ದಸರಾ ಆನೆ ಅರ್ಜುನನ ಎರಡನೇ ವರ್ಷದ ಸ್ಮರಣೆ – ರಮೇಶ್‌ ಉತ್ತಪ್ಪ ರಚಿತ ಎರಡು ಕೃತಿಗಳ ಲೋಕಾರ್ಪಣೆ

Share this post :

ಮೈಸೂರು : ದಸರಾ ಆನೆ ಅರ್ಜುನನ ಎರಡನೇ ವರ್ಷದ ನೆನಪು ಹಾಗೂ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪ ಬರೆದಿರುವ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಿತು.
ಮೈಸೂರು ಕಲ್ಚರಲ್ ಅಸೋಸಿಯೇಷನ್ ಹಾಗೂ ಕಲಿಸು ಫೌಂಡೇಷನ್ ವತಿಯಿಂದ ನಗರದ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಎರಡು ಕೃತಿ ಲೋಕಾರ್ಪಣೆ ಮಾಡಿದರು.
ಐತಿಚಂಡ ರಮೇಶ್ ಉತ್ತಪ್ಪ ಅವರ 40ನೇ ಕೃತಿ ಅರ್ಜುನ ಬಲಿಯಾದ ಘಟನೆಯ ತನಿಖಾ ವರದಿಯನ್ನು ಒಳಗೊಂಡ ‘‘ಸಾವಿನ ಸತ್ಯ-ಅರ್ಜುನ ನಿನ್ನ ಕೊಂದದ್ದು ಮದಗಜವಲ್ಲ ಪಾಪಿ ಮನುಷ್ಯ” ಹಾಗೂ ‘‘ದಸರಾ ಆನೆಗಳು- ಭೀಮ ಹಾಗೂ ಇತರರು” ಕೃತಿ ಬಿಡುಗಡೆಯಾಯಿತು.
ಮಾಜಿ ಸಂಸದ ಪ್ರತಾಪ್‌ ಸಿಂಹ, ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜು ಗೌಡ, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೆ.ಬಿ.ಲಿಂಗರಾಜು, ಪಶು ವೈದ್ಯಾಧಿಕಾರಿ ಡಾ. ಮುಜೀಬ್ ಉರ್ ರೆಹಮಾನ್ ಮುಂತಾದವರಿದ್ದರು.

coorg buzz
coorg buzz