ನಾಳೆ ನಡೆಯುತ್ತಾ ಸಾರಿಗೆ ನೌಕರರ ಮುಷ್ಕರ..? – ಸಿಎಂ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲ..!

ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಳೆಯಿಂದ(ಆ.05) ಮುಷ್ಕರ ನಡೆಸಲು ಮುಂದಾಗಿದ್ದಾರೆ. ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಆ.04ರೊಳಗೆ ಈಡೇರಿಸುವಂತೆ ನೌಕರರ ಸಂಘಟನೆಗಳು ಆಗ್ರಹಿಸಿದ್ದವು. ಈಡೇರದಿದ್ದರೆ ನಾಳೆಯಿಂದ ಮುಷ್ಕರ ಕೈಗೊಳ್ಳುವುದಾಗಿ ಎಚ್ಚರಿಸಿವೆ. ಈ ಮಧ್ಯೆ ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ಸಭೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಒಕ್ಕೂಟದೊಂದಿದೆ ವಿಧಾನದೌಧದ ಸಮಿತಿ ಕೊಠಡಿಯಲ್ಲಿ ಸುದೀರ್ಘ ಚರ್ಚೆ ನಡೆಸಿದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ […]
ತಲಕಾವೇರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಜ್ಯೋತಿಶ್

ಮಡಿಕೇರಿ : ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹೆಚ್. ಜ್ಯೋತಿಶ್ (H.Jyothish), ರಾಜ್ಯ ಕಾರ್ಯದರ್ಶಿ ಕುಮಾರ್(Kumar ) ಶನಿವಾರ ಜೀವನದಿ ಕಾವೇರಿಯ ಉಗಮ ಸ್ಥಳ ತಲಕಾವೇರಿಗೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಪಕ್ಷದ ಕಾರ್ಯಕರ್ತರೊಂದಿಗೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ವಿರಾಜಪೇಟೆ ಯುವ ಕಾಂಗ್ರೆಸ್ ಉಪಾಧ್ಯಕ್ಷ ಗೌರೀಶ್ ರೈ(Gowrish rai), ಅನಂತ್ ಭಾಗಮಂಡಲ, ಜಸ್ವಂತ್ ಭಾಗಮಂಡಲ, DCC ಸದಸ್ಯ ಸುನೀಲ್ ಪತ್ರವೊ, ಮೈಸೂರು ನಗರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯದ್ ಅಬ್ರಾರ್, […]
ಧರ್ಮಸ್ಥಳದಲ್ಲಿ ಶ*ವ ಹೂತ ಪ್ರಕರಣ – 06ನೇ ಪಾಯಿಂಟ್ನಲ್ಲಿ ಪತ್ತೆಯಾಯಿತು ಮೂಳೆ..!

ಧರ್ಮಸ್ಥಳ : ನೂರಕ್ಕೂ ಹೆಚ್ಚು ಶವಗಳನ್ನ ಹೂತಿದ್ದೇನೆಂದು ವ್ಯಕ್ತಿಯೊಬ್ಬ ಹೇಳಿದ ಕೇಸ್ನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಮೂರು ದಿನದಿಂದ ನಡೆಯುತ್ತಿದ್ದ ಉತ್ಕನನದಲ್ಲಿ ಇಂದು ಆರನೇ ಪಾಯಿಂಟ್ನಲ್ಲಿ ಮೂಳೆ ಪತ್ತೆಯಾಗಿದೆ. ಮೊನ್ನೆಯಿಂದ ದೂರುದಾರ ವ್ಯಕ್ತಿಯ ಸಮ್ಮುಖದಲ್ಲಿ ಎಸ್ಐಟಿ ಶೋಧ ಕಾರ್ಯ ನಡೆಸಿತ್ತು. ಸಣ್ಣ ಹಿಟಾಚಿಯನ್ನೂ ಬಳಸಲಾಗಿತ್ತು. ಇಂದು ನೇತ್ರಾವತಿ ನದಿ ತೀರದಲ್ಲಿ ಗುರುತಿಸಿದ್ದ ಪಾಯಿಂಟ್ ನಂಬರ್ ಆರರಲ್ಲಿ ಕಳೇಬರದ ಕುರುಹು ಪತ್ತೆಯಾಗಿದೆ. ಅದು ಮನುಷ್ಯನದ್ದಾ, ಪ್ರಾಣಿಯದ್ದಾ ಎಂಬ ಬಗ್ಗೆ ತಿಳಿಯಲು ಅದನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ, ಅಲ್ಲಿಂದ ವರದಿ ಬಂದ […]
ಮಹಿಳೆ ಮೇಲೆ ಅ*ತ್ಯಾಚಾರ ಪ್ರಕರಣ – ನಾಳೆ ತೀರ್ಪು ಪ್ರಕಟಿಸಲಿರುವ ನ್ಯಾಯಾಲಯ – ಏನಾಗಲಿದೆ ಪ್ರಜ್ವಲ್ ರೇವಣ್ಣ ಭವಿಷ್ಯ..!

ಬೆಂಗಳೂರು : ಅತ್ಯಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಬೇಲ್ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ(ಆ.01) ತೀರ್ಪು ಪ್ರಕಟಿಸಲಿದೆ. ವಿಚಾರಣೆ ಮುಕ್ತಾಯವಾಗಿ ಜುಲೈ 30ರಂದು ತೀರ್ಪು ಪ್ರಕಟವಾಗಬೇಕಿತ್ತು. ಆದರೆ ಕೆಲವು ಸ್ಪಷ್ಟೀಕರಣ ಬೇಕಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆಗಸ್ಟ್ 1ಕ್ಕೆ ತೀರ್ಪು ಕಾಯ್ದಿರಿಸಿದ್ದಾರೆ. ಸರ್ಕಾರದ ಪರ ಎಪಿಪಿ ಜಗದೀಶ್, […]
ಕೊಡಗು ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರ ಜೊತೆ ಸಿಎಂ ಸಭೆ – ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ..!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿವಿಧ ಜಿಲ್ಲೆಗಳ ಶಾಸಕರು, ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿದರು. ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಿಎಂ, ಮಳೆ ಹಾನಿ, ಕೈಗೊಂಡಿರುವ ಪರಿಹಾರ ಕ್ರಮ, ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಚರ್ಚಿಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಬೋಸರಾಜ್, ಶಾಸಕರಾದ ಎ.ಎಸ್. ಪೊನ್ನಣ್ಣ, ಮಂತರ್ ಗೌಡ ಇದ್ದರು.
ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ತಮ್ಮಯ್ಯಗೆ ಅಧ್ಯಾಪಕ ಭೂಷಣ ಪ್ರಶಸ್ತಿ

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ದೈಹಿಕ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಬೇಗೂರು ಕೆಚೆಟ್ಟಿರ .ಎಸ್. ತಮ್ಮಯ್ಯನವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ(ರಿ) ಮಂಗಳೂರು ವಿಭಾಗ ವತಿಯಿಂದ ನೀಡಲಾಗುವ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪನ್ ನಲ್ಲಿ ನಡೆದ ಪ್ರೇರಣ ದಿವಸ್ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ ಚಂದ್ ಗೊಹ್ಲೋಟ್ ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕ್ರೀಡಾ ವಿಭಾಗದಲ್ಲಿ ಇವರ ಮಾರ್ಗದರ್ಶನದಲ್ಲಿ ವಿಧ್ಯಾರ್ಥಿಗಳು ಮಾಡಿದ ಸಾಧನೆಯ ಹಿನ್ನಲೆ ಅತ್ಯುತ್ತಮ ದೈಹಿಕ ನಿರ್ದೇಶಕ ಎಂಬ ನೆಲೆಯಲ್ಲಿ […]
ನಟಿ ರಮ್ಯಾಗೆ ದರ್ಶನ್ ಫ್ಯಾನ್ಸ್ ನಿಂದನೆ – ಕೊನೆಗೂ ಮೌನ ಮುರಿದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ – ರಮ್ಯಾ ಜೊತೆ ನಾವಿದ್ದೇವೆ ಎಂದ ಶಿವಣ್ಣ ದಂಪತಿ..!

ಬೆಂಗಳೂರು : ಸೋಷಿಯಲ್ ಮೀಡಿಯಾದಲ್ಲಿ ತನ್ನ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿರುವ ಸ್ಯಾಂಡಲ್ವುಡ್ ತಾರೆ ರಮ್ಯಾಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ನಿಮ್ಮ ನಿಲುವು ಸರಿಯಾಗಿದೆ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆಂದು ಶಿವರಾಜ್ಕುಮಾರ್ ಹಾಗೂ ಗೀತಾ ಶಿವರಾಜ್ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆ ವಿರುದ್ಧವು ಆ ರೀತಿ ಮಾತನಾಡುವುದು ಸರಿಯಲ್ಲ. ಅದನ್ನು […]
ಶೂಟಿಂಗ್ ಚಾಂಪಿಯನ್ಶಿಪ್ ಸ್ಪರ್ಧೆ: ಬೆಳ್ಳಿ ಪದಕ ಗೆದ್ದ ಪ್ರೀತ್ ಅಪ್ಪಯ್ಯ

ಮೈಸೂರು: 13ನೇ ಕರ್ನಾಟಕ ರಾಜ್ಯ ಶೂಟಿಂಗ್ ಸ್ಪರ್ಧೆ ಮತ್ತು ಚಾಂಪಿಯನ್ಶಿಪ್ ನಲ್ಲಿ ಮಹಿಳಾ ಮಾಸ್ಟರ್ಸ್ ವಿಭಾಗದಲ್ಲಿ ಕೊಡಗಿನ ಜಮ್ಮಡ ಪ್ರೀತ್ ಅಪ್ಪಯ್ಯ ಬೆಳ್ಳಿ ಪದಕ ಗೆದ್ದಿದ್ದಾರೆ. ಕರ್ನಾಟಕ ರಾಜ್ಯ ರೈಫಲ್ ಅಸೋಸಿಯೇಷನ್ ಆಯೋಜಿಸಿದ್ದ ಚಾಂಪಿಯನ್ಶಿಪ್ ಜುಲೈ 1 ರಿಂದ 21 ರವರೆಗೆ ಬೆಂಗಳೂರಿನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ ಶೂಟಿಂಗ್ ರೇಂಜ್ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಶೂಟಿಂಗ್ ರೇಂಜ್ನಲ್ಲಿ ನಡೆಯಿತು.
ರದ್ದಾಗುತ್ತಾ ನಟ ದರ್ಶನ್, ಪವಿತ್ರಾ ಜಾಮೀನು..? ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ – ಅಂತಿಮ ಆದೇಶದ ಮೇಲೆ ಎಲ್ಲರ ಕುತೂಹಲ..!

ನವದೆಹಲಿ: ನಟ ದರ್ಶನ್ಗೆ ನೀಡಿದ್ದ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು ಮುಂದಿನ ವಾರಕ್ಕೆ ಕಾಯ್ದಿರಿಸಿದೆ.ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ನಟ ದರ್ಶನ್ (Darshan) ಹಾಗೂ ಇತರರಿಗೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆರೋಪಿಗಳಾದ ಪವಿತ್ರಾ ಗೌಡ(A1), ದರ್ಶನ್(A2), ಪ್ರದೂಷ್(A14), ಲಕ್ಷ್ಮಣ್(A12), ನಾಗರಾಜ್(A11), ಅನುಕುಮಾರ್(A7), ಜಗದೀಶ್(A6)ಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೊರ್ಟ್ನಲ್ಲಿ ಪ್ರಶ್ನಿಸಿತ್ತು. ಇಂದು ವಾದ ಪ್ರತಿ […]
ಮಿಲಿಟರಿ ಪಿಂಚಣಿ ಇಲ್ಲದ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಿಲಿಟರಿ ಪಿಂಚಣಿ ಇಲ್ಲದ ಕರ್ನಾಟಕ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ನಿಧಿಯಿಂದ ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಓದುವ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತು ಪಡಿಸಿ) ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ ಡಿಪ್ಲೋಮ ಜೆಓಸಿ/ ಪ್ರೋಫೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ(ಅಧಿಕಾರಗಳನ್ನು ಹೊರತು ಪಡಿಸಿ) ಶಿಷ್ಯ […]