ಪೊಲೀಸರ ಮನೆಗೇ ಕನ್ನ ಹಾಕಿದ ಖತರ್ನಾಕ್ ಚೋರರು..! – ಇಲ್ಲಿದೆ ನೋಡಿ ಮಾಹಿತಿ..!

ಮಡಿಕೇರಿ : ರಕ್ಷಣೆ ನೀಡುವ ಪೊಲೀಸರ ಮನೆಗೇ ಖತರ್ನಾಕ್‌ಗಳು ಕನ್ನ ಹಾಕಿರುವ ಘಟನೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೆಳಕಿಗೆ ಬಂದಿದೆ. ನಗರದ ಮೈತ್ರಿ ಪೊಲೀಸ್ ಸಮುದಾಯ ಭವನ ಬಳಿಯಿರುವ ಪೊಲೀಸರ ವಸತಿ ಗೃಹಗಳನ್ನೇ ಟಾರ್ಗೆಟ್ ಮಾಡಿದ ಕಳ್ಳರು ಮನೆಗೆ ನುಗ್ಗಿ ನಗದು, ಅಮೂಲ್ಯ ವಸ್ತುಗಳನ್ನ ದೋಚಿದ್ದಾರೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಬಳಸಿಕೊಂಡು ಕಳ್ಳರು ಕೃತ್ಯವೆಸಗಿದ್ದಾರೆ. ಕೃತ್ಯ ನಡೆದ ಮನೆಗಳಿಗೆ ಪೊಲೀಸ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆದ್ರೆ ನಗರದಲ್ಲಿ […]
ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ – ರಾಜ್ಯಾಧ್ಯಕ್ಷರಿಂದ ಆದೇಶ ಪ್ರತಿ ಸ್ವೀಕಾರ..!

ಮಡಿಕೇರಿ : ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಮರು ನೇಮಕವಾದ ನಾಪಂಡ ರವಿ ಕಾಳಪ್ಪ ಇಂದು ರಾಜ್ಯಾಧ್ಯಕ್ಷರಿಂದ ಅಧಿಕೃತ ಆದೇಶ ಪ್ರತಿ ಸ್ವೀಕರಿಸಿದರು. ಬೆಂಗಳೂರಿನಲ್ಲಿರುವ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ ಬಿ.ವೈ. ವಿಜಯೇಂದ್ರ ಆದೇಶ ಪ್ರತಿ ನೀಡಿದರು. ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಕ್ಯಾ. ಗಣೇಶ ಕಾರ್ಣಿಕ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. […]
ಭರ್ಜರಿ ಉದ್ಯೋಗಾವಕಾಶ: 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

SSC CGL Recruitment 2025: SSCಯು ಖಾಲಿ ಇರುವ 14,582 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಧಿಕೃತ ವೆಬ್‌ಸೈಟ್ ssc.gov.inನಲ್ಲಿ SSC CGL ಅಧಿಸೂಚನೆ 2025 ಅನ್ನು ಬಿಡುಗಡೆ ಮಾಡಿದ್ದು, 14,582 ಹುದ್ದೆಗಳನ್ನು ಪ್ರಕಟಿಸಿದೆ. ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು SSC CGL ಪರೀಕ್ಷೆಯನ್ನು ವಾರ್ಷಿಕವಾಗಿ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸುವ ವಿಧಾನಗಳು: SSC ಅಧಿಕೃತ ವೆಬ್‌ಸೈಟ್ ssc.nic.inಗೆ ಭೇಟಿ ನೀಡಿ * ಅಭ್ಯರ್ಥಿ […]
ಜಲಪ್ರವಾಹ : ಚೇರಂಬಾಣೆ ಗ್ರಾಮಸ್ಥರ ಸಂಚಾರಕ್ಕೆ ಕೇವಲ ದೋಣಿ ಆಶ್ರಯ

ಚೇರಂಬಾಣೆ (cherambane) ದೋಣಿ ಕಾಡುವಿನಲ್ಲಿ ಪ್ರವಾಹ ಸ್ಥಳೀಯರಿಗೆ ಸಂಚರಿಸಲು ದೋಣಿ ವ್ಯವಸ್ಥೆ.ಭಾಗಮಂಡಲ ಹೋಬಳಿ ಚೇರಂಬಾಣೆ ಗ್ರಾಮ ಪಂಚಾಯತಿಯ ಬೆಂಗೂರು ಗ್ರಾಮದ ದೋಣಿ ಕಾಡು ಎಂಬಲ್ಲಿ ಪ್ರವಾಹ ಬಂದಿದ್ದು ಸ್ಥಳೀಯರು ದೋಣಿ ಮುಖಾಂತರ ಸಂಚಾರ ಮಾಡುತ್ತಿದ್ದಾರೆ. ಪ್ರವಾಹ ಬಂದಿರುವ ದೋಣಿ ಕಾಡು ಪ್ರದೇಶಕ್ಕೆ ತಹಶೀಲ್ದಾರರು ಮಡಿಕೇರಿ ತಾಲ್ಲೂಕು ಇವರು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಿದರು. ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.
ಮೋದಿ ನೇತೃತ್ವದ ಸರ್ಕಾರಕ್ಕೆ 11 ವರ್ಷ – ಮಡಿಕೇರಿ ನಗರ ಬಿಜೆಪಿಯಿಂದ ಕಾರ್ಯಾಗಾರ..!

ಮಡಿಕೇರಿ : ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಕಾರ್ಯಾಗಾರ ನಡೆಯಿತು. ನಗರದ ಬಿಜೆಪಿ ಕಚೇರಿಯಲ್ಲಿ ಉಮೇಶ್ ಸುಬ್ರಹ್ಮಣಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಸರ್ಕಾರದ ಸಾಧನೆ, ಐತಿಹಾಸಿಕ ನಿರ್ಧಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ಕಾರ್ಯದರ್ಶಿಗಳಾದ ಪ್ರಶಾಂತ್ ಭೀಮಯ್ಯ, ಕನ್ನಿಕೆ, ವಕ್ತರ ಅರುಣ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಕಾಂಗೀರ ಸತೀಶ್ ಅಶ್ವಿನ್, ಪ್ರಮುಖರಾದ ಜಗದೀಶ್, ವಿವಿಧ ಮಂಡಲಗಳ ಮುಖಂಡರು […]
ಕಾಂಗ್ರೆಸ್‌ಗೆ ಪ್ರತೀಕ್ ಪೊನ್ನಣ್ಣ ಗುಡ್ ಬೈ? – ಉಸಿರುಗಟ್ಟಿಸುವ ವಾತಾವರಣದಲ್ಲಿ ನಾನು ಇರಲ್ಲ ಎಂದ ಯುವ ನಾಯಕ..!

ಮಡಿಕೇರಿ : ಕೆಲ ವರ್ಷದ ಹಿಂದಷ್ಟೇ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಸಾಮಾಜಿಕ ಕಾರ್ಯಕರ್ತ ಪ್ರತೀಕ್ ಪೊನ್ನಣ್ಣ ಇದೀಗ ದಿಢೀರ್ ಆಗಿ ಕಾಂಗ್ರೆಸ್ ತ್ಯಜಿಸುವ ನಿರ್ಧಾರಕ್ಕೆ ಬಂದಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದು, ತಾನು ಈ ನಿರ್ಧಾರಕ್ಕೆ ಬರಲು ಕಾರಣ ಏನು ಅನ್ನೋದನ್ನೂ ಉಲ್ಲೇಖಿಸಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಕೊಡವ ಸಮಾಜದಕ್ಕೆ ಜಮೀನು ನೀಡಿದ್ದಕ್ಕಾಗಿ ಶಾಸಕರು ಹಾಗೂ ಸರ್ಕಾರಕ್ಕೆ ಅಭಿನಂದನೆ ಸಲ್ಲಿರುವ ಕಾರ್ಯಕ್ರಮದ ವಿಚಾರವೇ ಈಗ ಪ್ರತೀಕ ಈ ನಿರ್ಧಾರಕ್ಕೆ ಕಾರಣವಾಗಿದೆ. ಈ […]
ಕೊಡಗಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ – ಸೋಮವಾರ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ ಘೋಷಣೆ..!

ಮಡಿಕೇರಿ : ಕೊಡಗು ಜಿಲ್ಲೆಯ ಬಹುತೇಕ ಕಡೆ ಭಾನುವಾರ ನಿರಂತರ ಮಳೆಯಾಗಿದೆ. ಮಳೆ ಬಿರುಸಿನಿಂದ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನಾಳೆ (ಜೂನ್ 16) ಜಿಲ್ಲೆ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಂತರ್ ಗೌಡ ಮತ್ತು ಪೊನ್ನಣ್ಣರಿಗೆ ಉತ್ತಮ ರಾಜಕೀಯ ಭವಿಷ್ಯ ಇದೆ – ಎ.ಎಸ್.ಪಿ ಫೈರ್ ಬ್ರಾಂಡ್ ಆಗ್ತಾರೆ : ಸಿ.ಎಂ ಸಿದ್ದರಾಮಯ್ಯ ಭವಿಷ್ಯ

ಬೆಂಗಳೂರು : ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರಿಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ವಸಂತನಗರದ ಕೊಡವ ಸಭಾಂಗಣದಲ್ಲಿ ಕೊಡವ ಸಮಾಜದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪೊನ್ನಣ್ಣ ಕೊಡವ ಸಮಾಜದ ಆಸ್ತಿ ಆಗಿದ್ದಾರೆ. ಮುಂದೆ ರಾಜ್ಯದ ಆಸ್ತಿ ಆಗ್ತಾರೆ ಎಂದ ಅವರು, ಕೊಡವ ಸಮಾಜ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರಾದರೂ ದೇಶ ಸೇವೆಯಲ್ಲಿ ಇವರಿಗೆ ಸರಿಸಮಾನವಾದವರು ಬೇರೆ ಇಲ್ಲ. ಸಂಸ್ಕೃತಿ, ಶಿಸ್ತಿನಲ್ಲಿ ಕೊಡವರು ಮುಂಚೂಣಿಯಲ್ಲಿದ್ದಾರೆ. ಸೈನ್ಯಕ್ಕೆ, […]
CSIR-NIIST ಮತ್ತು ಕೊಡಗು ವಿಶ್ವವಿದ್ಯಾಲಯದ ನಡುವೆ ಒಪ್ಪಂದಕ್ಕೆ ಸಹಿ – ಏನಿದರ ವಿಶೇಷತೆ..?

ಕುಶಾಲನಗರ : ಮುಂದಿನ ಪೀಳಿಗೆಯ ಆಹಾರ ಸಂಸ್ಕರಣೆಯು ಸ್ಮಾರ್ಟ್, ಸ್ವಚ್ಛ ಮತ್ತು ಸುಸ್ಥಿರ ಆಹಾರ ವ್ಯವಸ್ಥೆಯತ್ತ ಒಂದು ಹೆಜ್ಜೆಯಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯ ವ್ಯಕ್ತಪಡಿಸಿದರು. ತಿರುವನಂತಪುರಂನ ಸಿಎಸ್ಐಆರ್-ರಾಷ್ಟ್ರೀಯ ಅಂತರಶಿಸ್ತೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಎಸ್ಐಆರ್-ಎನ್ಐಐಎಸ್ಟಿ)ಯಲ್ಲಿ ಎನ್ಐಐಎಸ್ಟಿಯ ಸುವರ್ಣ ಮಹೋತ್ಸವ ಆಚರಣೆಗಾಗಿ ಆಯೋಜಿಸಿದ್ದ ‘ಮುಂದಿನ ಪೀಳಿಗೆಯ ಆಹಾರ ತಂತ್ರಜ್ಞಾನಗಳು: ಸುಸ್ಥಿರ ನಾಳೆಗಾಗಿ ಸಂಸ್ಕರಣೆ’ ಕುರಿತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಪೀಳಿಗೆಯ ಆಹಾರ ಸಂಸ್ಕರಣೆ ಕೇವಲ ತಾಂತ್ರಿಕ […]
ʼಕೊಡವ ಮುಸ್ಲಿಂ ಅಸೋಸಿಯೇಷನ್ ದಫ್ ಮುಟ್ಟ್’ ತಂಡ ಅಸ್ತಿತ್ವಕ್ಕೆ – ದೂರದರ್ಶನ ಕೇಂದ್ರದಲ್ಲಿ ಪ್ರದರ್ಶನ ಮತ್ತು ದಾಖಲೀಕರಣ…

ಪೊನ್ನಂಪೇಟೆ : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧೀನದಲ್ಲಿ ‘ಕೆ.ಎಂ.ಎ. ದಫ್ ಮುಟ್ಟ್ (ರಾತೀಬ್)’ ತಂಡವನ್ನು ನೂತನವಾಗಿ ಅಸ್ತಿತ್ವಕ್ಕೆ ತರಲಾಗಿದೆ. ಕೊಡವ ಮುಸ್ಲಿಂ ಸಮುದಾಯದ ಸಾಂಪ್ರದಾಯಿಕ ಧಾರ್ಮಿಕ ಕಲೆಯಾದ ‘ದಫ್ ಮುಟ್ಟ್’ ಅನ್ನು ಮತ್ತಷ್ಟು ಪ್ರೋತ್ಸಾಹಿಸಿ ಅದರ ಅಸ್ತಿತ್ವವನ್ನು ಉಳಿಸಿ ಬೆಳೆಸುವ ಹಿನ್ನೆಲೆಯಲ್ಲಿ ಈ ತಂಡವನ್ನು ರಚಿಸಲಾಗಿದೆ. ಹೊಸದಾಗಿ ರಚನೆಯಾದ ಈ ತಂಡ ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ದಫ್ ಮುಟ್ಟ್ ಪ್ರದರ್ಶನವನ್ನು ಪ್ರಸ್ತುತಪಡಿಸಿತು. ಈ ಮೂಲಕ ಕೊಡವ ಮುಸ್ಲಿಮರ ಸಾಂಪ್ರದಾಯಿಕ ಧಾರ್ಮಿಕ ಕಲೆಯನ್ನು ಬೆಂಗಳೂರು ದೂರದರ್ಶನ ಚಂದನ […]