ಪವಿತ್ರ ಕಾವೇರಿ ತೀರ್ಥೋದ್ಭವ – ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭಾಗಿ…

ಮಡಿಕೇರಿ : ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅಕ್ಟೋಬರ್‌ 17ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ನಾಳೆ ಮಧ್ಯಾಹ್ನ ಕಾವೇರಿ ಉಗಮಸ್ಥಳ ತಲಕಾವೇರಿಯಲ್ಲಿ ನಡೆಯಲಿರುವ ತೀರ್ಥೋದ್ಭವ ವೀಕ್ಷಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 12.30ಕ್ಕೆ ಭಾಗಮಂಡಲಕ್ಕೆ ಹೆಲಿಕಾಪ್ಟರ್‌ ಮೂಲಕ ಆಗಮಿಸಿ, ನಂತರ ತಲಕಾವೇರಿಗೆ ತೆರಳಲಿದ್ದಾರೆ. ಪೂಜಾ ಕಾರ್ಯ ಹಾಗೂ ತೀರ್ಥೋದ್ಭವ ವೀಕ್ಷಣೆ ಬಳಿಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆಂದು ಡಿಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

RSS ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ? – ಬೆದರಿಕೆಗೆ ನಾನೂ ಹೆದರಲ್ಲ, ಖರ್ಗೆಯವರೂ ಹೆದರಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ತಮಿಳುನಾಡಿನಲ್ಲಿ ಆರ್.ಎಸ್.ಎಸ್. […]

ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ, ಅವಕಾಶ ಸಿಗಬೇಕು ಅಷ್ಟೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರೆದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ‌ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ […]

ಮತಗಳ್ಳತನದ ವಿರುದ್ಧ ಕಾಂಗ್ರೆಸ್‌ನಿಂದ ಸಹಿ ಸಂಗ್ರಹ ಅಭಿಯಾನ – ಮಡಿಕೇರಿ ಬ್ಲಾಕ್‌ ವ್ಯಾಪ್ತಿಯಲ್ಲಿ 40 ಸಾವಿರ ಸಹಿ ಸಂಗ್ರಹಿಸುವ ಗುರಿ

ಮಡಿಕೇರಿ : ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾಂಗ್ರೆಸ್‌ ಪಕ್ಷದ ವತಿಯಿಂದ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಕೊಡಗು ಜಿಲ್ಲೆಯಲ್ಲೂ ಈ ಅಭಿಯಾನ ಆರಂಭಿಸಲಾಗಿದೆ. ಮಡಿಕೇರಿ ಬ್ಲಾಕ್‌ ವ್ಯಾಪ್ತಿಯಲ್ಲಿ 40 ಸಾವಿರ ಮತದಾರರ ಸಹಿ ಸಂಗ್ರಹಿಸುವ ಗುರಿ ಇದೆ. ಬುಧವಾರದಿಂದ ಮನೆ, ಮನೆಗೆ ತೆರಳಿ ಸಹಿ ಸಂಗ್ರಹಿಸಲಾಗುವುದು ಎಂದು ಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ ತಿಳಿಸಿದ್ದಾರೆ. ನೈಜ ಮತದಾರರನ್ನು ನಿಗ್ರಹಿಸಲು ಮೋಸದ ಜಾಲಗಳನ್ನು ಬಳಸಿಕೊಂಡು ಚುನಾವಣೆಯಲ್ಲಿ ಅಕ್ರಮಗಳು ನಡೆಯುತ್ತಿವೆ. […]

ಬಸ್‌ಗಳಲ್ಲಿ ಎಲ್ಲಿ ನೋಡಿದ್ರೂ ಮಹಿಳೆಯರೇ… ನಾಲ್ಕು ಜನ ಗಂಡಸ್ರು ಹೋಗೋದು ಕಷ್ಟ – ಗ್ಯಾರಂಟಿ ಯೋಜನೆ ಬಗ್ಗೆ ಆರ್‌.ವಿ. ದೇಶಪಾಂಡೆ ಲೇವಡಿ..!

ಬೆಂಗಳೂರು( coorgbuzz.com ) : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆ ಬಗ್ಗೆ ವಿಪಕ್ಷ ಬಿಜೆಪಿ ಟೀಕೆ ಮಾಡುತ್ತಲೇ ಇದೆ. ಈಗ ಈ ಸಾಲಿಗೆ ಆಡಳಿತ ಪಕ್ಷದ ಶಾಸಕರು ಕೂಡಾ ಕೈಜೋಡಿಸಿದಂತಿದೆ. ಸ್ವಪಕ್ಷೀಯರಿಂದಲೇ ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ. ಕಾಂಗ್ರೆಸ್‌ನ ಹಿರಿಯ ಶಾಸಕ ಆರ್.ವಿ. ದೇಶಪಾಂಡ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ತಮ್ಮದೇ ದಾಟಿಯಲ್ಲಿ ಯೋಜನೆಗಳನ್ನು ವ್ಯಂಗ್ಯವಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ದೇಶಪಾಂಡೆ, ಸರ್ಕಾರ ಜಾರಿಗೆ ತಂದಿರುವ ಯೋಜನೆ ಒಂದಾ ಎರಡಾ… ಉಚಿತ ಬಸ್‌ನಿಂದಾಗಿ ಮಹಿಳೆಯರೇ ಎಲ್ಲಿ ನೋಡಿದ್ರೂ […]

RSS ವಿರುದ್ಧ ಮುಂದುವರೆದ ಕಾಂಗ್ರೆಸ್ಸಿಗರ ಆಕ್ರೋಶ – ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ದಿನೇಶ್‌ ಗುಂಡೂರಾವ್‌ ಬೆಂಬಲ…

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ವಿರುದ್ಧ ಕಾಂಗ್ರೆಸ್‌ ನಾಯಕರ ಟೀಕೆ, ವಾಗ್ದಾಳಿ ಮುಂದುವರೆದಿದೆ. ಸಂಘಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅ.12ರಂದು ರಾಜ್ಯಾದ್ಯಂತ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು. ಲಕ್ಷಾಂತರ ಕಾರ್ಯಕರ್ತರು ಈ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿಗೆ ಪತ್ರಬರೆದಿದ್ದು, ಅದಕ್ಕೆ ಸರ್ಕಾರದಿಂದ ಪ್ರತಿಕ್ರಿಯೆ ಸಿಕ್ಕ ವಿಚಾರ ಬಹಿರಂಗವಾಗಿತ್ತು. ಇದಾದ ಬೆನ್ನಲ್ಲೇ ಮತ್ತೊಬ್ಬ ನಾಯಕ ದಿನೇಶ್‌ ಗುಂಡೂರಾವ್‌ ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ದಾರೆ. . ಆರ್‌ಎಸ್‌ಎಸ್ […]

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಿ – ಸಿಎಂಗೆ ಪತ್ರ ಬರೆದ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಶತಮಾನದ ಸಂಭ್ರಮದಲ್ಲಿದೆ. ಈ ನಡುವೆ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ನಡೆಸುವ ಎಲ್ಲಾ ರೀತಿಯ ಚಟುವಟಿಕೆಗಳ ಮೇಲೆ ನಿಷೇಧ ಹೇರಬೇಕೆಂದು ರಾಜ್ಯದ ಪ್ರಭಾವಿ ಸಚಿವರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಈ ಸಂಬಂಧಿತವಾಗಿ ಸಿಎಂಗೆ ಪತ್ರವನ್ನೂ ಬರೆದಿದ್ದಾರೆ. ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಹೇರಬೇಕೆಂದು ಆಗ್ರಹಿಸಿರುವುದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ. ಅವರು ಬರೆದಿರುವ ಪತ್ರದಲ್ಲಿನ ಅಂಶಗಳು ಇಂತಿವೆ. ಆರ್‌ಎಸ್‌ಎಸ್‌ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು, ಸರ್ಕಾರಿ […]

ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ – ಸರ್ಕಾರದ ವಿರುದ್ಧ ಸಂಸದ ಯದುವೀರ್‌ ಆಕ್ರೋಶ

ಮೈಸೂರು : ಇತ್ತೀಚಿನ ದಿನದಲ್ಲಿ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಹಬ್ಬದ ವಾತಾವರಣ ಈಗಲೂ ಇದೆ. ಆದರೆ ಇಲ್ಲಿ ನಡೆದ ಘಟನೆಗಳು ಕಾನೂನು ಸುವ್ಯವಸ್ಥೆ ಹೇಗಿದೆ ಅನ್ನೋದನ್ನ ತೋರಿಸುತ್ತಿದೆ. ಹಿಂದೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಯಿತು. 340 ಕೋಟಿ ರೂಪಾಯಿಯ ಡ್ರಗ್ಸ್ ಪತ್ತೆಯಾಯಿತು. ಇದನ್ನ ಮಹಾರಾಷ್ಟ್ರದ ಪೊಲೀಸರು ಪತ್ತೆ ಮಾಡಬೇಕಾಯಿತು. ಇದೀಗ ಅರಮನೆ ಬಳಿಯಲ್ಲೇ ಕೊಲೆ […]

ಬಾಲಕಿಯ ಅ*ತ್ಯಾಚಾರ, ಕೊ*ಲೆ ಪ್ರಕರಣ – ಆರೋಪಿ ಕಾಲಿಗೆ ಗುಂಡೇಟು..!

ಮೈಸೂರು : ದಸರಾದಲ್ಲಿ ಬಲೂನ್‌ ಮಾರಾಟ ಮಾಡುತ್ತಿದ್ದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಸಿದ್ದಲಿಂಗಪುರದ ಕಾರ್ತಿಕ್‌ ಬಂಧಿತ ಆರೋಪಿ. ಅತ್ಯಾಚಾರ ಮಾಡಿ, ಕೊಲೆಗೈದು ಬಸ್‌ನಲ್ಲಿ ಕೊಳ್ಳೇಗಾಲಕ್ಕೆ ಎಸ್ಕೇಪ್‌ ಆಗಿದ್ದ. ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು ಆಧರಿಸಿ ಕಾರ್ಯಾಚರಣೆಗಿಳಿದ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ. ಬಂಧಿಸಿ ಕರೆತರುವ ವೇಳೆ ಪೊಲೀಸರ ವಶದಿಂದ ತಪ್ಪಿಸಿಕೊಳ್ಳಲು ಈತ ಯತ್ನಿಸಿದ್ದು, ಪೊಲೀಸರು ಆತನ ಮೊಣಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆ ಮಂಡ್ಯದಲ್ಲಿ ಮಹಿಳೆ ಮೇಲೆ […]

ಅನ್ನ ಭಾಗ್ಯ ಯೋಜನೆಯಲ್ಲಿ ಮಹತ್ತರ ಬದಲಾವಣೆ – ಅಕ್ಕಿಯ ಬದಲು ಸಿಗಲಿದೆ ʼಇಂದಿರಾ ಫುಡ್‌ ಕಿಟ್‌ʼ..!

ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಲ್ಲಿ ಮಹತ್ತರ ಬದಲಾವಣೆ ಮಾಡಿದೆ. ಈವರೆಗೆ ಅನ್ನಭಾಗ್ಯ ಯೋಜನೆಯಡಿ ವ್ಯಕ್ತಿಗೆ 05 ಅಕ್ಕಿಯನ್ನು ರಾಜ್ಯ ಸರ್ಕಾರ ನೀಡುತ್ತಿತ್ತು. ಆದರೆ ಇನ್ನು ಮುಂದೆ ಅದು ರದ್ದಾಗಲಿದ್ದು, ಅದರ ಬದಲಿಗೆ ಫುಡ್‌ ಕಿಟ್‌ ನೀಡುವುದಕ್ಕೆ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರದಿಂದ 05 ಕೆಜಿ ಅಕ್ಕಿ ಸಿಗಲಿದ್ದು, ರಾಜ್ಯ ಸರ್ಕಾರದ ಅಕ್ಕಿಯ ಬದಲಿಗೆ ಫುಡ್‌ ಕಿಟ್‌ ಅನ್ನು ನೀಡಲಿದೆ. ಇಂದಿರಾ ಆಹಾರ ಕಿಟ್‌ನಲ್ಲಿ ಎಎವೈ ಮತ್ತು ಪಿಎಚ್ಎಚ್ ಪಡಿತರ ಫಲಾನುಭವಿಗಳಿಗೆ ತೊಗರಿ ಬೆಳೆ 2ಕೆಜಿ, […]