ಸುಂಟಿಕೊಪ್ಪ : ಪತ್ನಿಯನ್ನು ಪತಿ ಹೊಡೆದು ಹತ್ಯೆಗೈದಿರುವ ಘಟನೆ ಕೊಡಗರಹಳ್ಳಿ ಬಳಿಯ ಅಂದಗೋವೆಯಲ್ಲಿ ನಡೆದಿದೆ.
ಲತಾ(45) ಪತಿಯಿಂದ ಹತ್ಯೆಯಾದ ಮಹಿಳೆ. ಅಂದಗೋವೆಯ ಎಸ್ಟೇಟ್ ಒಂದರ ಲೈನ್‌ಮನೆಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಮುತ್ತ(50) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ರಾತ್ರಿ ಗಂಡ ಹಂಡತಿ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿ ಲತಾ ಮೇಲೆ ಮುತ್ತ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಘಟನೆ ವಿಚಾರ ತಿಳಿದು ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಬಾರಿಕೆ ದಿನೇಶ್, ಕುಶಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



