ಮಡಿಕೇರಿ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಆಶ್ರಯದೊಂದಿಗೆ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯಗೌಡ ಸಂಸ್ಮರಣಾ ಕಾರ್ಯಕ್ರಮ ಅಕ್ಟೋಬರ್ 31 ರಂದು ನಡೆಯಲಿದೆ. ಬೆಳಗ್ಗೆ 9.30ಕ್ಕೆ ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ಮಾರಕ ಬಳಿ ಗೌರವ ನಮನ ಹಾಗೂ ಕೋಟೆ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಬೋಸರಾಜು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಇತಿಹಾಸ ಪ್ರಾಧ್ಯಾಪಕ ನಂಗಾರು ನಿಂಗರಾಜು, ಶಾಸಕರಾದ ಮಂತರ್‌ಗೌಡ, ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಎಂಎಲ್‌ಸಿ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಮುಂತಾದವರು ಪಾಲ್ಗೊಳ್ಳಲಿದ್ದಾರೆ.



