ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನಮ್ಮ ಸರ್ಕಾರ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ದೊಡ್ಡಬಳ್ಳಾಪುರ: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನುಡಿದರು. ಇಂಧನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮತ್ತು ಜಿಲ್ಲಾಡಳಿತ ಹಾಗೂ ಡಾ.ಎಚ್.ನರಸಿಂಹಯ್ಯ ಸಾಂಸ್ಕೃತಿಕ ಕೇಂದ್ರ, ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆಗೆ […]
ಜೂ.11 ರಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಕೊಡಗು ಜಿಲ್ಲಾ ಪ್ರವಾಸ
ಮಡಿಕೇರಿ : ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಜೂನ್, 11 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಜೂನ್, 11 ರಂದು ಬೆಳಗ್ಗೆ 10.45 ಗಂಟೆಗೆ ಕುಶಾಲನಗರದ ಇಂದಿರಾ ಕ್ಯಾಂಟೀನ್ ಭೇಟಿ ಹಾಗೂ ಪರಿಶೀಲನೆ ಮಾಡಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ನಗರಾಭಿವೃದ್ದಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಕುಶಾಲನಗರದಲ್ಲಿ ‘ನೂತನ ಪುರಸಭಾ ಕಚೇರಿ ಕಟ್ಟಡ’ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 12.45 ಗಂಟೆಗೆ ಕೊಡಗು ಜಿಲ್ಲೆಯ […]
ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ: ಸಿಎಂ ಸಿದ್ದರಾಮಯ್ಯ
ನವದೆಹಲಿ(new dellhi) : ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ಕರ್ನಾಟದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ವಿವಿಧ ಜಾತಿಗಳ ಸಂಘಸಂಸ್ಥೆಗಳು, ಮಠಾಧೀಶರು, ಸಮುದಾಯದಗಳ ಮುಖಂಡರು, ಸಚಿವರು ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚಿಸಲಾಗಿ, ಜಾತಿಗಣತಿ ವರದಿಯನ್ನು […]
ಬೆಂಗಳೂರಿನಲ್ಲಿ ಕಾಲ್ತುಳಿತ: ಸ್ವಯಂಪ್ರೇರಿತ PIL ದಾಖಲಿಸಿಕೊಂಡ ಹೈಕೋರ್ಟ್

ಆರ್ಸಿಬಿ (RCB) ವಿಜಯೋತ್ಸವ ಕಾರ್ಯಕ್ರಮದ ವೇಳೆ ಬೆಂಗಳೂರಿನ (Bengaluru) ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಈ ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ನೀಡಿ, ಆದೇಶ ಹೊರಡಸಿದೆ. ಈ ಪ್ರಕರಣದ ವಿಚಾರಣಾಧಿಕಾರಿಯಾಗಿ ಜಿಲ್ಲಾಧಿಕಾರಿ ಜಗದೀಶ್.ಜಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಕಾಲ್ತುಳಿತ ದುರಂತದಲ್ಲಿ 11 ಜನರ ಸಾವಿಗೆ ಸಂಬಂಧಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ […]
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ 11 ಸಾವು: ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಐಪಿಎಲ್ 2025ರ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium) ಬಳಿ ಭೀಕರ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಭೀಕರ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), […]
ಬಾನು ಮುಷ್ತಾಕ್ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ – ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿ.ಎಂ – ಇಬ್ಬರಿಗೂ ತಲಾ 10 ಲಕ್ಷ ಪುರಸ್ಕಾರ ಘೋಷಿಸಿದ ಮುಖ್ಯಮಂತ್ರಿ

ಬೆಂಗಳೂರು : ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್(buker) ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು. ಬಾನು ಮುಷ್ತಾಕ್(banu mushtaq) ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ […]
ಆರ್ಮಿ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು : ಸೈನಿಕರು, ನಿವೃತ್ತ ಸೈನಿಕರಿಗೆ ಆರ್ಮಿ ಕ್ಯಾಂಟೀನ್‌ನಿಂದ (Army Canteen)ದೊರೆಯುವ ಮದ್ಯಕ್ಕೆ ಸುಂಕ ವಿಧಿಸುವ ವಿಚಾರ ಕೆಲವು ದಿನದಿಂದ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದು, ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಬೆಂಗಳೂರಿನ ಟೌನ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ ಅವರು ಈ ವಿಚಾರ ಪ್ರಸ್ತಾಪಿಸಿದರು. ಸುಂಕ ವಿಧಿಸಲು ಮುಂದಾಗಿದ್ದ ಸರ್ಕಾರದ ಕ್ರಮಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಆ […]
ಕನ್ನಡತನದ ಗಂಧ-ಗಾಳಿ ಗೊತ್ತಿಲ್ಲದ ನಟಿಗೆ “ಗಂಧದ” ಸೋಪಿನ ಸಂಸ್ಥೆಯ ರಾಯಭಾರಿ ಮಾಡಿದ್ದೇಕೆ? ಸಂಸದ ಯದುವೀರ್ ಪ್ರಶ್ನೆ

ಮೈಸೂರು: ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅತ್ಯಂತ ಅಸಂಬದ್ಧ ಹಾಗೂ ಬೇಜವಾಬ್ದಾರಿಯುತ ನಿರ್ಧಾರ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Wadiyar) ಕಿಡಿಕಾರಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದರು, ಇದು ಕಾಂಗ್ರೆಸ್ ಸರ್ಕಾರದ ಅವಿವೇಕದ ತೀರ್ಮಾನ ಎಂದು ಹೇಳಿದ್ದಾರೆ. 1916ರಲ್ಲಿ […]
ಭಾರತೀಯತೆಯ ಬೆಸುಗೆಗೆ ಬೂಕರ್ ಮನ್ನಣೆ: ಭಾನು ಮುಷ್ತಾಕ್ ನಮ್ಮ ನೆಲದ ಹೆಮ್ಮೆ… ಕೆ.ವಿ.ಪ್ರಭಾಕರ್ ಸಂತಸ

ಬೆಂಗಳೂರು : ಬೂಕರ್ (Booker) ವೇದಿಕೆಯಲ್ಲಿ ಕನ್ನಡದ ಸಾಹಿತ್ಯದ ಹಿರಿಮೆಯನ್ನು ಎತ್ತಿ ಹಿಡಿದ ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ (Bhanu Mushtaq) ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ಭಾರತೀಯತೆಯ ಬೆಸುಗೆಗೆ ಸಿಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಲೇಖನ, ಭಾಷಣ ಮತ್ತು ಕತೆಗಳಲ್ಲಿ ನಮ್ಮ ನೆಲದ ಮೂಲ ಸತ್ವ ಮತ್ತು ಮೂಲ ತತ್ವ ಆಗಿರುವ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ […]
ರಾಜ್ಯದಿಂದ ಆಂಧ್ರಕ್ಕೆ ಆನೆಗಳ ಹಸ್ತಾಂತರ – 3695 ಆನೆ ಸಂಪತ್ತು ರಾಜ್ಯದಲ್ಲಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾನವ ಆನೆ(elephant) ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ನುಡಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ […]