ವಿವೇಕಾನಂದ ಜನ್ಮ ದಿನ ಪ್ರಯುಕ್ತ ಪ್ರಬಂಧ ಸ್ಪರ್ಧೆ

Share this post :

ಕುಶಾಲನಗರ : ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಪ್ರಯುಕ್ತ ಕೂಡುಮಂಗಳೂರು ಟುಲೀಪ್ ಟ್ರಸ್ಟ್ ವತಿಯಿಂದ ಗುಮ್ಮನಕೊಲ್ಲಿ ಮೂಕಾಂಬಿಕಾ ವಿದ್ಯಾಸಂಸ್ಥೆಯಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.
ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪಾರಿತೋಷಕ, ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಟುಲೀಪ್ ಟ್ರಸ್ಟ್ ಅಧ್ಯಕ್ಷ ಚಂದನ್, ವಿದ್ಯಾರ್ಥಿಗಳು ಯಾವುದೇ ಕ್ಲಿಷ್ಟಕರ ಸನ್ನಿವೇಶದಲ್ಲೂ ಧೃತಿಗೆಡದೆ, ಬಂದಂತಹ ಯಾವುದೇ ಸಮಸ್ಯೆಯನ್ನು ಎದುರಿಸಿ ಮುಂದೆ ಸಾಗಬೇಕು. ಸೋಲನ್ನು ಮೆಟ್ಟಿನಿಂತು ಹೊಸ ಚೈತನ್ಯವನ್ನು ಕಾಣಬೇಕು ಎಂದರು.
ಕಾರ್ಯಕ್ರಮದಲ್ಲಿ ಮೂಕಾಂಬಿಕಾ ಕಾಲೇಜಿನ ಪ್ರಾಂಶುಪಾಲ ಪ್ರಸನ್ನ, ಪ್ರೌಢಶಾಲೆಯ ಮೂಖ್ಯೋಪಾಧ್ಯಾಯ ಸುರೇಶ್, ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು

coorg buzz
coorg buzz