ತೆರೆದ ವಾಹನದಲ್ಲಿ RCB ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ: ಯಾಕೆ ಗೊತ್ತಾ?

ಐಪಿಎಲ್ -2025ನಲ್ಲಿ ಕಪ್ ಗೆದ್ದು ಬೀಗಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಇನ್ನು ಕೆಲವೇ ಹೊತ್ತಿನಲ್ಲಿ ಬೆಂಗಳೂರಿಗೆ ಆಗಮಿಸಲಿದ್ದು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ. ಆರ್‌ಸಿಬಿ ತಂಡ ವಿಕ್ಟರಿ ಪರೇಡ್ ಇಂದು ನಡೆಸುವ ಸಾಧ್ಯತೆ ಇತ್ತು. ಆದರೆ ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲವೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G. Parameshwara) ಹೇಳಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರ ಆರ್‌ಸಿಬಿ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. ಆರ್‌ಸಿಬಿ ತಂಡ ನೇರವಾಗಿ […]
RCB ಫ್ಯಾನ್ಸ್ ಗಮನಕ್ಕೆ: ಬೆಂಗಳೂರಿನಲ್ಲಿ ವಿಜಯಯಾತ್ರೆ… ಸಮಯ, ಎಲ್ಲಿಂದ-ಎಲ್ಲಿಗೆ?

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್-18ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟ್ರೋಫಿಗೆ ಮುತ್ತಿಟ್ಟಿದೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆರ್‌ಸಿಬಿ ವಿಜಯಯಾತ್ರೆ ನಡೆಯಲಿದೆ. ಟ್ರೋಫಿ ಜೊತೆ ತಂಡದ ಆಟಗಾರರು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ. ಅಹಮದಾಬಾದ್ನಿಂದ ಆರ್‌ಸಿಬಿ ತಂಡವು ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಆ ಬಳಿಕ ವಿಜಯಯಾತ್ರೆಗೆ ಸಿದ್ಧತೆಯನ್ನು ನಡೆಸಲಿದೆ. ಸಂಜೆ 3.30 ಕ್ಕೆ ಬೆಂಗಳೂರಿನ ವಿಧಾನಸೌಧದಿಂದ ಆರ್‌ಸಿಬಿ ತಂಡದ ವಿಜಯಯಾತ್ರೆ ಆರಂಭವಾಗಲಿದ್ದು, ಎಂ. ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಈ […]
ರಾಜ್ಯ ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟ: ಕೊಡಗು ತಂಡ ಚಾಂಪಿಯನ್… ರಾಷ್ಟ್ರಮಟ್ಟಕ್ಕೆ ಆಯ್ಕೆ

ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ (Government) ನೌಕರರ ಸಂಘದ ಆಶ್ರಯದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಕೊಡಗು (Kodagu) ತಂಡ ಚಾಂಪಿಯನ್ ಆಗಿದೆ. ಫೈನಲ್ ಪಂದ್ಯದಲ್ಲಿ ಮೈಸೂರು ತಂಡದ ವಿರುದ್ದ 4-1 ಗೋಲುಗಳ ಅಂತರದಿಂದ ಗೆಲುವು ಸಾಧಿಸಿದೆ. ಆ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.
ಹಾಕಿ ವೀಕ್ಷಕ ವಿವರಣೆಗೆ ಭರವಸೆಯ ಧ್ವನಿ, ಚೈಯ್ಯಂಡ ʼಬನಿʼ

✍️ ಬರಹ – ಕಿಶೋರ್ ರೈ ಕತ್ತಲೆಕಾಡು ಕೊಡಗು ಜಿಲ್ಲೆಯಲ್ಲಿ ಹಾಕಿ ಕ್ರೀಡೆಯ ಇತಿಹಾಸದಲ್ಲಿ ಅನೇಕ ಖ್ಯಾತನಾಮರು ತಮ್ಮ ಛಾಪು ಮೂಡಿಸಿದ್ದಾರೆ. ಇಂದಿಗೂ ಹಲವು ಉದಯೋನ್ಮುಖ ಪ್ರತಿಭೆಗಳು ಹಾಕಿ (Hockey) ಕ್ರೀಡೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಕೊಡಗಿನ ಕ್ರೀಡಾ ಗತವೈಭವದ ಉಳಿವಿಗಾಗಿ ಕೊಡುಗೆ ನೀಡುತ್ತಿದ್ದಾರೆ. ಕ್ರೀಡಾಪಟುಗಳಂತೆಯೇ ಕ್ರೀಡಾ ವೀಕ್ಷಕ ವಿವರಣೆಗಾರರಿಗೂ ಇಂದಿನ ದಿನದಲ್ಲಿ ಹೆಚ್ಚಿನ ಬೇಡಿಕೆಯಿದೆ. ಮೈದಾನದಲ್ಲಿ ಆಟಗಾರರು ಆಡಿ ರಂಜಿಸಿದರೆ, ಆಟದ ವೈಭವ ಮತ್ತು ಅದರ ಸೊಗಡನ್ನು ತಮ್ಮ ಮಾತಿನ ಕೌಶಲ್ಯದಿಂದ ಮತ್ತಷ್ಟು ಕೌತುಕಭರಿತವಾಗಿ ಪ್ರೇಕ್ಷಕರಿಗೆ […]
ರಾಷ್ಟ್ರಮಟ್ಟದ ಪ್ಯಾರಾ ಟೆನ್ಪಿನ್ ಬೌಲಿಂಗ್ ಕ್ರೀಡಾಕೂಟದಲ್ಲಿ ಕೆ.ಎಂ. ಹಸ್ಸನ್‌ಗೆ ಕಂಚಿನ ಪದಕ

ಪ್ಯಾರಾ ಟೆನ್ಪಿನ್ ಬೌಲಿಂಗ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ದಿನಾಂಕ 05/05/2025 ರಿಂದ 07/05/2025 ರವರೆಗೆ ಬೆಂಗಳೂರುನಲ್ಲಿ ನಡೆದ 5ನೇ ರಾಷ್ಟ್ರಮಟ್ಟದ ಪ್ಯಾರಾ ಟೆನ್ಪಿನ್ ಬೌಲಿಂಗ್ ಕ್ರೀಡಾಕೂಟದಲ್ಲಿ ಕೊಡಗು (Kodagu) ಜಿಲ್ಲೆಯ ಮಡಿಕೇರಿ ತಾಲೂಕು ಅರೆಕಾಡು ಗ್ರಾಮದ ವಿಶೇಷಚೇತನರಾದ ಕೆ.ಎಂ. ಹಸ್ಸನ್ (Hassan) ಅವರಿಗೆ ಕಂಚಿನ ಪದಕ ದೊರೆತಿದೆ.
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ

ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat kohli) ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದೆ. ಇಂಗ್ಲೆಂಡ್ ಸರಣಿಗೂ ಮುನ್ನ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಇದರ ಬೆನ್ನಲ್ಲೇ ಕೊಹ್ಲಿ ಕೂಡ ಅದೇ ನಿ ನಿರ್ಧಾರ ತೆಗೆದುಕೊಂಡಿದ್ದಾರೆ. 2011 ರಿಂದ ಟೆಸ್ಟ್ ಕ್ರಿಕೆಟ್ ಆಡುತ್ತಿರುವ ಕಿಂಗ್ ಕೊಹ್ಲಿ 2019 ರವರೆಗೆ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಅವಧಿಯಲ್ಲಿ ಕೊಹ್ಲಿ ಬ್ಯಾಟಿಂಗ್ ಸರಾಸರಿ 54ರಲ್ಲಿ, 27 ಶತಕಗಳನ್ನು ಗಳಿಸಿದ್ದರು. ಆದರೆ 2020 ರ ನಂತರ ಬ್ಯಾಟಿಂಗ್ ನಿಧಾನವಾಯಿತು. […]
IPL 2025: ಐಪಿಎಲ್ ಟೂರ್ನಿ ರದ್ದು, ಯಾವಾಗ ನಡೆಯಲಿದೆ ದ್ವಿತೀಯಾರ್ಧ?

ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ, ಇಂಡಿಯನ್ ಪ್ರಿಮಿಯರ್ ಲೀಗ್ (IPL) 2025 ಪಂದ್ಯಾವಳಿಯನ್ನು ಬಿಸಿಸಿಐ ರದ್ದುಗೊಳಿಸಲಾಗಿದೆ. ಆಟಗಾರರು, ಪ್ರಾಂಚೈಸಿ, ಅಭಿಮಾನಿಗಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಇಂದು (ಮೇ 9) ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿಮ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿರುವ ಒಟ್ಟು 9 ಭಯೋತ್ಪಾದಕ ಶಿಬಿರಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದ ಮೇಲೆ, ಉಭಯ […]
ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ: ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?

ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇದು ಈಗ ದೀರ್ಘ ಕಾಲದಿಂದ ನಿವೃತ್ತಿ ಬಗ್ಗೆ ಇರುವ ಊಹಾಪೋಹಗಳಿಗೆ ಅಂತ್ಯ ಹಾಡಿದೆ. ಹಿಟ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದೆ. ಇನ್ನ್ಮುಂದೆ ಏಕದಿನ ಮಾದರಿಯಲ್ಲಿ ಮಾತ್ರ ದೇಶದ ಪರವಾಗಿ ಸ್ಫೋಟಕ ಬ್ಯಾಟ್ಸ್‌ಮನ್ ಅಬ್ಬರಿಸಲಿದ್ದಾರೆ. ಟೆಸ್ಟ್ ಮಾದರಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಹಿಟ್ ಮ್ಯಾನ್ […]
ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಸುವರ್ಣವಾಕಾಶ: ವಿಶೇಷ ಶಿಬಿರ

ಕ್ರೀಡೆಯಲ್ಲಿ (sports) ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಕ್ರೀಡಾ ವಸತಿ ಮತ್ತು ನಿಲಯಗಳಲ್ಲಿ ಪ್ರವೇಶಾವಕಾಶ ನೀಡುವ ಸಲುವಾಗಿ ಆಯ್ಕೆ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದಾದ್ಯಂತ ಒಟ್ಟು 2 ಕ್ರೀಡಾ ವಸತಿ ಶಾಲೆ ಹಾಗೂ 32 ಕ್ರೀಡಾ ವಸತಿ ನಿಲಯಗಳನ್ನು ಹೊಂದಿದೆ. ಈ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ 5ನೇತರಗತಿ, 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಹಂತದ ಕ್ರೀಡಾಪಟುಗಳಿಗೆ ಪ್ರವೇಶಾವಕಾಶ ನೀಡಲಾಗುತ್ತಿದ್ದು ಕ್ರೀಡಾಪಟುಗಳಿಗೆ ಉಚಿತ ಊಟೋಪಹಾರ, ವಸತಿ, ವೈಜ್ಞಾನಿಕ ಕ್ರೀಡಾ ತರಬೇತಿ, ಕ್ರೀಡಾ ಸಲಕರಣೆಗಳು, […]
ನಾಲ್ನಾಡ್ ಹಾಕಿ ಕ್ಲಬ್ ಬಲ್ಲಮಾವಟಿ : ಹಾಕಿ ತರಬೇತಿ ಉಚಿತ ಶಿಬಿರ ಸಂಪನ್ನ…

ನಾಪೋಕ್ಲು : ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಬಲ್ಲಮಾವಟಿ ನೇತಾಜಿ ವಿದ್ಯಾ ಸಂಸ್ಥೆಯ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಾಕಿ ತರಬೇತಿ ಉಚಿತ ಶಿಬಿರ ಸಂಪನ್ನಗೊಂಡಿತು. ಶಿಬಿರದ ಸಮಾರೋಪ ಸಮಾರಂಭ ಹಿರಿಯರ ಸಮ್ಮುಖದಲ್ಲಿ ಜರುಗಿತು. ಕ್ಲಬ್ ಅಧ್ಯಕ್ಷ ಕರವಂಡ ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ವೀಕ್ಷಕ ವಿವರಣೆಗಾರ ಚೆಪ್ಪುಡಿರ ಕಾರ್ಯಪ್ಪ, ಅಪ್ಪಚೆಟ್ಟೋಳಂಡ ರವಿ ಮೊಣ್ಣಪ್ಪ, ಕೈಬಿಲಿರ ಟಿಪ್ಪು ಚಂಗಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರಿರ ಪೂಣಚ್ಚ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಿಗೆ ಉಚಿತ ಟಿ […]