ವಿರಾಜಪೇಟೆ : ಮೈತಾಡಿ ಗ್ರಾಮದಲ್ಲಿ ಇತ್ತೀಚೆಗೆ ಗಬ್ಬದ ಹಸು ಕೊಂದ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಂಡಂಗೇರಿಯ ಮೊಹಮ್ಮದ್ ಆಶಿಕ್(22), ಶಾಹಿದ್(25), ಹ್ಯಾರೀಸ್ (34) ಬಂಧಿತರು. ಮೈತಾಡಿ ಗ್ರಾಮದ ಬೊಳ್ಳಪಂಡ ಎಂ.ಭೀಮಯ್ಯ ಎಂಬವರ ಹಸುವನ್ನು ಕದ್ದೊಯ್ದು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 303(1) 22 & 4, 5, 12 The Karnataka Prevention of Slaughter & Preservation of cattle Act-2020 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಪತ್ತೆಗೆ ಡಿವೈಎಸ್ಪಿ ಮಹೇಶ್ ಕುಮಾರ್.ಎಸ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಕಾರ್ಯಾಚರಣೆ ನಡೆಸಿದ ತಂಡ ಮೂವರನ್ನು ಬಂಧಿಸಿದೆ. ಕಾರ್ಯಾಚರಣೆಯಲ್ಲಿ ಉತ್ತಮ ರೀತಿ ಕಾರ್ಯನಿರ್ವಹಿಸಿದ ಪೊಲೀಸರ ತಂಡಕ್ಕೆ ಎಸ್ಪಿ ಕೆ. ರಾಮರಾಜನ್ ಅಭಿನಂದಿಸಿದ್ದಾರೆ.



