ಬೆಂಗಳೂರು : ಅತ್ಯಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಬೇಲ್ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ(ಆ.01) ತೀರ್ಪು ಪ್ರಕಟಿಸಲಿದೆ. ವಿಚಾರಣೆ ಮುಕ್ತಾಯವಾಗಿ ಜುಲೈ 30ರಂದು ತೀರ್ಪು ಪ್ರಕಟವಾಗಬೇಕಿತ್ತು. ಆದರೆ ಕೆಲವು ಸ್ಪಷ್ಟೀಕರಣ ಬೇಕಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆಗಸ್ಟ್ 1ಕ್ಕೆ ತೀರ್ಪು ಕಾಯ್ದಿರಿಸಿದ್ದಾರೆ.
ಸರ್ಕಾರದ ಪರ ಎಪಿಪಿ ಜಗದೀಶ್, ಅಶೋಕ್ ನಾಯಕ್ ವಾದ ಮಂಡಿಸಿದ್ದರು. ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ವಾದ ಮಂಡನೆ ಮಾಡಿದ್ದಾರೆ. ನಾಳೆ ಪ್ರಕಟವಾಗುವ ತೀರ್ಪಿನಲ್ಲಿ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದೆ.