ನಿವೃತ್ತ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ರವರಿಗೆ ಬೀಳ್ಕೊಡುಗೆ ಸಮಾರಂಭ

Share this post :

ವಿರಾಜಪೇಟೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕಿಯಾಗಿ ಹಾಗೂ ಕಾಲೇಜಿನ ಪ್ರಾಂಶುಪಾಲೆಯಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ರವರನ್ನು ಕಾಲೇಜಿನ ವತಿಯಿಂದ ಬೀಳ್ಕೊಡುಗೆಯನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚಿಲ್ಲವಂಡ ಕಾವೇರಪ್ಪರವರು ಮಾತನಾಡುತ್ತಾ ಪ್ರಾಂಶುಪಾಲರ ಶಿಸ್ತು ಹಾಗೂ ಕರ್ತವ್ಯ ನಿಷ್ಠೆ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿಯನ್ನು ಹಾಕಿದೆ. ಅವರ ಮಾರ್ಗದರ್ಶನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಂಡುಕೊಂಡಿದ್ದಾರೆ ಎಂದು ಶ್ಲಾಘನೆ ವ್ಯಕ್ತ ಪಡಿಸಿದರು.

ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಪ್ರಾಂಶುಪಾಲೆ ಜ್ಯೋತಿ ಪ್ರಕಾಶ್ ರವರು ತಮ್ಮ ಸುದೀರ್ಘವಾದ ವೃತ್ತಿ ಜೀವನದ ಅನುಭವಗಳನ್ನು ಹಂಚಿ ಕೊಳ್ಳುತ್ತಾ ಸಹೋದ್ಯೋಗಿಗಳ ಸಹಕಾರ ಹಾಗೂ ವಿದ್ಯಾರ್ಥಿಗಳ ಪ್ರೀತಿಯನ್ನು ಸ್ಮರಿಸಿ ಭಾವುಕರಾದರು. ಉಪನ್ಯಾಸಕ ರೈಮಂಡ್ ಸ್ವಾಗತಿಸಿ, ಉಪನ್ಯಾಸಕಿ ಚೈತ್ರ ನಿರೂಪಿಸಿ , ಉಪನ್ಯಾಸಕಿ ಗಾಯತ್ರಿ ವಂದಿಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲೆ ಜ್ಯೋತಿ ರವರ ತಾಯಿಯವರಾದ ನಾಮೇರ ಜಾನಕಿ ಕುಟ್ಟಪ್ಪ , ಕುಟುಂಭಸ್ತರು,ಸಹ ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

coorg buzz
coorg buzz