ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವವು ನವೆಂಬರ್ 22 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಕರ್ನಾಟಕ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಮೈಸೂರು ವಿಭಾಗ ಕರ್ನಾಟಕ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಷ ಅಮರನಾಥ್, ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮೊಹರೂಜ್ ಖಾನ್, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷರಾದ ಸಿ.ಎಸ್ ಅರುಣ್ ಮಾಚಯ್ಯ, ಕೊಡಗು ಜಿಲ್ಲೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಮಡಿಕೇರಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್‍ದಾಸ್, ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಾಂತರಾಜು, ಕುಶಾಲನಗರ ತಾಲ್ಲೂಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ, ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಪಿ.ವಿ ಜಾನ್ಸನ್, ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಆಹಾರ ಇಲಾಖೆ ಜಂಟಿ ನಿರ್ದೇಶಕರಾದ ಮಂಟೆಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಡಿ.ಆರ್. ಪ್ರಸನ್ನ ಕುಮಾರ್, ಮಡಿಕೇರಿ ಘಟಕ,ಕ.ರಾ.ರ.ಸಾ ನಿಗಮ, ಪುತ್ತೂರು ವಿಭಾಗ ವ್ಯವಸ್ಥಾಪಕರಾದ ಎ. ಈರಶಪ್ಪ, ಸೆಸ್ಕ್ ಕಾರ್ಯಪಾಲಕ ಅಭಿಯಂತರರಾದ ರಾಮಚಂದ್ರ, ಜಿಲ್ಲಾ ಉದ್ಯೋಗ ವಿನಿಯಮ ಕೇಂದ್ರ ಜಿಲ್ಲಾ ಉದ್ಯೋಗಾಧಿಕಾರಿ ಮಂಜುನಾಥ ಸಿ.ಬಿ. ಇತರರು ಪಾಲ್ಗೊಳ್ಳಲಿದ್ದಾರೆ.



