗೇಶ್ವರ ಸನ್ನಿಧಿಯಲ್ಲಿ ಸಂಪನ್ನಗೊಳ್ಳಲಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷ ರಮೇಶ್ ಹೊಳ್ಳ ತಿಳಿಸಿದ್ದಾರೆ. ಮೇ 21 ರಂದು ಶ್ರೀರಾಮಲಿಂಗೇಶ್ವರ ದೇವಾಲಯದಲ್ಲ್ಲಿ ಶ್ರೀ ಶ್ರೀ ಶ್ರೀಕಾಂತಾನಂದ ಸರಸ್ವತಿ ಮಹಾರಾಜರ ನೇತೃತ್ವದಲ್ಲಿ ಶ್ರೀ ಚಂಡಿಕಾ ಹೋಮ, ಎರಡು ಆವರ್ತದ ಶ್ರೀರುದ್ರ ಜಪ ಹಾಗೂ ಮಹಾ ಪ್ರಸಾದ ವಿನಿಯೋಗ ನಡೆಯಲಿದೆ. ಮೇ 20 […]
ಅರೆಕಾಡು ಹೊಸ್ಕೇರಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಅರೆಕಾಡು ಹೊಸ್ಕೇರಿ ರಸ್ತೆಯ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ (Dr.Mantar Gowda) ಅವರು ಭೂಮಿಪೂಜೆ ನೆರವೇರಿಸಿದರು.ಕಳೆದ ಕೆಲವು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆಯಲ್ಲಿ ವಾಹನಗಳ ಸಂಚಾರ ಅಸಾಧ್ಯವಾಗಿತ್ತು. ಹೊಂಡ, ಗುಂಡಿಗಳಿAದ ಕೂಡಿದ್ದ ರಸ್ತೆಯ ಅಭಿವೃದ್ಧಿಗಾಗಿ ಇತ್ತೀಚೆಗೆ “ಕೊಡವ ವೆಲ್‌ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್” ಹಾಗೂ ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕರು ಅನುದಾನವನ್ನು ಮೀಸಲಿಟ್ಟು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಡಾ.ಮಂತರ್ ಗೌಡ ಅವರು […]
Power Cut: ನಾಳೆ ಕೊಡಗಿನಲ್ಲಿ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ…!

ವಿರಾಜಪೇಟೆ (Virajpet) 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಅಮ್ಮತ್ತಿ ಹಾಗೂ ಎಫ್9 ಚಂಬೆಬೆಳ್ಳೂರು ಫೀಡರ್‍ನಲ್ಲಿ ಮೇ, 19 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಪೂರ್ವ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ, ಅಮ್ಮತ್ತಿ, ಕಾರ್ಮಾಡು, ಬಿಳುಗುಂದ, ಕೊಂಡಂಗೇರಿ, ಹಾಲುಗುಂದ, ಕಣ್ಣಂಗಾಲ, ಒಂಟಿಯಂಗಡಿ, ಚೆಂಬೆಬೆಳ್ಳೂರು, ದೇವಣಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕೊಯನಾಡು ಶಾಲಾ ಕಟ್ಟಡ ನಿರ್ಮಾಣಕ್ಕೆ ಕೂಡಲೇ ಚಾಲನೆ ನೀಡಿ: ಎ.ಎಸ್.ಪೊನ್ನಣ್ಣ

ಮಡಿಕೇರಿ:- ಕೊಯನಾಡು ಬಳಿ ಈಗಾಗಲೇ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾಗಿರುವ ಜಾಗದಲ್ಲಿ ಭೂಮಿಪೂಜೆ ನೆರವೇರಿಸಲು ದಿನಾಂಕ ನಿಗಧಿ ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ನಿರ್ದೇಶನ ನೀಡಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಮಾರ್ಚ್ ಅಂತ್ಯದ ವರೆಗಿನ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯ ಆರಂಭದಲ್ಲಿ ವಿರಾಜಪೇಟೆ ವಿಧಾನಸಭಾ […]
ಅರೆಭಾಷಿಕರ ‘ಐನ್‍ಮನೆ’ ಸಂಸ್ಕೃತಿ, ಸಂಪ್ರದಾಯ ಉಳಿಸಿ ಬೆಳೆಸಲು ದಾಖಲೀಕರಣ ಮಾಡಬೇಕು: ಡಾ.ಮಂತರ್ ಗೌಡ

ಮಡಿಕೇರಿ:- ಐನ್‍ಮನೆ ಸಂಸ್ಕೃತಿ, ಸಂಪ್ರದಾಯ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮೂಲಕ ದಾಖಲೀಕರಣ ಮಾಡುವಂತಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ (Dr. Mantar Gowda) ಅವರು ಹೇಳಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಕ್ಕಂದೂರು ಗ್ರಾಮದ ಕುಂಭಗೌಡನ ಐನ್‍ಮನೆಯಲ್ಲಿ ಶನಿವಾರ ನಡೆದ ಅರೆಭಾಷಿಕರ ‘ಐನ್‍ಮನೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕುಂಭಗೌಡನ ಕುಟುಂಬಕ್ಕೆ ತಮ್ಮದೇ ಆದ ಐತಿಹಾಸಿಕ ಹಿನ್ನೆಲೆ ಇದ್ದು, ಕುಂಭಗೌಡನ […]
SSLC ಪಾಸಾದವರಿಗೆ ರೂ.37 ಸಾವಿರಕ್ಕೂ ಹೆಚ್ಚು ಸಂಬಳದ ಜಾಬ್: ಈಗಲೇ ಅಪ್ಲೇ ಮಾಡಿ

ನೀವು ಎಸ್‌ಎಸ್‌ಎಲ್‌ಸಿ (SSLC) ಪಾಸಾದವರಿಗೆ ಯಾವುದಾದರೂ ಒಂದು ಕೆಲಸ ಸಿಕ್ಕರೆ ಸಾಕು ಅಂತ ಇರ್ತಾರೆ. ಆದರೆ ಇಲ್ಲಿದೆ ನೋಡಿ ನಿಮಗೆ ಜಾಬ್ ಆಫರ್. ಬ್ಯಾಂಕ್ (Bank) ಆಫ್ ಬರೋಡಾವು 500 ಕಚೇರಿ ಸಹಾಯಕರ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಗೆ ಬೇಕಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಬ್ಯಾಂಕ್ ಆಫ್ ಬರೋಡಾವು 500 ಆಫೀಸ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗೆ ಜಾಬ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಜಸ್ಟ್ ಎಸ್‌ಎಸ್‌ಎಲ್‌ಸಿ ಪಾಸಾದವರು ಈ […]
ಪರಿಸರವನ್ನು ಸ್ವಚ್ಛ ಮತ್ತು ಸುಸ್ಥಿರವಾಗಿಡುವುದು ನಮ್ಮಲ್ಲೆರ ಆದ್ಯ ಕರ್ತವ್ಯ

ಮಡಿಕೇರಿ:-ಹವಾಮಾನ ವೈಪರಿತ್ಯಗಳಿಂದಾಗಿ ಪರಿಸರದ (Environment) ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೊಡಗು ಜಿ.ಪಂ.ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದರು. ನಗರದ ಜಿ.ಪಂ. ಕಚೇರಿಯಲ್ಲಿ ಶುಕ್ರವಾರ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆ ಕ್ರಿಯಾ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು […]