ಬೆಂಗಳೂರು : ಕೊಡಗು ಜಿಲ್ಲೆಯ ರೈತರು ಅನುಭವಿಸುತ್ತಿರುವ ಸಿ ಮತ್ತು ಡಿ ಜಾಗದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಶಾಸಕ ಡಾ. ಮಂತರ್ ಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದ ಶಾಸಕರು, ಜಿಲ್ಲೆಯ ರೈತರು ಅನುಭವಿಸುತ್ತಿರುವ ಸಂಕಷ್ಟಗಳ ಬಗ್ಗೆ ವಿವರಿಸಿದರು. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಶಾಸಕರು, ಜಿಲ್ಲೆಯ ರೈತರು ಕೃಷಿಕರ ಆತಂಕವನ್ನು ಬಗೆಹರಿಸಲು ನಾನು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೆಲವೊಂದು ಪ್ರಕರಣಗಳು ನ್ಯಾಯಾಲಯದಲ್ಲಿರುವುದರಿಂದ ಕಾನೂನಾತ್ಮಕವಾಗಿಯೇ ಬಗೆಹರಿಸಬೇಕಾಗುತ್ತದೆ. ಈ ಎಲ್ಲಾ ಅಂಶಗಳನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಕೊಟ್ಟಿದ್ದೇನೆ. ಸಮಸ್ಯೆ ಶೀಘ್ರವೇ ಬಗೆಹರಿಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಇದರ ಜೊತೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.



