ನಾಳೆಯಿಂದ ವಾಹನ ಮಾಲೀಕರಿಗೆ ತೆರಿಗೆ ಶಾಕ್: ವಾಹನಗಳು ದುಬಾರಿ!

tax

ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ವಾಹನ ಖರೀದಿ ಕರ್ನಾಟಕದಲ್ಲಿ ಬಲು ದುಬಾರಿಯಾಗಿದೆ. ಅಲ್ಲದೇ ನಾಳೆಯಿಂದ ಅಂದರೆ ಮೇ ತಿಂಗಳ ಆರಂಭದಿಂದ ಲೈಫ್ ಟೈಮ್ ಟ್ಯಾಕ್ಸ್ (Tax) ಹೆಚ್ಚಾಗುತ್ತಿದೆ. ಸಣ್ಣ ಗೂಡ್ಸ್, ಟ್ಯಾಕ್ಸಿ, ಎಲೆಕ್ಟ್ರಿಕ್ ವಾಹನ ಸೇರಿದಂತೆ ಯಲ್ಲೋ ಬೋರ್ಡ್ ವಾಹನ ಖರೀದಿ ಕರ್ನಾಟಕದಲ್ಲಿ ಬಲು ದುಬಾರಿಯಾಗಿದೆ. ಮೇ.1 ರಿಂದ ಕರ್ನಾಟಕದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ಲೈಫ್ ಟೈಮ್ ಟ್ಯಾಕ್ಸ್ ಅಥವಾ ಜೀವಿತಾವಧಿ ತೆರಿಗೆ ಪಾವತಿಸಬೇಕು. ಹೊಸ ಆದೇಶ ನಾಳೆಯಿಂದಲೇ ಜಾರಿಯಾಗುತ್ತಿದೆ. ಮೇ 1ರಿಂದ 10 ಲಕ್ಷ ರೂ. […]

ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್ ಲೋಕಾರ್ಪಣೆ

Manipal

ಮಣಿಪಾಲ: ಮಣಿಪಾಲ್ (Manipal) ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE- ಮಾಹೆ), ಮಣಿಪಾಲದಲ್ಲಿ ಭಾರತದಲ್ಲಿಯೇ ವಿಶಿಷ್ಟವೆನಿಸುವ ‘ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್’ (MHRC) ಅನ್ನು ಇದೇ ಏಪ್ರಿಲ್ 30, 2025ರಂದು ಆಂಧ್ರ ಪ್ರದೇಶ ರಾಜ್ಯಪಾಲರಾದ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರು ಉದ್ಘಾಟಿಸಲಿದ್ದಾರೆ. ಈ ಕೇಂದ್ರ ವು ಜುಲೈ 2025ರಿಂದ ಸೇವೆಗೆ ತೆರೆದುಕೊಳ್ಳಲಿದೆ. ಮಾಹೆಯ ಅತ್ಯುನ್ನತ ಸಮಾಜಮುಖಿ ಯೋಜನೆಯಾದ ಇದು, ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಗಂಭೀರವಾದ ಕಾಯಿಲೆಯಿಂದ ಬಳಲಿಯುತ್ತಿರುವ ರೋಗಿಗಳು ಮತ್ತು ಅವರ […]

ಬೆಂಗಳೂರಿನ ನೀರಿನ ಬಿಕ್ಕಟ್ಟು ಪರಿಹರಿಸಲು ಬೋಸನ್ ವೈಟ್‌ವಾಟರ್ನಿಂದ ವಿಚಾರ ಸಂಕಿರಣ

Bengaluru’s Water Crisis

ಬೆಂಗಳೂರು: ಎಸ್ಟಿಪಿ ನೀರನ್ನು ಉತ್ತಮ ಗುಣಮಟ್ಟದ ಕುಡಿಯುವ ನೀರಾಗಿ ಪರಿವರ್ತಿಸುವ ವಾಟರ್ ಯುಟಿಲಿಟಿ ಕಂಪನಿ ಬೋಸನ್ ವೈಟ್ ವಾಟರ್, ಏಪ್ರಿಲ್ 16ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಾಯಿ ವಿಶ್ರಾಮ್ನಲ್ಲಿ “ಸುಸ್ಥಿರ ನೀರಿನ ನಿರ್ವಹಣಾ ಅಭ್ಯಾಸಗಳು” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಅಪಾರ್ಟ್ಮೆಂಟ್ ಸಂಘಗಳು, ನೀರಿನ ಟ್ಯಾಂಕರ್ ನಿರ್ವಾಹಕರು ಮತ್ತು ಸಂಸ್ಕರಿಸಿದ ನೀರಿನ ಕೈಗಾರಿಕಾ ಖರೀದಿದಾರರು ವರ್ತುಲ ಜಲ ನಿರ್ವಹಣೆಯ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಜತೆಗೆ ಬೆಂಗಳೂರಿನ (Bengaluru) ನೀರಿನ ಬಿಕ್ಕಟ್ಟನ್ನು ಪರಿಹರಿಸಲು […]

ಅನಿತಾ ಭಾಸ್ಕರ್ ಅವರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”

Anita Bhaskar

ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರನ್ನು 2023ನೇ ಸಾಲಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”ಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಪ್ರಶಸ್ತಿಯನ್ನು (Award) ಸನ್ಮಾನ್ಯ ಮುಖ್ಯ ಮಂತ್ರಿಗಳು ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್ ನಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಅನಿತಾ ಭಾಸ್ಕರ್ ಅವರು ಪ್ರವಾಸೋದ್ಯಮ ಕೇಂದ್ರ ಕಚೇರಿಯಲ್ಲಿ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ ಅವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ “ಸ್ವದೇಶ್ ದರ್ಶನ, ಪ್ರಸಾದ್ ಹಾಗೂ “ಸ್ವದೇಶ್ ದರ್ಶನ 2.0 ಯೋಜನೆಗಳು ಕರ್ನಾಟಕಕ್ಕೆ ದೊರಕುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ […]

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Chief Minister Siddaramaiah

ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನುಡಿದರು. ಅವರು ಇಂದು ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಆಶೋಕ್ […]

ಜಾತಿ ಸಾಮಾಜಿಕ ಸಮೀಕ್ಷೆಯಿಂದ ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ

CM Siddaramaiah

ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು. ಜಾತಿ ಸಾಮಾಜಿಕ […]

ವಾಟರ್ ಬಾಟಲಿ ನೀರು ಅಸುರಕ್ಷಿತ! ಹೊರಬಿತ್ತು ಭಯಾನಕ ಸತ್ಯ… ಕೊಡಗಿನ ಬ್ರ್ಯಾಂಡ್ ಹೆಸರು ಸಹ ಬಹಿರಂಗ

water Bottle

ನಾವು ಸೇವಿಸುವ ಆಹಾರಗಳಲ್ಲಿ ಕಲಬೆರಕೆ, ವಿಷಾಂಶ ಹಾಗೂ ಕ್ಯಾನ್ಸರ್ ಕಾರಕ ಅಂಶಗಳ ಬಯಲಾದ ಬೆನ್ನಲ್ಲೇ ಕುಡಿಯುವ ನೀರಿನ (water) ಬಾಟಲಿಯ ಬಹಳಷ್ಟು ಬ್ರ್ಯಾಂಡ್‌ಗಳು ಅಸುರಕ್ಷಿತ ಎಂಬ ಶಾಕ್‌ ಸುದ್ದಿಯನ್ನು ಸರಕಾರವೇ ನೀಡಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ರಾಜ್ಯದ ವಿವಿಧೆಡೆ ಬಾಟಲಿ ಕುಡಿಯುವ ನೀರಿನ 255 ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದೆ. ಸಾಕಷ್ಟು ಕಂಪನಿಗಳ ವಾಟರ್ ಬಾಟಲ್ (Water Bottle) ಅಸುರಕ್ಷಿತ ಮತ್ತು ಕಳಪೆ ಗುಣಮಟ್ಟದಿಂದ ಕೂಡಿರುವುದು ಸಾಬೀತಾಗಿದೆ. ಆಹಾರ ಸುರಕ್ಷತೆ ಮತ್ತು ಔಷಧ […]

2nd PUC Result: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

2nd PUC Result

ದ್ವಿತೀಯ ಪಿಯುಸಿ (2nd PUC) ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಿದ್ದಾರೆ. ವೆಬ್​​ಸೈಟ್​ನಲ್ಲಿಯೂ ಫಲಿತಾಂಶ ಲಭ್ಯವಿದೆ. ಉಡುಪಿ ಜಿಲ್ಲೆ ಈ ಬಾರಿ ಪ್ರಥಮ ಸ್ಥಾನ ಪಡೆದರೆ ಕೊಡಗು ಜಿಲ್ಲೆ 4ನೇ ಸ್ಥಾನ (ಶೇ.83.84) ಹಾಗೂ ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಮಧ್ಯಾಹ್ನ 12.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಿದ್ದಾರೆ. karresults.nic.in ಹಾಗೂ […]

ವಿಶೇಷ ಕಾರ್ಯಕ್ರಮದ ಮೂಲಕ ಅನಾಥ ಹೆಣ್ಣು ಮಕ್ಕಳಿಗೆ ನೆರವು

special program

ಬೆಂಗಳೂರು: ನೆಲೆ ಫೌಂಡೇಶನ್ನಲ್ಲಿ ನೆಲೆಸಿರುವ 50 ಹೆಣ್ಣು ಮಕ್ಕಳಿಗೆ (Girls) ನೆರವಾಗುವ ನಿಟ್ಟಿನಲ್ಲಿ ವಿಜಯನಗರದ ಕಾಸಿಯಾ ಭವನದಲ್ಲಿ ಶೈನಿಂಗ್ ಸ್ಟಾರ್ಸ್ ವಿಶೇಷ ಕಾರ್ಯಕ್ರಮವನ್ನು (program) ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳ ಫ್ಯಾಷನ್ ಶೋ, ತಾಯಿ ಮಗುವಿನ ರ್ಯಾಂಪ್ ವಾಕ್, ಮಹಿಳೆಯರ ವಿಭಿನ್ನ ರೀತಿಯ ಸ್ಯಾರಿ ರ್ಯಾಂಪ್ ವಾಕ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಮೂಲಕ ಸಂಗ್ರಹವಾಗುವ ಹಣವನ್ನು ಫೌಂಡೇಶನ್ ಗೆ ನೀಡಲಾಗುತ್ತದೆ. ಅನ್ಷುಲಾ ಲೇಡೀಸ್ ಎಂಟ್ರಿಪ್ರಿನರ್ ಕ್ಲಬ್ ಮತ್ತು ಮಧುರಾ ವುಮೆನ್ಸ್ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ […]

ಯುಗಾದಿ, ರಂಜಾನ್ ಹಬ್ಬಕ್ಕೆ KSRTC 2 ಸಾವಿರ ವಿಶೇಷ ಬಸ್‌: ಮುಂಗಡ ಬುಕ್ಕಿಂಗ್‌ಗೆ ಡಿಸ್ಕೌಂಟ್‌

KSRTC bus

ಮಾರ್ಚ್‌ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್‌ 31 ರಂದು ರಂಜಾನ್ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ (KSRTC) ವತಿಯಿಂದ 2000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್‌ 28, 29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿವೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟಣೆ ನೀಡಿದೆ. ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಸಂಚಾರ ನಡೆಸುತ್ತಾರೆ. ಇವರ […]