ಮಡಿಕೇರಿ : ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಎನ್ಆರ್ಎಲ್ಎಂ, ಸಂಜೀವಿನಿ ಯೋಜನೆಯಡಿ ಗ್ರಾಮೀಣ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಬಲವರ್ಧನೆಗಾಗಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ಜನವರಿ, 27 ಮತ್ತು 28 ರಂದು ನಗರದ ಗಾಂಧಿ ಮೈದಾನದ ಆವರಣದಲ್ಲಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.



