ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಭೂಮಿಪೂಜೆ

Share this post :

ಮಡಿಕೇರಿ : ನಗರದ ಹೊರವಲಯದಲ್ಲಿರುವ ಕರ್ಣಂಗೇರಿ ಬಳಿ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ ಇತರರು ಇದ್ದರು.
ಬಳಿಕ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ನೂತನವಾಗಿ ನಿರ್ಮಿಸಿರುವ ತಾಲ್ಲೂಕು ಪಂಚಾಯತಿ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟಿಸಿದರು.
ನಂತರ ಮಾತನಾಡಿದ ಸಚಿವರು ರಾಜ್ಯದ ೧೯ ಕಡೆಗಳಲ್ಲಿ ‘ಪ್ರಜಾಸೌಧ’ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಹಾಗೆಯೇ ತಾಲ್ಲೂಕು ಪಂಚಾಯಿತಿ ಉತ್ತಮ ಕಟ್ಟಡ ನಿರ್ಮಾಣಕ್ಕೂ ಸರ್ಕಾರ ಒತ್ತು ನೀಡಿದೆ ಎಂದು ಹೇಳಿದರು.

coorg buzz
WhatsApp Image 2026-08-11 at 16.11.22