ಮಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಚರ್ಚೆಯಲ್ಲಿದೆ. ಸರ್ಕಾರದ ಎರಡೂವರೆ ವರ್ಷ ಅವಧಿ ಪೂರ್ಣಗೊಂಡ ಬಳಿಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿ ನಡೆಯುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಮುಂದಿನ 05 ವರ್ಷ ನಾನೇ ಮುಖ್ಯಮಂತ್ರಿ ಅಂತ ಎಲ್ಲಾ ಕಡೆ ಹೇಳುತ್ತಾ ಬರುತ್ತಿದ್ದರು ಸಿದ್ದರಾಮಯ್ಯ. ಆದರೆ ಇವತ್ತು ಮಂಗಳೂರಿನಲ್ಲಿ ಅವರಿಂದ ಬಂದ ಪ್ರತಿಕ್ರಿಯೆ ಅಚ್ಚರಿ ಹುಟ್ಟಿಸಿದೆ. ಮುಂದೆ ನೀವೇ ಮುಖ್ಯಮಂತ್ರಿಯಾಗಿರುತ್ತೀರಾ ಅಂತ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ʼಹೈಕಮಾಂಟ್ ನಿರ್ಧಾರ ಮಾಡುತ್ತೆʼ ಅಂತ ಹೇಳಿ ಹೊರಟರು.



