ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿವಿಧ ಜಿಲ್ಲೆಗಳ ಶಾಸಕರು, ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿದರು. ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಿಎಂ, ಮಳೆ ಹಾನಿ, ಕೈಗೊಂಡಿರುವ ಪರಿಹಾರ ಕ್ರಮ, ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಚರ್ಚಿಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಬೋಸರಾಜ್, ಶಾಸಕರಾದ ಎ.ಎಸ್. ಪೊನ್ನಣ್ಣ, ಮಂತರ್ ಗೌಡ ಇದ್ದರು.
