ಮೇ 16 ರಿಂದ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ

summer camp

Share this post :

ಮಡಿಕೇರಿ:- ಪ್ರಸಕ್ತ (2025-26) ಸಾಲಿನಲ್ಲಿ ಜಿಲ್ಲಾ ಮಟ್ಟದ ಉಚಿತ ಬೇಸಿಗೆ ಶಿಬಿರವು ಕೊಡಗು ಜಿಲ್ಲಾ ಬಾಲಭವನ ಸಮಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಮೇ, 16 ರಿಂದ 30 ರವರೆಗೆ “ಯುವಜನ ಕ್ರೀಡಾ ಸಬಲೀಕರಣ ಇಲಾಖಾ ವ್ಯಾಪ್ತಿಯ ಯೋಗ ತರಭೇತಿಯ ಸಭಾಂಗಣ”ದಲ್ಲಿ ನಡೆಯಲಿದೆ.

ಈ ಶಿಬಿರದಲ್ಲಿ 05 ರಿಂದ 16 ವರ್ಷದ ಮಕ್ಕಳು ಭಾಗವಹಿಸಿ ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಯೋಗ, ಜಾನಪದ ನೃತ್ಯ, ಸುಗಮ ಸಂಗೀತ, ಸಮೂಹ ನೃತ್ಯ, ಚಿತ್ರಕಲೆ, ನಾಟಕ ಹಾಗೂ ಕರಕುಶಲ ಕಲೆ ಹಾಗೂ ಇನ್ನಿತರ ಸ್ಥಳೀಯ ಚಟುವಟಿಕೆಗಳನ್ನು ಶಿಬಿರದಲ್ಲಿ ಹಮ್ಮಿಕೊಳ್ಳಲಾಗುವುದು.

ಆದ್ದರಿಂದ ಈ ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ಮೇ, 16 ರೊಳಗೆ ದೂ.ಸಂ.6363285685, 8618861505, 9108810782, 9741797043 ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ. ಕಚೇರಿಯಲ್ಲಿ ಹೆಸರು ನೋಂದಾಯಿಸಿದ ಮಕ್ಕಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.