ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರಿಗೆ ಬಿಸಿ ಮುಟ್ಟಿಸಿದ ನ್ಯಾಯಾಲಯ – ಕೋರ್ಟ್‌ ವಿಧಿಸಿದ ದಂಡವೆಷ್ಟು ಗೊತ್ತಾ..?

Share this post :

ಕುಶಾಲನಗರ : ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ(Drunk and Drive) ಅಂತ ಸರ್ಕಾರ, ಪೊಲೀಸ್‌ ಇಲಾಖೆ ಅದೆಷ್ಟೇ ಜಾಗೃತಿ ಮೂಡಿಸುತ್ತಿದ್ದರೂ ಜನ ಮಾತ್ರ ಜಾಗೃತರಾಗುವಂತೆ ಕಾಣುತ್ತಿಲ್ಲ. ಪ್ರತಿ ದಿನ ಡ್ರಿಂಕ್‌ ಅಂಡ್‌ ಡ್ರೈವ್‌ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇರುತ್ತದೆ.
ಇದೀಗ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯ(court) ದಂಡ ವಿಧಿಸಿ ಬಿಸಿಮುಟ್ಟಿಸಿದೆ. ದಿನಾಂಕ 18/03/2025 ರಂದು ಕುಶಾಲನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪ ಗೇಟ್ ಬಳಿ ತಪಾಸಣೆ ವೇಳೆ ಕಿರಣ್, ಗಣೇಶ್ ಎಚ್.ಆರ್, ಶಂಭು, ಕುಮಾರ, ವೆಂಕಟೇಶ್ ಎಂಬವರು ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿರುವುದು ದೃಢಪಟ್ಟಿತ್ತು. ಪ್ರಕರಣದ ವಿಚಾರಣೆ ನಡೆಸಿದ ಕುಶಾಲನಗರ ಸಿವಿಲ್ & ಜೆ.ಎಂ.ಎಫ್.ಸಿ ನ್ಯಾಯಾಲಯ ತಲಾ ೧೦ ಸಾವಿರ ರೂಪಾಯಿಯಂತೆ ಐವತ್ತು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.