ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ ಹಾಗೂ ರ‍್ವತ್ತೋಕ್ಲು, ಬಿಳಿಗೇರಿ ಮತ್ತು ಕುಂಬಳದಾಳು ಪೆರಾತ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ೩೫ನೇ ವರ್ಷದ ಜಿಲ್ಲಾ ಮಟ್ಟದ ಕ್ರೀಡಾಕೂಟ ಏ.೬ ರಂದು ಬಿಳಿಗೇರಿ ಗ್ರಾಮದಲ್ಲಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದ ಪೆರಾತ ಯುವಕ ಸಂಘದ ಮಾಜಿ ಅಧ್ಯಕ್ಷ ಹಾಗೂ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ ದಿಲೀಪ್, ಸಂಘದ ಮೈದಾನದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದರು.
ಅಂದು ಬೆಳಿಗ್ಗೆ ೯ ಗಂಟೆಗೆ ಸಂಘದ ಅಧ್ಯಕ್ಷ ಬಾಳಾಡಿ ಪ್ರತಾಪ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕ್ರೀಡಾಕೂಟವನ್ನು ಮೇಕೇರಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸಿ.ಡಿ. ಮಮತ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯ ಚಕ್ರವರ್ತಿ, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ದಕ್ಷಿಣ ಕನ್ನಡ ಕೊಡಗು ಗೌಡಾಭಿವೃದ್ಧಿ ಸಮಿತಿ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ, ಮೇಕೇರಿ ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಬೆಟ್ಟಗೇರಿ ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಜನನಿ ಮತ್ತು ಜಾಗೃತಿ ಸ್ವಸಹಾಯ ಸಂಘದ ಅಧ್ಯಕ್ಷರು ಪಾಲ್ಗೊಳ್ಳುವುದಾಗಿ ತಿಳಿಸಿದರು.
ಅಂದು ಸಂಜೆ ೪.೩೦ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಅತಿಥಿಗಳಾಗಿ ಬಿಳಿಗೇರಿ ಪ್ಲಾಂಟರ‍್ಸ್ ಕ್ಲಬ್ ಅಧ್ಯಕ್ಷ ಕೊಡೆಕಲ್ಲು ಅರವಿಂದ್, ಪೆರಾತ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ಬಾಳಾಡಿ ಅಶೋಕ್ ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿರುವರು.
::: ಸನ್ಮಾನ :::
ಕಾರ್ಯಕ್ರಮದಲ್ಲಿ ಕರ್ನಾಟಕ ಅರೆಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ತುಂತ್ತಜೆ ವೆಂಕಟೇಶ್ (ಗಣೇಶ್) ಹಾಗೂ ೨೦೨೪ರ ಗಣರಾಜ್ಯೋತ್ಸವದ ನ್ಯಾಷನಲ್ ಪೆರೆಡ್‌ನಲ್ಲಿ ಭಾಗವಹಿಸಿ ಕರ್ನಾಟಕ ಮತ್ತು ಗೋವಾ ರೆಜಿಮೆಂಟ್ ನಲ್ಲಿ ಪ್ರತಿನಿಧಿಸಿದ ಬಾಳಡಿ ಶ್ರೇಯ ಪ್ರತಾಪ್ ಹಾಗೂ ಕ್ರೀಡಾಕೂಟಕ್ಕೆ ಸಹಕಾರ ನೀಡಿದ ದಾನಿಗಳನ್ನು ಸನ್ಮಾನಿಸಲಾಗುವುದು. ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.
::: ಕ್ರೀಡಾಕೂಟದ ವಿವರ :::
ಸಾರ್ವಜನಿಕರ, ಮಕ್ಕಳ ಆಟೋಟ ಸ್ಪರ್ಧೆಗಳು, ಪುರುಷರ ವಾಲಿಬಾಲ್, ಪುರುಷರ ಹಗ್ಗಜಗ್ಗಾಟ, ಮಹಿಳೆಯರ ಹಗ್ಗಜಗ್ಗಾಟ, ತೆಂಗಿನ ಕಾಯಿಗೆ ಗುಂಡು ಹೊಡೆಯುವ (ತೋಟದ ಕೋವಿ, ಟೂಟ್) ಸ್ಪರ್ಧೆಗಳು ಸಂಭ್ರಮದಿAದ ನಡೆಯಲಿದೆ.
ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರು ಏ.೬ ರಂದು ಬೆಳಿಗ್ಗೆ ೧೦.೩೦ ಗಂಟೆಯೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು, ನಂತರ ಬಂದ ತಂಡಗಳಿಗೆ ಅವಕಾಶ ಇರುವುದಿಲ್ಲ. ಹೆಸರು ನೋಂದಾಯಿಸುವವರು ಕಡ್ಯದ ಭರತ್ ೯೪೮೦೨೨೦೦೫೫, ಬಾಳಾಡಿ ಪ್ರತಾಪ್ ೯೪೮೦೪೨೮೬೬೦ ಹಾಗೂ ತುಂತಜೆ ಕುಶನ್ (ಕಾಶಿ) ೯೪೮೨೯೭೯೩೮೮ ಸಂಪರ್ಕಿಸಬಹುದಾಗಿದೆ. ಕೊಡಗು ಜಿಲ್ಲೆಯ ಕ್ರೀಡಾಪಟುಗಳಿಗೆ ಮಾತ್ರ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಅವಕಾಶವಿರುತ್ತದೆ ಎಂದು ಬಾಳಾಡಿ ದಿಲೀಪ್ ತಿಳಿಸಿದರು.
ಕ್ರೀಡಾಕೂಟಕ್ಕೆ ಹಲವು ದಾನಿಗಳ ಸಹಕಾರ ಪಡೆಯಲಾಗಿದ್ದು, ಊಟದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪೆರಾತ ಫ್ರೆಂಡ್ಸ್ ಯುವಕ ಸಂಘದ ಅಧ್ಯಕ್ಷ ಬಾಳಾಡಿ ಪ್ರತಾಪ್, ಉಪಾಧ್ಯಕ್ಷ ಕಡ್ಯದ ಕಿಶನ್, ಖಜಾಂಚಿ ಕಡ್ಯದ ಭರತ್ ಹಾಗೂ ಕಾರ್ಯದರ್ಶಿ ತುಂತಜೆ ಕುಶನ್ ಉಪಸ್ಥಿತರಿದ್ದರು.