ಸೀಳು ತುಟಿ, ಸೀಳು ಅಂಗುಳ, ಮ್ಯಾಕ್ಸಿಲೊಫೇಶಿಯಲ್, ಕ್ರೇನಿಯೋಫೇಶಿಯಲ್ ವಿರೂಪಗಳ ತಪಾಸಣಾ ಶಿಬಿರ ಜೂ.28ಕ್ಕೆ

Share this post :

ಮಡಿಕೇರಿ : ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಇಂಗಾ ಹೆಲ್ತ್ ಪೌಂಡೇಶನ್, ಬೆಂಗಳೂರು ಇವರ ವತಿಯಿಂದ ಜೂನ್ ೨೮ ರಂದು ಬೆಳಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೀಳು ತುಟಿ, ಸೀಳು ಅಂಗುಳ, ಮ್ಯಾಕ್ಸಿಲೊಫೇಶಿಯಲ್ ಮತ್ತು ಕ್ರೇನಿಯೋಫೇಶಿಯಲ್ ವಿರೂಪಗಳ ತಪಾಸಣಾ ಶಿಬಿರ ನಡೆಯಲಿದೆ.
ಈ ಶಿಬಿರದಲ್ಲಿ ೧೮ ವರ್ಷದ ಒಳಗಿನ ಸೀಳು ತುಟಿ, ಸೀಳು ಅಂಗುಳ, ಮ್ಯಾಕ್ಸಿಲೊಫೇಶಿಯಲ್ ಮತ್ತು ಕ್ರೇನಿಯೊಫೇಶಿಯಲ್ ವಿರೂಪ ಇರುವ ಮಕ್ಕಳನ್ನು ಪರೀಕ್ಷಿಸಿ ಅವಶ್ಯಕತೆ ಇದ್ದಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಕೋರಿದ್ದಾರೆ.

coorg buzz
coorg buzz