ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ

Share this post :

ಮಡಿಕೇರಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ವತಿಯಿಂದ‌ ‘ನನ್ನ ಕಲ್ಪನೆಯ ಸ್ವಚ್ಚ ಕೊಡಗು’ ಎಂಬ ವಿಷಯದಲ್ಲಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಶಾಲಾ ಮಕ್ಕಳಿಗೆ ಆಯೋಜಿಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಐದರಿಂದ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಪ್ರಬಂಧ ಪ್ರತಿಯನ್ನು ಕೈ ಬರಹ ಅಥವಾ ಡಿಟಿಪಿ ಮಾಡಿ ಕಳುಹಿಸಬೇಕು. ಕಡ್ಡಾಯವಾಗಿ ಕನ್ನಡದಲ್ಲಿಯೇ ಬರೆಯಬೇಕು. ಪ್ರಬಂಧವು 200 ವಾಕ್ಯ ಮೀರಬಾರದು. ಯಾವುದೇ ರೀತಿಯ ಕೃತಕ ಬುದ್ಧಿ ಮತ್ತೆಯನ್ನು(ಎಐ) ಉಪಯೋಗಿಸುವಂತಿಲ್ಲ.
ಪ್ರಬಂಧವನ್ನು ಚಾಮೆರ ದಿನೇಶ್ ಬೆಳ್ಯಪ್ಪ ಕೊಡಗು ಜಿಲ್ಲಾ ಅಧ್ಯಕ್ಷರು, ಕರಾಮಸಾಪ(ರಿ), ಅಪ್ಪಯ್ಯಸ್ವಾಮಿ ರಸ್ತೆ, ವಿರಾಜಪೇಟೆ – 57121 ಈ ವಿಳಾಸಕ್ಕೆ 30/11/2025ರ ಒಳಗೆ ತಲುಪುವಂತೆ ಕಳುಹಿಸಬೇಕು. ವಿದ್ಯಾರ್ಥಿಯ ಹೆಸರು, ತರಗತಿ, ವ್ಯಾಸಂಗ ಮಾಡುತ್ತಿರುವ ಶಾಲೆ, ಸಂಪರ್ಕ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಭಾಗವಹಿಸಿದ ಎಲ್ಲರಿಗೂ ಅಭಿನಂದನಾ ಪತ್ರ ನೀಡಲಾಗುವುದು. ಆಯ್ದ ಪ್ರಬಂಧವನ್ನು ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟಿಸಲಾಗುವುದು. ಆಯ್ದ ಸಲಹೆಗಳನ್ನು ಬರೆದವರ ಹೆಸರಿನೊಂದಿಗೆ ಜಿಲ್ಲಾಡಳಿತಕ್ಕೆ ಸಲ್ಲಿಸಿ ಸ್ವಚ್ಚ ಕೊಡಗು ನಿರ್ಮಾಣಕ್ಕೆ ಕೈ ಜೋಡಿಸಲಾಗುವುದು. ಜಿಲ್ಲೆಯಾದ್ಯಂತ ಇರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಬಹುದೆಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕರಿನೆರವಂಡ ಡ್ಯಾನಿ ಕುಶಾಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

,

coorg buzz
coorg buzz