ರೆಡ್‌ಕ್ರಾಸ್ ಕೊಡಗು ಘಟಕದ ವಾರ್ಷಿಕ ಮಹಾಸಭೆ ಜೂ.26ಕ್ಕೆ

ಮಡಿಕೇರಿ : ರೆಡ್‌ಕ್ರಾಸ್‌ ಕೊಡಗು ಘಟಕದ ವಾರ್ಷಿಕ ಮಹಾಸಭೆ ಜೂನ್ ೨೬ ರಂದು ನಡೆಯಲಿದೆ ಎಂದು ಸಭಾಪತಿ ಬಿ.ಕೆ.ರವೀಂದ್ರ ರೈ ಮಾಹಿತಿ ನೀಡಿದ್ದಾರೆ. ಮಡಿಕೇರಿಯ ಸ್ಟೀವರ್ಟ್ ಹಿಲ್‌ನಲ್ಲಿರುವ ರೆಡ್‌ಕ್ರಾಸ್ ಭವನದಲ್ಲಿ ಬೆಳಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ಮಹಾಸಭೆಯಲ್ಲಿ ಸರ್ವ ಸದಸ್ಯರು ಪಾಲ್ಗೊಳ್ಳುವಂತೆ ರವೀಂದ್ರ ರೈ ಕೋರಿದ್ದಾರೆ.

ಸೀಳು ತುಟಿ, ಸೀಳು ಅಂಗುಳ, ಮ್ಯಾಕ್ಸಿಲೊಫೇಶಿಯಲ್, ಕ್ರೇನಿಯೋಫೇಶಿಯಲ್ ವಿರೂಪಗಳ ತಪಾಸಣಾ ಶಿಬಿರ ಜೂ.28ಕ್ಕೆ

ಮಡಿಕೇರಿ : ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಇಂಗಾ ಹೆಲ್ತ್ ಪೌಂಡೇಶನ್, ಬೆಂಗಳೂರು ಇವರ ವತಿಯಿಂದ ಜೂನ್ ೨೮ ರಂದು ಬೆಳಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೀಳು ತುಟಿ, ಸೀಳು ಅಂಗುಳ, ಮ್ಯಾಕ್ಸಿಲೊಫೇಶಿಯಲ್ ಮತ್ತು ಕ್ರೇನಿಯೋಫೇಶಿಯಲ್ ವಿರೂಪಗಳ ತಪಾಸಣಾ […]

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ – ಹಲವು ಸಮಸ್ಯೆಗಳ ಬಗ್ಗೆ ಗಮನ ಸೆಳೆದ ಸದಸ್ಯರು..!

ಮಡಿಕೇರಿ : ಅನುಸೂಚಿತ ಮತ್ತು ಅನುಸೂಚಿತ ಪಂಗಡಗಳ(ದೌರ್ಜನ್ಯ ನಿಯಂತ್ರಣ) ನಿಯಮ ರೀತಿಯ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಎಚ್.ಎಸ್. ಮುತ್ತಪ್ಪ, ಹೊದ್ದೂರು, ಹೊದವಾಡ ಸೇರಿದಂತೆ ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಶಿಷ್ಟರು ವಾಸ ಮಾಡುತ್ತಿದ್ದು, ಇವರಿಗೆ ಶಾಶ್ವತ ನೆಲೆ ಕಲ್ಪಿಸಬೇಕು ಎಂದು ಮನವಿ ಮಾಡಿದರು. […]

ಹಾರಂಗಿ ಜಲಾಶಯದಲ್ಲಿ ನೀರಿನ ಪ್ರಮಾಣ ಎಷ್ಟಿದೆ ಗೊತ್ತಾ..? ಇಲ್ಲಿದೆ ಅಂಕಿ ಅಂಶ…

Rainfall

ಕುಶಾಲನಗರ : ಕೊಡಗಿನ ಏಕೈಕ ಅಣೆಕಟ್ಟು ಹಾರಂಗಿಯಲ್ಲಿ ಈ ಬಾರಿ ನಿರೀಕ್ಷೆಗೂ ಮುನ್ನವೇ ನೀರು ಭರ್ತಿಯಾಗಿದೆ. ೨,೮೫೯ ಅಡಿ ಗರಿಷ್ಠ ಸಾಮರ್ಥ್ಯದ ಡ್ಯಾಂನಲ್ಲಿ ಇಂದಿನ ನೀರಿನ ಮಟ್ಟ ೨೮೫೧.೫೨ ಅಡಿ ಇದೆ. ಕಳೆದ ವರ್ಷ ಇದೇ ದಿನ ೨೮೨೯.೧೪ ಅಡಿ ನೀರಿತ್ತು. ಕಳೆದ ೨೪ ಗಂಟೆಯಲ್ಲಿ ಹಾರಂಗಿ ವ್ಯಾಪ್ತಿಯಲ್ಲಿ ೧೨.೫೦ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೩.೨೦ ಮಿ.ಮೀ. ಮಳೆಯಾಗಿತ್ತು. ಇಂದಿನ ಒಳಹರಿವು ೪೬೧೨ ಕ್ಯುಸೆಕ್, ಕಳೆದ ವರ್ಷ ಇದೇ ದಿನ ೩೭೮ ಕ್ಯುಸೆಕ್ […]

‘CET’ ಸೀಟು ಹಂಚಿಕೆ ಕುರಿತು ಮಾರ್ಗದರ್ಶನ ಕಾರ್ಯಗಾರ ಜೂ.28ಕ್ಕೆ

ಮಡಿಕೇರಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಜೂನ್ ೨೮ ರಂದು ಬೆಳಗ್ಗೆ ೯.೩೦ ರಿಂದ ಮಧ್ಯಾಹ್ನ ೧.೩೦ ಗಂಟೆವರೆಗೆ ಕುಶಾಲನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ‘ಸಿಇಟಿ’ ಸೀಟು ಹಂಚಿಕೆ ಕುರಿತು ಮಾರ್ಗದರ್ಶನ (ನ್ಯೂ ಸೀಟ್ ಸೆಲೆಕ್ಷನ್ ಪ್ರೋಸೆಸ್) ಕಾರ್ಯಗಾರ ನಡೆಯಲಿದೆ. ಆದ್ದರಿಂದ ಎಲ್ಲಾ ಯುಜಿ ಸಿಇಟಿ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಹಾಜರಾಗಿ ಸೀಟು ಹಂಚಿಕೆಯ ಮಾರ್ಗದರ್ಶನದ ಕಾರ್ಯಗಾರ ಸದುಪಯೋಗ ಪಡೆಯಲು ಕೋರಿದೆ. ಜಿಲ್ಲೆಯ ಮತ್ತು ನೆರೆ […]

ಅತಿಸಾರ ಬೇಧಿ ತಡೆಯುವಿಕೆ ಅಭಿಯಾನಕ್ಕೆ ಚಾಲನೆ – ಮಕ್ಕಳ ಉತ್ತಮ ಆರೋಗ್ಯದತ್ತ ಗಮನ ಇರಲಿ: ಡಾ.ಸತೀಶ್ ಕುಮಾರ್

ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ(ಮಕ್ಕಳ ವಿಭಾಗ) ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಅತಿಸಾರ ಬೇಧಿ ತಡೆಗಟ್ಟುವಿಕೆ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸೋಮವಾರ ನಡೆಯಿತು. ಸ್ಟಾಪ್ ಡೈಯೇರಿಯ ಕ್ಯಾಂಪೇನ್ ಅನ್ನು ಜುಲೈ ೩೧ ರವರೆಗೆ ಆಯೋಜಿಸಲಾಗಿದೆ. ಎಲ್ಲಾ ಐದು ವರ್ಷದ ಒಳಗಿನ ಮಕ್ಕಳಿಗೆ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಒಂದು ಮಗುವಿಗೆ […]

ಭಾಗಮಂಡಲದಲ್ಲಿ ಆರೋಗ್ಯ ತಪಾಸಣಾ ಉಚಿತ ಶಿಬಿರ ಜೂನ್‌ 30ಕ್ಕೆ

ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘ ವತಿಯಿಂದ ರೋಟರಿ ಮಡಿಕೇರಿ ವುಡ್ಸ್ ಸಹಯೋಗದೊಂದಿಗೆ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ. ಜೂನ್ 30ರಂದು ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ತಪಾಸಣೆ, ಸ್ತ್ರೀರೋಗ, ಹೃದಯ ಸಂಬಂಧಿಸಿದ ಕಾಯಿಲೆಗಳ ತಪಾಸಣೆ ಮಾಡಲಾಗುವುದು. ಶಿಬಿರಕ್ಕೆ ಬರುವ ಮಂದಿಗೆ ಭಾಗಮಂಡಲ ಶ್ರೀ ಕಾವೇರಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಉಚಿತ ಸೇವೆ ಇರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. […]

ಪಾಲಿಬೆಟ್ಟ : ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಯೋಗ ದಿನಾಚರಣೆ

ಪಾಲಿಬೆಟ್ಟ : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಮೇಲ್ವಿಚಾರಕಿ ಸುಮಯ್ಯ ಕೆ. ಎಂ., ಸಿಬ್ಬಂದಿ ಸುಜಾತ, ಪ್ರೀತು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕೊಡಗು ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಜೂ.27ಕ್ಕೆ

ಮಡಿಕೇರಿ : ೨೦೨೫-೨೬ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೆöÊಮಾಸಿಕ ಕೆಡಿಪಿ ಸಭೆಯು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅಧ್ಯಕ್ಷತೆಯಲ್ಲಿ ಜೂನ್, ೨೭ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.

ದುಬೈ-ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವಾರ್ಷಿಕ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ..!

ಮಡಿಕೇರಿ : ಸಂಯುಕ್ತ ಅರಬ್ ಸಂಸ್ಥಾನದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೊಡಗಿನ ಹಳೆ ವಿದ್ಯಾರ್ಥಿಗಳ ಸಂಘದ ಅವರ ವತಿಯಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹೊದವಾಡದ ರಾಫಲ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಶೈಕ್ಷಣಿಕವಾಗಿ ಸಾಧನೆಗೈಡ ಭಾಷಿತ, ಡಿಯಾನ, ಚರಿಷ್ಮಾ, ಹೇಮಾವತ, ಸಫಾನಾ, ಫಾಹಿನ ಅವರನ್ನು ಅಸೋಸಿಯೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಳೆ […]