ಕರಾಟೆ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು.ಕಾಲೇಜಿನ ಪ್ರಥಮ ಪಿ.ಯು.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಡಿಂಪಲ್ . ಎಸ್. ವಿರಾಜಪೇಟೆ ತಾಲ್ಲೂಕು ಶಾಖೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನೀಡುವ ಪ್ರತಿಭಾರತ್ನ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಈ ವಿದ್ಯಾರ್ಥಿನಿ ಅರಕಲಗೂಡು ಓಪನ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಫ್ -2025 ರಲ್ಲಿ ಪ್ರಥಮ ಸ್ಥಾನ , ಅಸ್ಮಿತಾ ಖೇಲೋ ಇಂಡಿಯಾ -2025 ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟವನ್ನು ಪ್ರತಿನಿಧಿಸಿದ್ದಾರೆ.ಹೀಗೆ ಕರಾಟೆ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವಾರು ಸ್ಪರ್ಧೆಯಲ್ಲಿ ಬಹುಮಾನವನ್ನು ಗಳಿಸಿರುತ್ತಾರೆ. ಈ ವಿದ್ಯಾರ್ಥಿನಿಯನ್ನು ಸಿ.ಐ.ಪಿ.ಯು.ಪ್ರಾಂಶುಪಾಲೆ ಡಾ.ರೋಹಿಣಿ ತಿಮ್ಮಯ್ಯ ಮತ್ತು ಸಿ.ಐ.ಪಿ.ಯು.ಕುಟುಂಬದ ಸದಸ್ಯರು ಅಭಿನಂದಿಸಿದ್ದರು.



