ವೀರಾಜಪೇಟೆಯಲ್ಲಿ ಲೋಕಾರ್ಪಣೆಗೊಂಡಿದೆ ಅಂಬೇಡ್ಕರ್‌ ಭವನ – ಸದ್ಬಳಕೆಗೆ ಮನವಿ..!

ವೀರಾಜಪೇಟೆ : ಪಟ್ಟಣದ ಮೂರ್ನಾಡು ಮುಖ್ಯರಸ್ತೆಯಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನ ಲೋಕಾರ್ಪಣೆಗೊಂಡಿದ್ದು, ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಾಲೂಕು ತಹಸೀಲ್ದಾರ್‌ ಕೋರಿದ್ದಾರೆ. ಸುಸುಜ್ಜಿತ ಕಟ್ಟಡದಲ್ಲಿ ಉತ್ತಮವಾದ ಸಭಾಂಗಣ, ಊಟಕ್ಕೆ ವಿಶಾಲವಾದ ಡೈನಿಂಗ್ ಹಾಲ್, ಕಟ್ಟಡದ ನೆಲ ಅಂತಸ್ತಿನಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ, ನೀರಿನ ಸಂಪರ್ಕ ಹೊಂದಿರುವ ಉತ್ತಮವಾದ ಅಡುಗೆ ಮನೆ, ವಧು-ವರರಿಗೆ ಪ್ರತ್ಯೇಕವಾದ ಕೊಠಡಿ ಇರುತ್ತದೆ. ಈ ಭವನವನ್ನು ಎಲ್ಲಾ ಸಭೆ ಸಮಾರಂಭಗಳಿಗೆ ಬಾಡಿಗೆಗೆ ನೀಡುತ್ತಿದ್ದು, ಸಭೆ ಸಮಾರಂಭಗಳನ್ನು ಮಾಡುವವರು ವೀರಭದ್ರಯ್ಯ 8105774952 , […]

ಯಾವುದೇ ದುಶ್ಚಟಗಳಿಗೆ ದಾಸರಾಗಬೇಡಿ – ವಿದ್ಯಾರ್ಥಿಗಳಿಗೆ ಪ್ರಮುಖರ ಕರೆ..!

ಮಡಿಕೇರಿ : ಹಿಂದುಳಿದ ವರ್ಗಗಳ ಕಲ್ಯಾಣ, ಪೊಲೀಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತಾರಾಷ್ಟ್ರೀಯ ದಿನ ಕುರಿತು ಜಾಗೃತಿ ಅಭಿಯಾನ ನಗರದ ಡೈರಿ ಫಾರಂನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶ್ರೀನಾಥ್, ಹಿಂದೆ ಹಲವು ರೀತಿಯ ವೈರಸ್ ಮತ್ತು ಬ್ಯಾಕ್ಟೀರಿಯಾ ರೋಗಗಳಿಗೆ ತುತ್ತಾಗುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಮಾನಸಿಕ […]

ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆ – ಮಳೆ ರಜೆ ನಡುವೆಯೂ ಪ್ರಬಂಧ, ಚಿತ್ರಕಲಾ ಸ್ಪರ್ಧೆ!

ಮಡಿಕೇರಿ : ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಪ್ರೌಢಶಾಲೆ ಹಾಗೂ ಕೂಡಿಗೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯು ಬುಧವಾರ ನಡೆಯಿತು. ‘ನಮ್ಮ ಬೆಂಗಳೂರು ಹೇಗೆ ಇದ್ದರೆ ಚೆನ್ನ’ ಹಾಗೂ ‘ನಾಡಪ್ರಭು ಕೆಂಪೇಗೌಡರ ಕೊಡುಗೆ’ ಕುರಿತು ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಿತು. ಇಂದು ಮಳೆ ಕಾರಣದಿಂದ ರಜೆ […]

ಮಡಿಕೇರಿ ನಗರಸಭೆ ನಿರ್ಲಕ್ಷ್ಯ – ಮೋರಿಗೆ ಬಿದ್ದು ನರಳಾಡಿದ ಹಸು..!

ಮಡಿಕೇರಿ : ಸ್ಥಳೀಯಾಡಳಿತದ ನಿರ್ಲಕ್ಷ್ಯದಿಂದ ಮೋರಿಗೆ ಹಸು ಬಿದ್ದು ಕೆಲ ಹೊತ್ತು ನರಕ ಯಾತನೆ ಅನುಭವಿಸಿದೆ. ನಗರದ ಅಬ್ದುಲ್ ಕಲಾಂ ಬಡಾವಣೆಯ ರಸ್ತೆ ಬದಿಯಲ್ಲಿ ಮೋರಿಯೊಂದು ಯಾವುದೇ ಸುರಕ್ಷತೆ ಇಲ್ಲದೆ ಇತ್ತು. ಇಂದು ರಸ್ತೆ ಬದಿ ಹುಲ್ಲು ಮೇಯುತ್ತಾ ಬಂದ ಹಸುವೊಂದು ನಿಯಂತ್ರಣ ತಪ್ಪಿ ಮೋರಿಯೊಳಕ್ಕೆ ಬಿದ್ದಿದೆ. ಮೇಲೆ ಏಳಲಾಗದೆ ಹಲವು ಹೊತ್ತು ಒದ್ದಾಡಿದೆ. ಇದನ್ನು ಕಂಡ ಸಾರ್ವಜನಿಕರು ಅದನ್ನು ರಕ್ಷಿಸಲು ಮುಂದಾದರು. ಆದರೆ ಅದು ಸಾಧ್ಯವಾಗಲಿಲ್ಲ. ಬಳಿಕ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ಕೆಲ ಹೊತ್ತಿನ […]

ಟೈಲರಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ – ಮಹಿಳೆಯರಿಗೆ ಮಾತ್ರ ಅವಕಾಶ..!

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮಹಿಳೆಯರಿಗೆ ಟೈಲರಿಂಗ್ ಕುರಿತ ೩೧ ದಿನಗಳ ಉಚಿತ ತರಬೇತಿಯು ಜುಲೈ ೨೬ ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.  ಆಸಕ್ತರು ೧೮ ರಿಂದ ೪೫ ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಹೊಂದಿರುವ […]

ರೆಡ್‌ಕ್ರಾಸ್ ಕೊಡಗು ಘಟಕದ ವಾರ್ಷಿಕ ಮಹಾಸಭೆ ಜೂ.26ಕ್ಕೆ

ಮಡಿಕೇರಿ : ರೆಡ್‌ಕ್ರಾಸ್‌ ಕೊಡಗು ಘಟಕದ ವಾರ್ಷಿಕ ಮಹಾಸಭೆ ಜೂನ್ ೨೬ ರಂದು ನಡೆಯಲಿದೆ ಎಂದು ಸಭಾಪತಿ ಬಿ.ಕೆ.ರವೀಂದ್ರ ರೈ ಮಾಹಿತಿ ನೀಡಿದ್ದಾರೆ. ಮಡಿಕೇರಿಯ ಸ್ಟೀವರ್ಟ್ ಹಿಲ್‌ನಲ್ಲಿರುವ ರೆಡ್‌ಕ್ರಾಸ್ ಭವನದಲ್ಲಿ ಬೆಳಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ಮಹಾಸಭೆಯಲ್ಲಿ ಸರ್ವ ಸದಸ್ಯರು ಪಾಲ್ಗೊಳ್ಳುವಂತೆ ರವೀಂದ್ರ ರೈ ಕೋರಿದ್ದಾರೆ.

ಸೀಳು ತುಟಿ, ಸೀಳು ಅಂಗುಳ, ಮ್ಯಾಕ್ಸಿಲೊಫೇಶಿಯಲ್, ಕ್ರೇನಿಯೋಫೇಶಿಯಲ್ ವಿರೂಪಗಳ ತಪಾಸಣಾ ಶಿಬಿರ ಜೂ.28ಕ್ಕೆ

ಮಡಿಕೇರಿ : ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಇಂಗಾ ಹೆಲ್ತ್ ಪೌಂಡೇಶನ್, ಬೆಂಗಳೂರು ಇವರ ವತಿಯಿಂದ ಜೂನ್ ೨೮ ರಂದು ಬೆಳಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೀಳು ತುಟಿ, ಸೀಳು ಅಂಗುಳ, ಮ್ಯಾಕ್ಸಿಲೊಫೇಶಿಯಲ್ ಮತ್ತು ಕ್ರೇನಿಯೋಫೇಶಿಯಲ್ ವಿರೂಪಗಳ ತಪಾಸಣಾ […]

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ – ಹಲವು ಸಮಸ್ಯೆಗಳ ಬಗ್ಗೆ ಗಮನ ಸೆಳೆದ ಸದಸ್ಯರು..!

ಮಡಿಕೇರಿ : ಅನುಸೂಚಿತ ಮತ್ತು ಅನುಸೂಚಿತ ಪಂಗಡಗಳ(ದೌರ್ಜನ್ಯ ನಿಯಂತ್ರಣ) ನಿಯಮ ರೀತಿಯ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಎಚ್.ಎಸ್. ಮುತ್ತಪ್ಪ, ಹೊದ್ದೂರು, ಹೊದವಾಡ ಸೇರಿದಂತೆ ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಶಿಷ್ಟರು ವಾಸ ಮಾಡುತ್ತಿದ್ದು, ಇವರಿಗೆ ಶಾಶ್ವತ ನೆಲೆ ಕಲ್ಪಿಸಬೇಕು ಎಂದು ಮನವಿ ಮಾಡಿದರು. […]

ಹಾರಂಗಿ ಜಲಾಶಯದಲ್ಲಿ ನೀರಿನ ಪ್ರಮಾಣ ಎಷ್ಟಿದೆ ಗೊತ್ತಾ..? ಇಲ್ಲಿದೆ ಅಂಕಿ ಅಂಶ…

Rainfall

ಕುಶಾಲನಗರ : ಕೊಡಗಿನ ಏಕೈಕ ಅಣೆಕಟ್ಟು ಹಾರಂಗಿಯಲ್ಲಿ ಈ ಬಾರಿ ನಿರೀಕ್ಷೆಗೂ ಮುನ್ನವೇ ನೀರು ಭರ್ತಿಯಾಗಿದೆ. ೨,೮೫೯ ಅಡಿ ಗರಿಷ್ಠ ಸಾಮರ್ಥ್ಯದ ಡ್ಯಾಂನಲ್ಲಿ ಇಂದಿನ ನೀರಿನ ಮಟ್ಟ ೨೮೫೧.೫೨ ಅಡಿ ಇದೆ. ಕಳೆದ ವರ್ಷ ಇದೇ ದಿನ ೨೮೨೯.೧೪ ಅಡಿ ನೀರಿತ್ತು. ಕಳೆದ ೨೪ ಗಂಟೆಯಲ್ಲಿ ಹಾರಂಗಿ ವ್ಯಾಪ್ತಿಯಲ್ಲಿ ೧೨.೫೦ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೩.೨೦ ಮಿ.ಮೀ. ಮಳೆಯಾಗಿತ್ತು. ಇಂದಿನ ಒಳಹರಿವು ೪೬೧೨ ಕ್ಯುಸೆಕ್, ಕಳೆದ ವರ್ಷ ಇದೇ ದಿನ ೩೭೮ ಕ್ಯುಸೆಕ್ […]

‘CET’ ಸೀಟು ಹಂಚಿಕೆ ಕುರಿತು ಮಾರ್ಗದರ್ಶನ ಕಾರ್ಯಗಾರ ಜೂ.28ಕ್ಕೆ

ಮಡಿಕೇರಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಜೂನ್ ೨೮ ರಂದು ಬೆಳಗ್ಗೆ ೯.೩೦ ರಿಂದ ಮಧ್ಯಾಹ್ನ ೧.೩೦ ಗಂಟೆವರೆಗೆ ಕುಶಾಲನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ‘ಸಿಇಟಿ’ ಸೀಟು ಹಂಚಿಕೆ ಕುರಿತು ಮಾರ್ಗದರ್ಶನ (ನ್ಯೂ ಸೀಟ್ ಸೆಲೆಕ್ಷನ್ ಪ್ರೋಸೆಸ್) ಕಾರ್ಯಗಾರ ನಡೆಯಲಿದೆ. ಆದ್ದರಿಂದ ಎಲ್ಲಾ ಯುಜಿ ಸಿಇಟಿ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಹಾಜರಾಗಿ ಸೀಟು ಹಂಚಿಕೆಯ ಮಾರ್ಗದರ್ಶನದ ಕಾರ್ಯಗಾರ ಸದುಪಯೋಗ ಪಡೆಯಲು ಕೋರಿದೆ. ಜಿಲ್ಲೆಯ ಮತ್ತು ನೆರೆ […]