ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ – ಮಹಿಳೆಯರ ʼಋತುಚಕ್ರ ರಜೆʼಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ವಿವಿಧ ಕ್ಷೇತ್ರದಲ್ಲಿ ಉದ್ಯೋಗದಲ್ಲಿ ತೊಡಗಿರುವ ಮಹಿಳೆಯರಿಗೆ ಇನ್ನು ಮುಂದೆ ತಿಂಗಳಿಗೆ ಒಂದು ದಿನ ಋತುಚಕ್ರದ ರಜೆ ನೀಡುವ ನಿರ್ಧಾರಕ್ಕೆ ಸಚಿವ ಸಂಪುಟ ಸಮ್ಮತಿಸಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್ MNC ಗಳು IT ಮತ್ತು ಇತರೆ ಖಾಸಗಿ ಕೈಗಾರಿಕೆ ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ […]

ಶ್ರೀಗಂಧ ಕಳ್ಳಸಾಗಣೆ – ಪತ್ರಕರ್ತ ಸೇರಿ ಇಬ್ಬರ ಬಂಧನ

ಮೂಡಿಗೆರೆ : ಶ್ರೀಗಂಧದ ತುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಮೂಡಿಗೆರೆ ವಲಯದ ಅರಣ್ಯಾಧಿಕಾರಿಗಳು ಪತ್ತೆ ಮಾಡಿ, ಆರೋಪಿಗಳನ್ನು ಬಂಧಿಸಿದ್ದಾರೆ. ಮೂಡಿಗೆರೆ ಪ್ರಾದೇಶಿಕ ವಲಯ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ತುಂಡುಗಳನ್ನು ಅಕ್ರಮವಾಗಿ ಸಾಗಣೆ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಯೂಸುಫ್‌ ಹಾಗೂ ಮನ್ಸೂರ್‌ ಎಂಬಿಬ್ಬರು ಬೈಕ್‌ನಲ್ಲಿ ಗಂಧದ ತುಂಡುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಇಬ್ಬರನ್ನು ಅಧಿಕಾರಿಗಳು ಬಂದಿಸಿದ್ದು, ಬೈಕ್, ಶ್ರೀಗಂಧದ ತುಂಡು, ತುಂಡು […]

Breaking News : ಮನೆ ಮನೆ ಸಮೀಕ್ಷೆ – ಅಕ್ಟೋಬರ್ 18 ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್‌ 18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಸರ್ಕಾರ ರಜೆ ಘೋಷಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಶಿಕ್ಷಕರ ಸಂಘದ ಮನವಿಯಂತೆ ರಜೆ ವಿಸ್ತರಣೆ ಮಾಡಲಾಗಿದೆ. 19ರ ಒಳಗೆ ಸಮೀಕ್ಷೆ ಮುಗಿಯಲಿದೆ ಅಂತ ಶಿಕ್ಷಕರ ಸಂಘದವರು ತಿಳಿಸಿದ್ದಾರೆ. ಈ ಅವಧಿಯಲ್ಲಿ ನಷ್ಟವಾಗುವ ತರಗತಿಗಳನ್ನು ವಿಶೇಷ ಬೋಧನಾ ತರಗತಿಗಳ ಮೂಲಕ ಪೂರ್ಣಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ […]

ಕೊಡಗು ಜಿಲ್ಲೆಯಲ್ಲಿ ಜಾತಿ ಗಣತಿಗೆ ಹತ್ತಾರು ಅಡೆತಡೆ – ಕೈಕೊಡುತ್ತಿರುವ App – ಕೇಳುವವರಿಲ್ಲ ಸಿಬ್ಬಂದಿಯ ಗೋಳು..!

ವಿಶೇಷ ವರದಿ : ಕ-ವನ ಮಡಿಕೇರಿ : ರಾಜ್ಯ ಸರ್ಕಾರ ಹಲವು ಆಕ್ಷೇಪ, ವಿರೋಧಗಳ ನಡುವೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ ಜಾತಿ ಗಣತಿಯನ್ನು ಆರಂಭಿಸಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಆರಂಭದಲ್ಲೇ ಹಲವು ರೀತಿಯ ಅಡೆತಗಳು ಎದುರಾಗಿದ್ದು, ಸಮೀಕ್ಷೆಯಲ್ಲಿ ಭಾಗಿಯಾಗಿರುವ ಸಿಬ್ಬಂದಿಗೆ ತಲೆಬಿಸಿ ತಂದೊಡ್ಡಿದೆ. ಇಂದಿನಿಂದ ಸಮೀಕ್ಷೆ ಆರಂಭಿಸುವುದಕ್ಕೆ ಅಧಿಕಾರಿಗಳು ಸೂಚಿಸಿದ್ದರು. ಅದರಂತೆ ಶಿಕ್ಷಕರು ಸೇರಿದಂತೆ ಸಮೀಕ್ಷೆಗೆ ನಿಯೋಜನೆಗೊಂಡಿದ್ದ ಮಂದಿ ಬೆಳಗ್ಗೆಯೇ ತಮ್ಮ ಕಾರ್ಯಕ್ಷೇತ್ರಕ್ಕೆ ತೆರಳಿದ್ದಾರೆ. ಆದರೆ ಸರ್ವರ್‌ ಸಮಸ್ಯೆಯಿಂದಾಗಿ ಸಮೀಕ್ಷೆಗೆ ಬಳಸುವ ತಂತ್ರಾಂಶ ಓಪನ್‌ ಆಗಲೇ […]

ವಿಜ್ಞಾನ ಮತ್ತು ಸೃಜನಾತ್ಮಕತೆಯ ಕಲೆ ಛಾಯಾಗ್ರಹಣ – ಹಿರಿಯ ಛಾಯಾಗ್ರಾಹಕ ರವಿ ಪೊಸವಣಿಕೆ

ಮಡಿಕೇರಿ : ಛಾಯಾಚಿತ್ರ ಎನ್ನುವುದು ಒಂದು ಭಾಷೆ. ಇದು ಸಾವಿರ ಪದಗಳಿಗೆ ಸಮವಾಗಿದ್ದು, ಒಂದು ಚಿತ್ರದ ಮೂಲಕ ಕಥೆಯನ್ನು ಹೇಳಬಹುದು ಎಂದು ಟೈಮ್ಸ್ ಆಫ್ ಇಂಡಿಯಾ ದಿನ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಛಾಯಾಚಿತ್ರ ಪತ್ರಕರ್ತ ರವಿ ಪೊಸವಣಿಕೆ ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಪತ್ರಿಕೋದ್ಯಮ ವಿಭಾಗ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿಚಾರ ಸಂಕಿರಣ ಕೊಠಡಿಯಲ್ಲಿ ನಡೆದ ಛಾಯಾಚಿತ್ರ ಪತ್ರಿಕೋದ್ಯಮದ ವ್ಯಾಪ್ತಿ […]

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ 2025-26 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯ ಉದ್ದೇಶ; ಈ ಯೋಜನೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ನೇರವಾಗಿ ಸಾಲ- ಸಹಾಯಧನ ಮಂಜೂರು ಮಾಡಲು ಉದ್ದೇಶಿಸಿದೆ. ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು […]

ಹಾವುಗಳನ್ನು ಹಿಡಿದು ಫೋಟೋ ಶೂಟ್ ಮಾಡಿದರೆ ಕೇಸ್‌ ಬೀಳುತ್ತೆ ಎಚ್ಚರ..!

ಬೆಂಗಳೂರು : ಇತ್ತೀಚಿನ ದಿನದಲ್ಲಿ ಉರಗ ರಕ್ಷಣೆ ಹೆಸರಿನಲ್ಲಿ ಹಾವುಗಳಿಗೆ ಹಿಂಸೆ ನೀಡುತ್ತಿರುವುದು ಹಾಗೂ ಅವುಗಳನ್ನು ಬಳಸಿಕೊಂಡು ಫೋಟೋಶೂಟ್‌ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಕೊನೆಗೂ ಎಚ್ಚೆತ್ತಿದೆ. ಹಾವು ಹಾಗೂ ಅವುಗಳ ಮೊಟ್ಟೆಗಳನ್ನು ಅಕ್ರಮವಾಗಿ ದಾಸ್ತಾನು ಮಾಡುವುದು, ವಿಷ ತೆಗೆಯುವುದು, ಅನುಮತಿ ಇಲ್ಲದೆ ಅರಣ್ಯ ಪ್ರವೇಶಿಸಿದ ಸಂಶೋಧನೆ ಮಾಡುವವರ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ಕೊಟ್ಟಿದ್ದಾರೆ. ರಾಜ್ಯದ ಮಲೆನಾಡು ಭಾಗದಲ್ಲಿ ಅನಧಿಕೃತವಾಗಿ ಕಾಳಿಂಗ […]

ಏನಿದು ಮೆದುಳು ತಿನ್ನುವ ಅಮೀಬಾ – ಡಾ. ಕೆ.ಬಿ. ಸೂರ್ಯಕುಮಾರ್‌ ಅವರ ಸಕಾಲಿಕ ಬರಹ

ಕೇರಳದಲ್ಲಿ ಕೆಲವರಿಗೆ ಮೆದುಳಿನಲ್ಲಿ ಅಮೀಬಾ ಸೋಂಕು ಪತ್ತೆಯಾಗಿದ್ದು, ಜನ ಆತಂಕಕ್ಕೀಡಾಗುಂತೆ ಮಾಡಿದೆ. ಇದರ ಆತಂಕ ನೆರೆಯ ರಾಜ್ಯಗಳಲ್ಲೂ ಮೂಡಿದೆ. ಈ ಸಂದರ್ಭದಲ್ಲಿ ಹಿರಿಯ ವೈದ್ಯರಾದ ಡಾ. ಕೆ.ಬಿ. ಸೂರ್ಯಕುಮಾರ್‌ ಅವರು ಎರಡು ವರ್ಷದ ಹಿಂದೆ ಬರೆದ ಲೇಖನ ಸಕಾಲಿಕವಾಗಿದೆ. ಈ ಲೇಖನ ನಿಮ್ಮ ಮಾಹಿತಿಗಾಗಿ ಮಾತ್ರ. ಇದು ಅಪರೂಪದ ರೋಗವಾಗಿದ್ದು ಯಾವುದೋ ಒಂದು ಲಕ್ಷಣ ಕಂಡ ಕೂಡಲೇ ತನಗೆ ಆ ರೋಗವಿದೆ ಎಂದು ತಪ್ಪಾಗಿ ಯಾರೂ ತಿಳಿದುಕೊಳ್ಳಬೇಡಿ!. ಇತ್ತೀಚಿಗೆ ಕೇರಳದಿಂದ ಬಂದ ಒಂದು ವರದಿಯ ಪ್ರಕಾರ ಕಲುಷಿತ […]

ಪಂಚ ಗ್ಯಾರಂಟಿ ಯೋಜನೆಗೆ ಈವರೆಗೆ ಖರ್ಚಾಗಿದ್ದು 97,813 ಕೋಟಿ ರೂ..! – ಯಾವ್ಯಾವ ಯೋಜನೆಗೆ ಎಷ್ಟೆಷ್ಟು ಖರ್ಚಾಯ್ತು? ಇಲ್ಲಿದೆ ಮಾಹಿತಿ

ಬೆಂಗಳೂರು : ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ 544ಕೋಟಿ ಫಲಾನುಭವಿಗಳಿಗೆ ರೂ.13,903ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ 72.02ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ […]

ಮೈಸೂರು ದಸರಾ ಉದ್ಘಾಟನೆ ವಿವಾದ : ಬಾನು ಮುಷ್ತಾಕ್‌ ಮುಸ್ಲಿಂ ಅನ್ನುವ ಕಾರಣಕ್ಕೆ ವಿರೋಧಿಸುತ್ತಿಲ್ಲ – ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಬಾನು ಮುಷ್ತಾಕ್‌ ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ದಸರಾ ಉದ್ಘಾಟನೆಗೆ ವಿರೋಧ ಪಡಿಸುತ್ತಿಲ್ಲ. ಹಿಂದುಗಳ ಅರಿಶಿಣ ಕುಂಕುಮದ ಕುರಿತಾಗಿನ ಅವರ ನಿಲುವಿನ ಬಗ್ಗೆ ನಮ್ಮ ಆಕ್ಷೇಪ ಇರುವುದು ಅಂತ ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಾನು ಮುಷ್ತಾಕ್‌ ಬುಕರ್‌ ಪ್ರಶಸ್ತಿ ಗೆದ್ದಾಗ ನಾವೆಲ್ಲ ಅವರನ್ನು ಅಭಿನಂದಿಸಿದ್ದೇವೆ. ಆದರೆ ದಸರಾ ಉದ್ಘಾಟನೆಗೆ ಅವರನ್ನು ಆಯ್ಕೆ ಮಾಡಿದ ಸಂದರ್ಭದಲ್ಲಿ ನಮ್ಮ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದು, ವಿರೋಧವನ್ನೂ ವ್ಯಕ್ತಪಡಿಸಿದ್ದೇವೆ. ಅವರಿಗೆ ಹಿಂದುಗಳ ಆಚರಣೆ, […]