ಗೋಣಿಕೊಪ್ಪ : ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಕಾಮೆಂಟ್ ಹಾಕಿದ ಪ್ರಕರಣ ಸಂಬಂಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗುತ್ತಿದೆ.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ನೇತೃತ್ವದಲ್ಲಿ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕೆಟ್ಟದಾಗಿ ಕಾಮೆಂಟ್ ಹಾಕಿರುವ 05 ಮಂದಿಯ ವಿರುದ್ಧ ದೂರು ನೀಡಿ ಕ್ರಮಕ್ಕೆ ಆಗ್ರಹಿಸಲಾಗಿದೆ. ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಂಡ ದ್ಯಾನ್ ದೇವಯ್ಯ, ಗೋಣಿಕೊಪ್ಪ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಎನ್.ಎಲ್. ಜೀವಿತ್, ಪ್ರಮುಖರಾದ ಅನ್ಸರ್, ಸಜೀರ್, ಸಿ.ಕೆ.ಪೊನ್ನಣ್ಣ ಹಾಜರಿದ್ದರು.



